ಭಾಷೆಯ ರಕ್ಷಣೆ ಅಭಿಮಾನದಿಂದ ಸಾಧ್ಯವಿಲ್ಲ: ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿದ ಸಿದ್ದರಾಮಯ್ಯ, ಮೋದಿ
ಇಂದು ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕರುನಾಡಿನ ಈ ನೆಲದ ಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ಶುಭಕೋರಿದ್ದಾರೆ.ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು - ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಕನ್ನಡದ ಭಾಷೆಗೆ ತನ್ನದೇ ಆದ ಅಸ್ಮಿತೆಯಿದೆ. ಅದು ಬಹುತ್ವವನ್ನು ಗೌರವಿಸುವ ಮತ್ತು ಒಕ್ಕೂಟದ ಹಿತವನ್ನು ಕಾಯುವ ಬಾಳನೋಟದ ಅಸ್ಮಿತೆ. ಇದು ಪಂಪನಿಂದ ಕುವೆಂಪು ವರೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಬೆಳೆದುಬಂದಿರುವ ಜೀವನದರ್ಶನ ಎಂದು ಸಿದ್ದರಾಮಯ್ಯ ಅವರು ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.
ಇದನ್ನೇ ಪಂಪ "ಮಾನವ ಕುಲ ತಾನೊಂದೇ ವಲಂ" ಎಂದು ಹೇಳಿದ್ದು. ಕನ್ನಡ ಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ. ಅದು ಕೇವಲ ಶಬ್ದ-ವಾಕ್ಯಗಳಲ್ಲ. ಭಾಷೆಯಲ್ಲಿ ಅದನ್ನಾಡುವ ಮನುಷ್ಯನ ಆಳವಾದ ಭಾವನೆಗಳಿರುತ್ತವೆ, ಪರಸ್ಪರ ಸಂಬಂಧಗಳಿರುತ್ತವೆ, ತನ್ನತನದ ಪ್ರಜ್ಞೆ ಇರುತ್ತದೆ. ಅದು ನಮ್ಮ ಸಂಸ್ಕೃತಿ, ಇತಿಹಾಸ, ನೆಲ-ಜಲದ ಸಂಪತ್ತು ಸೇರಿದಂತೆ ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಕನ್ನಡ ಭಾಷೆ ಈ ಅಸ್ಮಿತೆಯ ಜೀವಧಾತು. ಕೇವಲ ಅಭಿಮಾನದಿಂದ ಭಾಷೆಯ ರಕ್ಷಣೆ ಸಾಧ್ಯ ಇಲ್ಲ. ಪ್ರತಿಯೊಬ್ಬ ಕನ್ನಡಿಗನೂ ರಾಜ್ಯದಲ್ಲಿ ಕನ್ನಡದಲ್ಲೇ ಮಾತನಾಡುವ, ವ್ಯವಹರಿಸುವ ಪ್ರತಿಜ್ಞೆ ಮಾಡೋಣ. ಕನ್ನಡವನ್ನು ಬಳಸೋಣ, ಬೆಳೆಸೋಣ ಎಂದು ಕರೆ ನೀಡಿದ್ದಾರೆ.

ಜ್ಞಾನದಲ್ಲಿ ಅಡಗಿರುವ ಪ್ರಗತಿ ಮನೋಭಾವದ ಪ್ರತಿಬಿಂಬ
ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ರಾಜ್ಯೋತ್ಸವಕ್ಕೆ ಶುಭಕೋರಿದ್ದಾರೆ. ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್, ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ. ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಾಶಯಗಳು. ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸವನ್ನು ಹೊಂದಿರುವ ನಮ್ಮ ಕನ್ನಡ ಭಾಷೆಯನ್ನು ನಿತ್ಯ ಬಳಸಿ, ಅದನ್ನು ಇನ್ನಷ್ಟು ಉತ್ತುಂಗಕ್ಕೇರಿಸುವ ಕಾರ್ಯ ನಮ್ಮೆಲ್ಲರ ಪರಮ ಕರ್ತವ್ಯ. ಎಲ್ಲರ ನುಡಿಯಾಗಲಿ ಕನ್ನಡ, ಎಲ್ಲರ ನಡೆಯಾಗಲಿ ಕನ್ನಡ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಸಾವಿರ ಭಾಷೆಗಳಲ್ಲಿ ತಾಯಿ ಭಾಷೆಯೇ ಮಿಗಿಲು. ಕನ್ನಡಮ್ಮನ ಮಕ್ಕಳಾಗಿ ಹೆಮ್ಮೆಯಿಂದ ನಮ್ಮ ನಾಡುನುಡಿಯನ್ನು ಗೌರವಿಸಿ ಪ್ರೀತಿಸೋಣ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎನ್ನುವುದು ಜಗದ ದಶದಿಕ್ಕುಗಳಲ್ಲಿ ಮೊಳಗಲಿ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕನ್ನಡ ಎಂದರೆ ಅಮೃತ, ಕರುನಾಡ ಮಣ್ಣೇ ಶ್ರೀಗಂಧ. ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ನೆಲ, ಜಲ, ನಾಡು, ನುಡಿ, ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಸಂಕಲ್ಪ ಮಾಡೋಣ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದು ಶುಭಕೋರಿದ್ದಾರೆ. ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಅವರು ಸರ್ವರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ನಾಡಿನ ವೈಭವ, ಕಲೆ, ಸಾಹಿತ್ಯ, ಸಂಸ್ಕೃತಿ ಎಲ್ಲವೂ ಅನನ್ಯ. ಈ ಹೆಮ್ಮೆಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಸಂಕಲ್ಪ ಮಾಡೋಣ ಎಂದು ಕರೆ ಕೊಟ್ಟಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications