ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಂದ್‌ಗೆ ಕರೆ ನೀಡಿದ ವಾಟಾಳ್ ನಾಗರಾಜ್

By Gururaj
|
Google Oneindia Kannada News

Recommended Video

ಆಗಸ್ಟ್ 2018ಕ್ಕೆ ಕರ್ನಾಟಕ ಬಂದ್ ಗೆ ಕರೆ ಕೊಟ್ಟ ವಾಟಾಳ್ ನಾಗರಾಜ್ | Oneindia Kannada

ಬೆಂಗಳೂರು, ಜುಲೈ 12 : ಕನ್ನಡ ಒಕ್ಕೂಟ ಕರ್ನಾಟಕ ಬಂದ್‌ಗೆ ಕರೆ ನಿಡಿದೆ. ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕು ಎಂಬ ಕೂಗನ್ನು ಖಂಡಿಸಿ, ಬಜೆಟ್‌ನಲ್ಲಿ ಉತ್ತರ ಕರ್ನಾಟಕವನ್ನು ಕಡೆಗಣಿಸಿರುವುದನ್ನು ಖಂಡಿಸಿ ಬಂದ್ ಮಾಡಲಾಗುತ್ತಿದೆ.

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಈ ಕುರಿತು ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, 'ಆಗಸ್ಟ್ ಕೊನೆಯ ವಾರದಲ್ಲಿ ಕರ್ನಾಟಕ ಬಂದ್ ನಡೆಸಲಾಗುತ್ತದೆ' ಎಂದು ಹೇಳಿದರು.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಶ್ರೀರಾಮುಲು ಬೆಂಬಲಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಶ್ರೀರಾಮುಲು ಬೆಂಬಲ

'ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು ಎಂಬ ಕೂಗನ್ನು ಕನ್ನಡ ಒಕ್ಕೂಟ ಖಂಡಿಸುತ್ತದೆ. ಪ್ರತ್ಯೇಕ ರಾಜ್ಯ ಮಾಡಬೇಕು ಎಂಬ ಬೇಡಿಕೆಯನ್ನು ಖಂಡಿಸಿ, ಬಜೆಟ್‌ನಲ್ಲಿ ಉತ್ತರ ಕರ್ನಾಟಕವನ್ನು ಕಡೆಗಣಿಸಿರುವುದನ್ನು ಪ್ರತಿಭಟಿಸಲು ಕರ್ನಾಟಕ ಬಂದ್ ನಡೆಸಲಾಗುತ್ತದೆ' ಎಂದರು.

Kannada Okkoota calls for Karnataka bandh in August 2018

'ಜುಲೈ 18ರಿಂದ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕನ್ನಡ ಒಕ್ಕೂಟದಿಂದ ಪ್ರತಿಭಟನೆ ನಡೆಸಿ, ಪ್ರತ್ಯೇಕ ರಾಜ್ಯ ಮಾಡಬಾರದು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ. ಆಗಸ್ಟ್ ಕೊನೆಯ ವಾರದಲ್ಲಿ ಕರ್ನಾಟಕ ಬಂದ್ ನಡೆಸಲಾಗುತ್ತದೆ' ಎಂದು ವಾಟಾಳ್ ನಾಗರಾಜ್ ತಿಳಿಸಿದರು.

ಉ. ಕರ್ನಾಟಕ, ಕರಾವಳಿಗೆ ಎಚ್‌ಡಿಕೆ ಕೊಟ್ಟಿದ್ದೇನು? ಅಭಿಮಾನಿಗಳು ಮುಂದಿಟ್ಟ ಪಟ್ಟಿ ಇದುಉ. ಕರ್ನಾಟಕ, ಕರಾವಳಿಗೆ ಎಚ್‌ಡಿಕೆ ಕೊಟ್ಟಿದ್ದೇನು? ಅಭಿಮಾನಿಗಳು ಮುಂದಿಟ್ಟ ಪಟ್ಟಿ ಇದು

ಯಾವ ದಿನಾಂಕದಂದು ಕರ್ನಾಟಕ ಬಂದ್ ನಡೆಸಲಾಗುತ್ತದೆ? ಎಂಬ ಬಗ್ಗೆ ವಾಟಾಳ್ ನಾಗರಾಜ್ ಖಚಿತವಾಗಿ ಹೇಳಿಲ್ಲ. ಆದರೆ, ಆಗಸ್ಟ್ ಅಂತ್ಯದಲ್ಲಿ ನಡೆಸಲಾಗುತ್ತದೆ ಎಂದು ಹೇಳಿದರು.

ದಾವಣಗೆರೆಯಲ್ಲಿ ಜುಲೈ 18, ಹುಬ್ಬಳ್ಳಿಯಲ್ಲಿ 19, ಬೆಳಗಾವಿಯಲ್ಲಿ 20, ಕಲಬುರಗಿಯಲ್ಲಿ 21ರಂದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.

2018ರ ಏಪ್ರಿಲ್ ನಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಬಾರದು ಎಂದು ಒತ್ತಾಯಿಸಿ ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ ನೀಡಿದ್ದರು. ಆಗ ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿತ್ತು. ಕರ್ನಾಟಕ ಬಂದ್ ಗೆ ಕರೆ ನೀಡಿದ್ದಕ್ಎಕ ಭಾರೀ ವಿರೋಧವೂ ವ್ಯಕ್ತವಾಗಿತ್ತು.

English summary
Kannada Okkoota led by Kannada Chaluvali Vatal Paksha president Vatal Nagaraj has called for Karnataka bandh in the month of August for neglected North Karnataka in Budget 2018-19 and the demand for separate state for North Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X