ಕರ್ನಾಟಕ ಬಂದ್‌ಗೆ ಕರೆ ನೀಡಿದ ವಾಟಾಳ್ ನಾಗರಾಜ್
Recommended Video

ಬೆಂಗಳೂರು, ಜುಲೈ 12 : ಕನ್ನಡ ಒಕ್ಕೂಟ ಕರ್ನಾಟಕ ಬಂದ್‌ಗೆ ಕರೆ ನಿಡಿದೆ. ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕು ಎಂಬ ಕೂಗನ್ನು ಖಂಡಿಸಿ, ಬಜೆಟ್‌ನಲ್ಲಿ ಉತ್ತರ ಕರ್ನಾಟಕವನ್ನು ಕಡೆಗಣಿಸಿರುವುದನ್ನು ಖಂಡಿಸಿ ಬಂದ್ ಮಾಡಲಾಗುತ್ತಿದೆ.
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಈ ಕುರಿತು ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, 'ಆಗಸ್ಟ್ ಕೊನೆಯ ವಾರದಲ್ಲಿ ಕರ್ನಾಟಕ ಬಂದ್ ನಡೆಸಲಾಗುತ್ತದೆ' ಎಂದು ಹೇಳಿದರು.
'ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು ಎಂಬ ಕೂಗನ್ನು ಕನ್ನಡ ಒಕ್ಕೂಟ ಖಂಡಿಸುತ್ತದೆ. ಪ್ರತ್ಯೇಕ ರಾಜ್ಯ ಮಾಡಬೇಕು ಎಂಬ ಬೇಡಿಕೆಯನ್ನು ಖಂಡಿಸಿ, ಬಜೆಟ್‌ನಲ್ಲಿ ಉತ್ತರ ಕರ್ನಾಟಕವನ್ನು ಕಡೆಗಣಿಸಿರುವುದನ್ನು ಪ್ರತಿಭಟಿಸಲು ಕರ್ನಾಟಕ ಬಂದ್ ನಡೆಸಲಾಗುತ್ತದೆ' ಎಂದರು.

'ಜುಲೈ 18ರಿಂದ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕನ್ನಡ ಒಕ್ಕೂಟದಿಂದ ಪ್ರತಿಭಟನೆ ನಡೆಸಿ, ಪ್ರತ್ಯೇಕ ರಾಜ್ಯ ಮಾಡಬಾರದು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ. ಆಗಸ್ಟ್ ಕೊನೆಯ ವಾರದಲ್ಲಿ ಕರ್ನಾಟಕ ಬಂದ್ ನಡೆಸಲಾಗುತ್ತದೆ' ಎಂದು ವಾಟಾಳ್ ನಾಗರಾಜ್ ತಿಳಿಸಿದರು.
ಯಾವ ದಿನಾಂಕದಂದು ಕರ್ನಾಟಕ ಬಂದ್ ನಡೆಸಲಾಗುತ್ತದೆ? ಎಂಬ ಬಗ್ಗೆ ವಾಟಾಳ್ ನಾಗರಾಜ್ ಖಚಿತವಾಗಿ ಹೇಳಿಲ್ಲ. ಆದರೆ, ಆಗಸ್ಟ್ ಅಂತ್ಯದಲ್ಲಿ ನಡೆಸಲಾಗುತ್ತದೆ ಎಂದು ಹೇಳಿದರು.
ದಾವಣಗೆರೆಯಲ್ಲಿ ಜುಲೈ 18, ಹುಬ್ಬಳ್ಳಿಯಲ್ಲಿ 19, ಬೆಳಗಾವಿಯಲ್ಲಿ 20, ಕಲಬುರಗಿಯಲ್ಲಿ 21ರಂದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.
2018ರ ಏಪ್ರಿಲ್ ನಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಬಾರದು ಎಂದು ಒತ್ತಾಯಿಸಿ ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ ನೀಡಿದ್ದರು. ಆಗ ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿತ್ತು. ಕರ್ನಾಟಕ ಬಂದ್ ಗೆ ಕರೆ ನೀಡಿದ್ದಕ್ಎಕ ಭಾರೀ ವಿರೋಧವೂ ವ್ಯಕ್ತವಾಗಿತ್ತು.












Click it and Unblock the Notifications