ಕನ್ನಡ ಕಡ್ಡಾಯಕ್ಕಾಗಿ ಹೋರಾಟದ ಕಿಚ್ಚು: ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು ಎಂದ ಸಿದ್ದರಾಮಯ್ಯ

ಬೆಂಗಳೂರು,ಡಿಸೆಂಬರ್‌ 28: ರಾಜ್ಯದಲ್ಲಿ ಕನ್ನಡ ನಾಮಫಲಕ ಕುರಿತ ಹೋರಾಟ ನಡೆಯುತ್ತಿದ್ದು, ಬೇರೆ ಭಾಷೆಯ ಬಗ್ಗೆ ವಿರೋಧವಿಲ್ಲವಾದರೂ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಕ್ಕೂ ಸರ್ಕಾರದ ವಿರೋಧವಿಲ್ಲ. ಸಂಘಟನೆಗಳು ಶಾಂತಿಯುತ ಪ್ರತಿಭಟನೆಗಳನ್ನು ಮಾಡಬೇಕು.ಆದರೆ ಕಾನೂನನ್ನು ಉಲ್ಲಂಘಿಸುವ ಕೆಲಸ ನಡೆದರೆ, ಅಂತಹವರ ವಿರುದ್ಧ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಂದು ಬಿಬಿಎಂಪಿ, ಪೊಲೀಸ್ ಇಲಾಖೆಗಳ ಜೊತೆ ಈ ವಿಷಯದ ಬಗ್ಗೆ ಸಭೆ ನಡೆಸಲಾಗುತ್ತದೆ. ಬೇರೆ ಭಾಷೆಯ ಬಗ್ಗೆ ವಿರೋಧವಿಲ್ಲವಾದರೂ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು ಎಂದರು.

 Kannada Mandatory Fight: In Karnataka, The Name Plate Should Be In Kannada Says Siddaramaiah

ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕರೋನಾ ಹಗರಣದ ಬಗ್ಗೆ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರ ಹೋರಾಟದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ: ಸುನೀಲ್‌ ಕುಮಾರ್‌

ಆಡಳಿತ ಕನ್ನಡಕ್ಕಾಗಿ ಆಗ್ರಹಿಸಿ ಕನ್ನಡಪರ ಸಂಘಟನೆಗಳು ನಡೆಸಿದ ಹೋರಾಟವನ್ನು ಸರಿಯಾಗಿ ನಿಭಾಯಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ಹೋರಾಟದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ವಿ.ಸುನಿಲ್ ಕುಮಾರ್ ಆರೋಪಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದಾರೆ. ಕನ್ನಡಕ್ಕಾಗಿ ಧ್ವನಿ ಎತ್ತಿದ ನೂರಾರು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಹೋರಾಟಕ್ಕೆ ನೀಡಿದ ಕರೆಯನ್ನು ಗಂಭೀರವಾಗಿ ಪರಿಗಣಿಸದೇ ಇದ್ದುದರಿಂದ ಸಾರ್ವಜನಿಕ ಜನಜೀವನಕ್ಕೆ ಹಾಗೂ ವ್ಯಾಪಾರೋದ್ಯಮಕ್ಕೆ ತೊಂದರೆಯಾಗುವುದಕ್ಕೆ ಸರ್ಕಾರವೇ ಕಾರಣವಾದಂತಾಗಿದೆ. ಸಂಘಟನೆಯ ಮುಖ್ಯಸ್ಥರ ಜತೆಗೆ ಮಾತುಕತೆ ನಡೆಸದೇ ಇರುವುದು ಇದಕ್ಕೆಲ್ಲ ಕಾರಣವಾಗಿದೆ. ಕಾಂಗ್ರೆಸ್ ಗೆ ಕನ್ನಡ ಹೋರಾಟ ಎಂಬುದು ಮತ ಸರಕಿಗಷ್ಟೇ ಸೀಮಿತ ಎಂದು ಇದರಿಂದ ಅರ್ಥವಾಗುತ್ತದೆ ಎಂದು ಅವರು ಕಿಡಿಕಾರಿದ್ದಾರೆ.

ಆಡಳಿತದಲ್ಲಿ ಕನ್ನಡವನ್ನು ಜಾರಿಗೊಳಿಸುವ ಉದ್ದೇಶದಿಂದ ನಾವು ಅಧಿಕಾರದಲ್ಲಿದ್ದಾಗ ಕನ್ನಡ ಭಾಷಾ ಸಮಗ್ರ ಅನುಷ್ಠಾನ ವಿಧೇಯಕವನ್ನು ಜಾರಿಗೆ ತಂದಿದ್ದೆವು. ಏಕೀಕರಣದ ನಂತರ ಆಡಳಿತ ಕನ್ನಡಕ್ಕಾಗಿ ಜಾರಿಗೆ ತಂದಿದ್ದ ಸಮಗ್ರ ವಿಧೇಯಕ ಇದಾಗಿತ್ತು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಈ ಕಾಯಿದೆಯನ್ನು ಮರೆತಿದೆ. ಕನ್ನಡವನ್ನು ಕಡೆಗಣಿಸಲಾಗಿದೆ. ನಾಮಫಲಕ ಸೇರಿದಂತೆ ಆಡಳಿತದಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ಕಾಲ ಹರಣ ಮಾಡದೇ ಈ ಕಾಯಿದೆ ಅನುಷ್ಠಾನ ಮಾಡಿ ಎಂದು ಆಗ್ರಹಿಸಿದ್ದಾರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+