Get Updates
Get notified of breaking news, exclusive insights, and must-see stories!

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ವಿಧಿವಶ

ಬೆಂಗಳೂರು, ಸೆಪ್ಟೆಂಬರ್ 09: ಹಿರಿಯ ಪತ್ರಕರ್ತ, ಕನ್ನಡ ದಿನಪತ್ರಿಕೆ ಸಂಯುಕ್ತ ಕರ್ನಾಟಕದ ಸಂಪಾದಕ ವಸಂತ ನಾಡಿಗೇರ ನಿಧನ ಹೊಂದಿದರು. ವಿಜಯ ಕರ್ನಾಟಕ ಸೇರಿದಂತೆ ವಿವಿಧ ಕನ್ನಡ ದಿನ ಪತ್ರಿಕೆಗಳಲ್ಲಿ ಅವರು ಕಾರ್ಯ ನಿರ್ವಹಣೆ ಮಾಡಿದ್ದರು. ವಸಂತ ನಾಡಿಗೇರ ಹೃದಯಾಘಾತದಿಂದ ನಿಧನ ಹೊಂದಿದ್ದು, ಕನ್ನಡದ ಹಲವು ಪತ್ರಕರ್ತರು ಸಂತಾಪವನ್ನು ಸೂಚಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅನೇಕ ಪತ್ರಕರ್ತರು ಈ ಕುರಿತು ಪೋಸ್ಟ್ ಹಾಕಿದ್ದಾರೆ.

59 ವರ್ಷದ ವಸಂತ ನಾಡಿಗೇರ ಸೋಮವಾರ ಮುಂಜಾನೆ 3.15ರ ಸುಮಾರಿಗೆ ಬೆಂಗಳೂರಿನಲ್ಲಿ ವಿಧಿವಶರಾದರು. ಸುಮಾರು ಮೂರು ದಶಕಕ್ಕೂ ಅಧಿಕ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿದ್ದರು. ಪತ್ರಕರ್ತ ವಿಶ್ವೇಶ್ವರ ಭಟ್ ಸೇರಿದಂತೆ ಹಲವರು ವಸಂತ ನಾಡಿಗೇರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Kannada Journalist Vasanth Nadiger No More

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ವಸಂತ ನಾಡಿಗೇರ 80ರ ದಶಕದಲ್ಲಿ ಸಂಯುಕ್ತ ಕರ್ನಾಟಕ ದಿನ ಪತ್ರಿಕೆ ಮೂಲಕವೇ ವೃತ್ತಿ ಜೀವನ ಆರಂಭಿಸಿದ್ದರು. ಉಪ ಸಂಪಾದಕರಾಗಿ, ಸುದ್ದಿ ಸಂಪಾದಕರಾಗಿ, ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದರು. ಹಲವಾರು ಯುವ ಪತ್ರಕರ್ತರನ್ನು ಅವರು ತಿದ್ದಿ ಬೆಳೆಸಿದ್ದರು.

ವಸಂತ ನಾಡಿಗೇರ ಸುದ್ದಿಗಳಿಗೆ ಕೊಡುವ ಹೆಡ್‌ಲೈನ್ ಮೂಲಕವೇ ಪ್ರಸಿದ್ಧಿಯಾಗಿದ್ದರು. ಅವರ ಜೊತೆ ಕೆಲಸ ಮಾಡಿದ ಸಹೋದ್ಯೋಗಿಗಳು ಇದನ್ನು ಸದಾ ನೆನಪಿಸಿಕೊಳ್ಳುತ್ತಾರೆ. ವಿಜಯ ಕರ್ನಾಟಕದಲ್ಲಿ ಕೆಲಸ ಮಾಡುವಾಗ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ವಿನೂತನ ಪ್ರಯೋಗಗಳನ್ನು ಕೈಗೊಂಡಿದ್ದರು. ವಸಂತ ನಾಡಿಗೇರ ಲತಾ ಮಂಗೇಶಕರ್ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ.

ರಾಣೆಬೆನ್ನೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿದ್ದ ವಸಂತ ನಾಡಿಗೇರ ಧಾರವಾಡದಲ್ಲಿ ಎಂಎಸ್ಸಿ ಪದವಿಯನ್ನು ಪಡೆದಿದ್ದರು. ಎಂಎಸ್ಸಿ ಪದವಿ ಪಡೆದರೂ ಸಹ ಪತ್ರಿಕೋದ್ಯಮ, ಬರೆವಣಿಯ ಮೇಲಿನ ಸೆಳೆತದಿಂದ ಸಂಯುಕ್ತ ಕರ್ನಾಟಕದ ಮೂಲಕ ವೃತ್ತಿ ಜೀವನ ಆರಂಭಿಸಿದ್ದರು.

ಸುಮಾರು ಮೂರು ದಶಕಗಳ ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಶ್ವವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ವಸಂತ ನಾಡಿಗೇರ ಸೇವೆ ಸಲ್ಲಿಸಿದ್ದರು. 'ವಸಂತ್ ಸರ್' ಎಂದೇ ಕರೆಸಿಕೊಳ್ಳುತ್ತಿದ್ದ ಅವರು ಸರಳ ಸಜ್ಜನಿಕೆಯ, ಮೃದು ಭಾಷಿಯಾಗಿದ್ದರು. ಎಂತಹ ಒತ್ತಡದ ಸಮಯದಲ್ಲಿಯೂ ಸಮಾಧಾನದಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

ವಿಶ್ವವಾಣಿ ಪತ್ರಿಕೆಯ ಸಂಪಾದಕರಾದ ವಿಶ್ವೇಶ್ವರ ಭಟ್ ವಸಂತ ನಾಡಿಗೇರ ನಿಧನ ಕುರಿತು ಪೋಸ್ಟ್ ಹಾಕಿದ್ದು, 'ನನ್ನ ಬಹುಕಾಲದ ಆತ್ಮೀಯ ಸಹೋದ್ಯೋಗಿ ಹಾಗೂ ಆಪ್ತ ಸ್ನೇಹಿತ ವಸಂತ ನಾಡಿಗೇರ್ ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ. ಓಂ ಶಾಂತಿ' ಎಂದು ಸಂತಾಪವನ್ನು ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ: ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. 'ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು' ಎಂದು ಮುಖ್ಯಮಂತ್ರಿಗಳು ಶೋಕ ಸಂದೇಶದಲ್ಲಿ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+