ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸೆಂಬರ್ 5ರ ಕರ್ನಾಟಕ ಬಂದ್; ವಿವಿಧ ಸಂಘಟನೆಗಳ ಬೆಂಬಲ

|
Google Oneindia Kannada News

ಬೆಂಗಳೂರು, ನವೆಂಬರ್ 20; ಡಿಸೆಂಬರ್ 5ರಂದು ಕರೆ ನೀಡಿರುವ ಕ ರ್ನಾಟಕ ಬಂದ್‌ಗೆ ಹಲವಾರು ಸಂಘಟನೆಗಳು ಬೆಂಬಲ ಘೋಷಣೆ ಮಾಡಿವೆ. ಕರ್ನಾಟಕ ಸರ್ಕಾರ ಮರಾಠಾ ಅಭಿವೃದ್ಧಿ ನಿಗಮ ರಚನೆ ಆದೇಶ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಬಂದ್ ಕರೆ ನೀಡಲಾಗಿದೆ.

ಶುಕ್ರವಾರ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ಸಭೆ ನಡೆಯಿತು. ವಿವಿಧ ಸಂಘಟನೆಗಳು ಕರ್ನಾಟಕ ಬಂದ್‌ಗೆ ಬೆಂಬಲ ನೀಡಿದವು. ಡಿಸೆಂಬರ್ 5ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಕರ್ನಾಟಕ ಬಂದ್ ಕರೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಕರ್ನಾಟಕ ಬಂದ್ ಕರೆ

ಮಾಧ್ಯಮಗಳ ಜೊತೆ ಮಾತನಾಡಿದ ವಾಟಾಳ್ ನಾಗರಾಜ್, "ಡಿಸೆಂಬರ್ 5ರಂದು ಕರ್ನಾಟಕ ಬಂದ್ ಮಾಡುತ್ತೇವೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಬಂದ್ ನಡೆಸಲು ಒಕ್ಕೊರಲ ತೀರ್ಮಾನ ಮಾಡಲಾಗಿದೆ" ಎಂದು ಹೇಳಿದರು.

ಮರಾಠ ಸಮಾಜದ ಹಿತ ಕಾಪಾಡಲು ರಾಜ್ಯ ಬಿಜೆಪಿ ಸರ್ಕಾರ ಬದ್ಧ!ಮರಾಠ ಸಮಾಜದ ಹಿತ ಕಾಪಾಡಲು ರಾಜ್ಯ ಬಿಜೆಪಿ ಸರ್ಕಾರ ಬದ್ಧ!

Kannada Okkuta Deiced For Karnataka Bandh On December 5

"ಕರ್ನಾಟಕ ಬಂದ್ ಮಾಡಬೇಡಿ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಬಾರದು. ಬಂದ್ ದಿನ ಯಾವುದೇ ವಾಹನ ಸಂಚಾರ ಇರುವುದಿಲ್ಲ. ಬೆಂಗಳೂರಿನಲ್ಲಿ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ ತನಕ ಬೃಹತ್ ಜಾಥಾ ಮಾಡುತ್ತೇವೆ" ಎಂದು ವಾಟಾಳ್ ನಾಗರಾಜ್ ತಿಳಿಸಿದರು.

ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಒಕ್ಕಲಿಗ ಸಮುದಾಯದಿಂದ ಬೇಡಿಕೆ! ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಒಕ್ಕಲಿಗ ಸಮುದಾಯದಿಂದ ಬೇಡಿಕೆ!

"ಕರ್ನಾಟಕ ಬಂದ್‌ಗೆ ಪ್ರತಿಯೊಬ್ಬರು ಬೆಂಬಲ ನೀಡಬೇಕಕು. ಹೋಟೆಲ್ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಸಂಪೂರ್ಣ ಬೆಂಬಲವನ್ನು ನೀಡಲಿವೆ" ಎಂದು ವಾಟಾಳ್ ನಾಗರಾಜ್ ಹೇಳಿದರು.

Recommended Video

ಪೊಲೀಸ್ ಅಂದ್ರೆ ಹೀಗಿರಬೇಕು | Oneindia Kannada

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 'ಮರಾಠ ಅಭಿವೃದ್ಧಿ ಪ್ರಾಧಿಕಾರ' ರಚನೆ ಮಾಡಲು ಒಪ್ಪಿಗೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಸರ್ಕಾರದ ನಿರ್ಧಾರದ ವಿರುದ್ಧ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

English summary
Kannada Okkuta leaders led by its president Vatal Nagaraj decided for Karnataka bandh on December 5, 2020 to protest against government for setting up Maratha Development Board.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X