ಕಾವೇರಿ ವಿವಾದ : ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್
ಬೆಂಗಳೂರು, ಸೆಪ್ಟೆಂಬರ್ 06 : ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕನ್ನಡ ಒಕ್ಕೂಟ ಕರೆ ನೀಡಿದೆ.
ಸುಪ್ರೀಂಕೋರ್ಟ್ ತಮಿಳುನಾಡಿಗೆ ಪ್ರತಿದಿನ 15,000 ಕ್ಯೂಸೆಕ್ ನೀರು ಹರಿಸಬೇಕು ಎಂದು ಸೋಮವಾರ ಆದೇಶ ನೀಡಿದೆ. ಈ ಆದೇಶ ಹೊರಬಿದ್ದ ಬಳಿಕ ಮಂಡ್ಯ, ಶ್ರೀರಂಗಪಟ್ಟಣ, ಬೆಳಗೋಳ, ಕೆಆರ್ಎಸ್ ಬಳಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.[ತಮಿಳುನಾಡಿಗೆ ನೀರು ಹರಿಸಿ ಎಂದ ಸುಪ್ರೀಂ]

ಬೆಂಗಳೂರಿನಲ್ಲಿಯೂ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಸರ್ಕಾರವನ್ನು ಒತ್ತಾಯಿಸುತ್ತಿವೆ.[ಕಾವೇರಿ ತೀರ್ಪು: ರಾಜ್ಯ ಸರ್ಕಾರ ರೈತರ ಕ್ಷಮೆ ಕೇಳಲಿ]
ವಾಟಾಳ್ರಿಂದ ರಸ್ತೆ ತಡೆ : ಸೋಮವಾರ ಸಂಜೆ ರಿಚ್ಮಂಡ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕನ್ನಡ ಒಕ್ಕೂಟದ ಮುಖ್ಯಸ್ಥ ವಾಟಾಳ್ ನಾಗರಾಜ್ ಅವರು ಸೆಪ್ಟೆಂಬರ್ 9ರಂದು (ಶುಕ್ರವಾರ) ಕರ್ನಾಟಕ ಬಂದ್ ನಡೆಸುವುದಾಗಿ ಹೇಳಿದರು.[ಸುಪ್ರೀಂಗೆ ರಾಜ್ಯದ ಸ್ಥಿತಿ ಮನವರಿಕೆ, ತಮಿಳುನಾಡಿಗೆ ನೀರು ಬಿಡಲ್ಲ]
'ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿ ಜೈಲಿಗೆ ಹೋಗಲು ನಾವು ಸಿದ್ಧರಿದ್ದೇವೆ. ಆದರೆ, ತಮಿಳುನಾಡಿಗೆ ನೀರು ಹರಿಯಲು ಬಿಡುವುದಿಲ್ಲ. ಕರ್ನಾಟಕ ಬಂದ್ಗೆ ರಾಜ್ಯದ ಎಲ್ಲಾ ಜನರು ಬೆಂಬಲ ನೀಡಬೇಕು' ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದರು.
-
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications