ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ, ಕಾನೂನು ಉಲ್ಲಂಘಿಸಿದರೆ ಶಿಸ್ತು ಕ್ರಮ: ಸುರೇಶ್ ಕುಮಾರ್

|
Google Oneindia Kannada News

ಬೆಂಗಳೂರು, ಜುಲೈ 14: ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯದ ಕುರಿತು ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದು, ಕಾನೂನು ಉಲ್ಲಂಘಿಸುವ ಶಾಲೆಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಒಂದು ವರ್ಗ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸಿತ್ತು.

 ಎಸ್ಎಸ್ಎಲ್ ಸಿ ಪರೀಕ್ಷೆ2021: ಸುರಕ್ಷತಾ ಮಾರ್ಗಸೂಚಿ ಪ್ರಕಟ ಎಸ್ಎಸ್ಎಲ್ ಸಿ ಪರೀಕ್ಷೆ2021: ಸುರಕ್ಷತಾ ಮಾರ್ಗಸೂಚಿ ಪ್ರಕಟ

ಅದಕ್ಕೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದು, ಭಾಷೆಯಾಗಿ ಕನ್ನಡ ಕಲಿಸುವ ವಿಷಯದಲ್ಲಿ ಯಾವುದೇ ರಾಜಿಯಿಲ್ಲ. ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.

Kannada Must Be Taught As A Language In Schools; Clarifies Education Minister S Suresh Kumar

ಒಂದರಿಂದ ಹತ್ತನೇ ತರಗತಿಯವರಿಗೆ ಹಂತಹಂತವಾಗಿ ಕನ್ನಡ ಭಾಷೆಯನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕಿದೆ. ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಹೊರ ರಾಜ್ಯದ ಪೋಷಕರ ಒಂದು ವರ್ಗ ವಿರೋಧಿಸುತ್ತಿದೆ.

ಪೋಷಕರೂ ಕೂಡ ತಮ್ಮ ಜವಾಬ್ದಾರಿಯನ್ನು ಅರಿತು ಸರ್ಕಾರದ ಕಾಯ್ದೆಯನ್ನು ಗೌರವಿಸಬೇಕು. ತಮ್ಮ ಮಕ್ಕಳನ್ನು ನೆಲದ ಭಾಷೆ ಕಲಿಯಲು ಪ್ರೇರೇಪಣೆ ನೀಡಬೇಕು.

ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೂ ಸಹ ಯಾವುದೇ ಆಗ್ರಹಗಳಿಗೆ ಮಣಿಯದೇ ಮತ್ತು ಕನ್ನಡ ಕಲಿಕೆಯ ವಿಷಯದಲ್ಲಿ ಯಾವುದೇ ರೀತಿಯ ರಾಜಿಗೆ ಒಳಗಾಗದೇ ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಅನ್ವಯ ಕನ್ನಡವನ್ನು ತಮ್ಮ ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರಥಮ, ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಎಂದಿನಂತೆ ಮುಂದುವರೆಸಬೇಕು.

ಈ ಹಿನ್ನೆಲೆಯಲ್ಲಿ ಕನ್ನಡ ಕಲಿಕಾ ಅಧಿನಿಯಮ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಸಹ ಈ ಸಂಬಂಧ ತಮ್ಮನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

Recommended Video

DKS-ಮೂಟೆ ಮೂಟೆ ತರಕಾರಿ ಖರೀದಿ ಮಾಡಿದ ಶಿವಕುಮಾರ್ | Oneindia Kannada

ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೇ ಆಗಲಿ ಕನ್ನಡವನ್ನು ಕಡ್ಡಾಯವಾಗಿ ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯ ಎಂದು ಹೇಳಿದ್ದಾರೆ.

English summary
Suresh Kumar Says Kannada Must Be Taught As A Language In Schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X