ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯ್ಯೋ ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 11; 'ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ?' ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ನಡೆದ ಎರಡು ಕಾರ್ಯಕ್ರಮಗಳಲ್ಲಿ ಕನ್ನಡ ಮಾಯವಾಗಿತ್ತು. ಕೇಂದ್ರ ಆರೋಗ್ಯ ಸಚಿವ ಮನ್​ಸುಖ್ ಮಾಂಡವೀಯ ಪಾಲ್ಗೊಂಡಿದ್ದ ಎರಡು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸಹ ಇದ್ದರು. ಆದರೆ ಕನ್ನಡ ಮಾತ್ರ ಇರಲಿಲ್ಲ.

ಸೋಮವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಈ ಕುರಿತು ಟ್ವೀಟ್ ಮಾಡಿದ್ದಾರೆ. 'ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ?' ಎಂದು ಕೇಳಿದ್ದಾರೆ.

 ಕನ್ನಡ ಭಾಷೆ ಕಲಿಕೆ ಹಾದಿಯಲ್ಲಿ ಹೊರಟ ರಾಜ್ಯಪಾಲ ಥಾವರ್‌ಚಂದ್ ಕನ್ನಡ ಭಾಷೆ ಕಲಿಕೆ ಹಾದಿಯಲ್ಲಿ ಹೊರಟ ರಾಜ್ಯಪಾಲ ಥಾವರ್‌ಚಂದ್

Kannada Not Used In Karnataka Govt Function Kumaraswamy Tweet

'ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ?. ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು' ಎಂದು ಕರೆ ನೀಡಿದ್ದಾರೆ.

ಕನ್ನಡ ಕಲಿಕೆ ಕಡ್ಡಾಯ, ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ನೋಟಿಸ್ ಕನ್ನಡ ಕಲಿಕೆ ಕಡ್ಡಾಯ, ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ನೋಟಿಸ್

'ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಭಾನುವಾರ ಬೆಂಗಳೂರು ನಗರದ ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ನಡೆದ ಮಾಡ್ಯೂಲರ್ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡ ಬಳಕೆ ಮಾಡಿರಲಿಲ್ಲ. ಆರೋಗ್ಯ ಇಲಾಖೆಯ ಅಧಿಕೃತ ಕಾರ್ಯಕ್ರಮದಲ್ಲೇ ಕನ್ನಡ ಏಕೆ ಬಳಸಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆದಿತ್ತು.

ಈ ಹಿಂದೆ ನಮ್ಮ ಮೆಟ್ರೋ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡ ಬಳಕೆ ಮಾಡಿರಲಿಲ್ಲ. ಆಗ ಸಹ ಕನ್ನಡ ಬಳಕೆ ಮಾಡದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿತ್ತು. ಅಂತಿಮವಾಗಿ ಬಿಎಂಆರ್‌ಸಿಎಲ್ ಈ ಕುರಿತು ಸ್ಪಷ್ಟನೆ ನೀಡಿತ್ತು.

Recommended Video

Virat Kohli ನಾಯಕತ್ವದಿಂದ ಕೆಳಗಿಳಿದ ನಂತರ ಮೊದಲ ಬಾರಿಗೆ ಮಾತನಾಡಿದ್ದಾರೆ | Oneindia Kannada

ಈಗ ಪುನಃ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡೆಗಣಿಸಲಾಗಿದೆ. ಈ ಕುರಿತು ಎಚ್. ಡಿ. ಕುಮಾರಸ್ವಾಮಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

English summary
Kannada not used in Karnataka government function in Bengaluru on October 10. Former chief minister H. D. Kumaraswamy tweet on the issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X