ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯ್ದೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದೇನು ?

ನಾಮಫಲಕಗಳಲ್ಲಿ ಕನ್ನಡ ಬಸಳಸದಿದ್ರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.

ನಮ್ಮ ಸರ್ಕಾರ 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆ' ಮೂಲಕ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಿದೆ. ಆದರೆ ಇಂದಿಗೂ ಹಲವು ನಗರ ಪ್ರದೇಶಗಳಲ್ಲಿ, ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ಬಳಕೆಯನ್ನು ನಿರ್ಲಕ್ಷಿಸುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ನಾವು ಸಹಿಸುವುದಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಪರಿಶೀಲನೆ ನಡೆಸಿ ಸೂಕ್ತ ಅನುಷ್ಠಾನ ಆಗದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕಾದಿತ್ತು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರು ಎಚ್ಚರಿಕೆ ನೀಡಿದ್ದಾರೆ.

Kannada Language Development Amendment Act What Did Minister Shivaraj Tangadagi Say

ನಮ್ಮ ತಾಯ್ನುಡಿಯನ್ನು ನಾವು ಪ್ರೀತಿಸದಿದ್ದರೆ ಇನ್ಯಾರು ಪ್ರೀತಿಸುತ್ತಾರೆ? ನಮ್ಮ ಭಾಷೆಯನ್ನು ನಾವು ಬೆಳೆಸದಿದ್ದರೆ ಇನ್ಯಾರು ಬೆಳೆಸುತ್ತಾರೆ. ಅಲ್ಲವೇ, ಕನ್ನಡ ನಮ್ಮ ಪೂರ್ವಜರು ನಮಗೆ ಕೊಟ್ಟ ಬಳುವಳಿ ಮಾತ್ರವಲ್ಲ, ನಮ್ಮ ಮುಂದಿನ ಪೀಳಿಗೆಗೆ ನಾವು ಉಳಿಸಿ ಹಸ್ತಾಂತರಿಸಬೇಕಾದ ಅಮೂಲ್ಯ ಆಸ್ತಿ ಎಂದೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.

Kannada Language: ಕರವೇ ಸರಣಿ ಟ್ವೀಟ್

ಇನ್ನು ಕರ್ನಾಟಕ ರಕ್ಷಣಾ ವೇದಿಕೆಯು ಬೆಂಗಳೂರು ಐಟಿ - ಬಿಟಿ ಕಂಪನಿಗಳಲ್ಲಿ ಆಗ್ರಹ ಅಭಿಯಾನ ಹಮ್ಮಿಕೊಂಡಿದ್ದು, ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿದೆ. ಕರ್ನಾಟಕ ನಿಮ್ಮ ಸ್ವತ್ತಲ್ಲ ನಿಮಗೆ ಬರೆದುಕೊಟ್ಟ ಜಹಗೀರು ಅಲ್ಲ. ತುತ್ತು ಅನ್ನ ಹುಡುಕಿ ಬಂದವರಿಗೆ ಯಜಮಾನಿಕೆ ಮಾಡಲು ನಾವು ಬಿಡೋದಿಲ್ಲ, ನಾವು ಬರುತ್ತಿದ್ದೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಹೇಳಿದೆ.

ಐಟಿ ಬಿಟಿ ಸಂಸ್ಥೆಗಳೂ ಸೇರಿದಂತೆ ಕರ್ನಾಟಕದ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಎಷ್ಟು ಪ್ರಮಾಣದಲ್ಲಿ ನೀಡಲಾಗುತ್ತಿದೆ, ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ತಾರತಮ್ಯ ಎಸಗಲಾಗುತ್ತಿದೆಯೇ ಎಂಬುದನ್ನು ತಿಳಿದುಕೊಳ್ಳುವ ಸಲುವಾಗಿ ಕರ್ನಾಟಕ ರಕ್ಷಣಾ ವೇದಿಕೆ ಇಂದು ʻಆಗ್ರಹ ಅಭಿಯಾನʼವನ್ನು ಆರಂಭಿಸಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಟಿ.ಎ ಅವರು ಹೇಳಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಇಂದು ಹಲವು ತಂಡಗಳಲ್ಲಿ ಬೆಂಗಳೂರಿನ ಹಲವು ಭಾಗಗಳಲ್ಲಿ ಇರುವ ಖಾಸಗಿ ಸಂಸ್ಥೆಗಳಿಗೆ ಭೇಟಿ ನೀಡಿ ಆಗ್ರಹ ಪತ್ರವನ್ನು ಸಲ್ಲಿಸಿದರು. ಖಾಸಗಿ ಸಂಸ್ಥೆಗಳಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದು, ಮಾಹಿತಿ ಒದಗಿಸುವ ಮತ್ತು ಕನ್ನಡಿಗರಿಗೆ ಉದ್ಯೋಗ ಖಾತರಿಪಡಿಸುವ ಭರವಸೆಗಳು ದೊರಕಿವೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+