ಕಡ್ಡಾಯ ಕನ್ನಡ ಶಿಕ್ಷಣ ಹೋರಾಟಕ್ಕೆ ಮತ್ತೆ ಹಿನ್ನಡೆ
ಬೆಂಗಳೂರು, ಮಾ. 23 : ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಲ್ಲ ಎಂಬ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಮಾತೃಭಾಷೆಯನ್ನು ತೀರ್ಮಾನಿಸುವುದು ಪೋಷಕರು ಮತ್ತು ಮಕ್ಕಳ ಮೂಲಭೂತ ಹಕ್ಕು ಎಂದು ಕೋರ್ಟ್ ಹೇಳಿದೆ.
ಮಾತೃಭಾಷೆ ಶಿಕ್ಷಣ ಮಾಧ್ಯಮಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸಂವಿಧಾನ ಪೀಠ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಚ್.ಎಲ್ ದತ್ತು ಅವರು ಈ ಅರ್ಜಿಯನ್ನು ವಜಾಗೊಳಿಸಿದ್ದಾರೆ. [ಕನ್ನಡ ಮಾಧ್ಯಮ ಕಡ್ಡಾಯವಲ್ಲ : ಸುಪ್ರೀಂ ತೀರ್ಪು]

ಮಕ್ಕಳ ಮಾತೃಭಾಷೆಯನ್ನು ತೀರ್ಮಾನಿಸುವುದು ಪೋಷಕರು ಮತ್ತು ಮಕ್ಕಳ ಮೂಲಭೂತ ಹಕ್ಕು. ಯಾವ ಮಾಧ್ಯಮದಲ್ಲಿ ಮಕ್ಕಳು ಕಲಿಯಬೇಕು ಎನ್ನುವುದು ಅವರ ನಿರ್ಧಾರಕ್ಕೆ ಬಿಟ್ಟಿದ್ದು. ಶಿಕ್ಷಣ ಮಾಧ್ಯಮವನ್ನು ಬಲವಂತವಾಗಿ ಹೇರುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ನೇತೃತ್ವದ ಸಂವಿಧಾನ ಪೀಠವು ಆದೇಶ ನೀಡಿತ್ತು.[ಕನ್ನಡ ಮಾಧ್ಯಮ ಮಸೂದೆಗೆ ರಾಜ್ಯ ಕ್ಯಾಬಿನೆಟ್ ಒಪ್ಪಿಗೆ]
ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯೂ ವಜಾಗೊಂಡಿತ್ತು. ನಂತರ ಸರ್ಕಾರ ಮಾತೃ ಭಾಷಾ ಶಿಕ್ಷಣ ಮಾಧ್ಯಮಕ್ಕೆ ಸಂಬಂಧಿಸಿದ ವಿವಾದದಲ್ಲಿ ತನಗೆ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಪರಿಹಾರಾತ್ಮಕ ಅರ್ಜಿ ಸಲ್ಲಿಸಿತ್ತು. [ಕನ್ನಡ ಮಾಧ್ಯಮದ ವಿವಾದವೇನು?]
ಏನಿದು ವಿವಾದ : ಒಂದರಿಂದ ನಾಲ್ಕನೇ ತರಗತಿವರೆಗೆ ಖಾಸಗಿ ಶಾಲೆಗಳು ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡಬೇಕು ಎಂದು 1994ರಲ್ಲಿ ಭಾಷಾ ಮಾಧ್ಯಮ ಆದೇಶವನ್ನು ಕರ್ನಾಟಕ ಸರ್ಕಾರ ಹೊರಡಿಸಿತ್ತು. ಖಾಸಗಿ ಶಾಲೆಗಳು ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು, ಕೋರ್ಟ್ ಈ ಆದೇಶವನ್ನು ರದ್ದುಗೊಳಿಸಿ ತೀರ್ಪುನೀಡಿತ್ತು. ಕರ್ನಾಟಕ ಸರ್ಕಾರ ಇದನ್ನು ಪ್ರಶ್ನಿಸಿ ಸುಪ್ರೀಕೋರ್ಟ್ ಮೆಟ್ಟಿಲೇರಿತ್ತು.












Click it and Unblock the Notifications