ಕನ್ನಡ ರಾಜ್ಯೋತ್ಸವ 21 + ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ! Karnataka Rajyotsava
Karnataka Rajyotsava 2025: ಕನ್ನಡ ರಾಜ್ಯೋತ್ಸವ.. ಕರುನಾಡಿನ ಎಲ್ಲಾ ಕನ್ನಡಿಗರು ಹೆಮ್ಮೆಯಿಂದ ಕನ್ನಡ ಹಬ್ಬದಲ್ಲಿ ಮಿಂದೇಳುವ ದಿನ. ಕರ್ನಾಟಕ ರಾಜ್ಯ ರಚನೆಯ ಹಿಂದೆ ಲಕ್ಷಾಂತರ ಜನರ ಹೋರಾಟ, ನೋವು ಇದೆ. ನೀರು ಕೇಳಿದರೆ ಪಾನಕ ನೀಡುತಾರೆ ಇಲ್ಲಿ.. ಎನ್ನುವಂತೆ ಕರುನಾಡು ಎಲ್ಲರನ್ನೂ ಆತ್ಮೀಯವಾಗಿಯೇ ಕಂಡಿದೆ. ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ಪ್ರತಿಯೊಬ್ಬ ಕನ್ನಡದ ಹಿರಿಮೆಯನ್ನು ಕೊಂಡಾಡುವ ದಿನ. ಎಲ್ಲಾ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಕಲಿಯೋಕೆ ಕೋಟಿ ಭಾಷೆ ಆಡೋಕೆ ಒಂದೇ ಭಾಷೆ ಕನ್ನಡ... ಕನ್ನಡ.. ಕಸ್ತೂರಿ ಕನ್ನಡ! ಎಲ್ಲಾದರೂ ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು ಎನ್ನುವ ರೋಮಾಂಚನ ಸಾಲುಗಳನ್ನು ಕೇಳುತ್ತಲ್ಲೇ ಬೆಳೆದ ನಾವಿಂದು 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿದ್ದೇವೆ. ನಿಮಗೆಲ್ಲ ಕನ್ನಡ ರಾಜ್ಯೋತ್ಸವ ಶುಭಾಶಯಗಳು. ಕನ್ನಡಿಗರಿಗೆ ವಾಟ್ಸಾಪ್, ಸಂದೇಶ ಹಾಗೂ ಫೇಸ್ಬುಕ್ ಸ್ಟೇಟಸ್ ಸೇರಿದಂತೆ ಎಲ್ಲಾ ಮಾದರಿಯ ವಿಶೇಷ ಶುಭಾಶಯ ಸಾಲುಗಳು ಇಲ್ಲಿವೆ.

1. ಕನ್ನಡ.. ಕನ್ನಡ ಆ ಸವಿಗನ್ನಡ ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
2. ದೋಸ್ತಾ ಕನ್ನಡ ರಾಜ್ಯೋತ್ಸವದ ಶುಭಾಶಯ.
3. ಸುಲಿದ ಬಾಳೆ ಹಣ್ಣಿನಂತೆ, ಸಿಗುರು ತೆಗೆದ ಕಬ್ಬಿನಂತೆ, ಉಷ್ಣ ಅಳಿದ ಹಾಲಿನಂತೆ ಕನ್ನಡ. ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
4. ಪ್ರತಿಯೊಬ್ಬ ಕನ್ನಡಿಗರಿಗೆ ವರ್ಷವೆಲ್ಲವೂ ಕನ್ನಡ ರಾಜ್ಯೋತ್ಸವವೇ. ನವೆಂಬರ್ 1 ಅದರ ಮೂರ್ತರೂಪ. ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
5. ಯಾರಪ್ಪಂದ್ ಏನೈತಿ, ಬೆಳಗಾವಿ ನಮ್ದೈತಿ .. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
6. ಕರ್ನಾಟಕದಲ್ಲಿ ಕನ್ನಡಿಗನಾಗಿರು.. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
7. ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು
ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು
ಬದುಕಿದು ಜಟಕ ಬಂಡಿ,
ಇದು ವಿಧಿ ಓಡಿಸುವ ಬಂಡಿ... ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
8. ನಮ್ಮ ಕನ್ನಡ, ನಮ್ಮೆಲ್ಲರ ಹೆಮ್ಮೆ. ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
9. ಬಾರಿಸು ಕನ್ನಡ ಡಿಂಡಿಮವ, ಓ ಕರ್ನಾಟಕ ಹೃದಯ ಶಿವ, ಬಾರಿಸು ಕನ್ನಡ ಡಿಂಡಿಮವ. ನಿಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
10. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು... ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
11. ಕನ್ನಡ ಮಾತನಾಡಿ, ಕನ್ನಡ ಬರದವರಿಗೆ ಕನ್ನಡ ಕಲಿಸಿ... ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
12. ನವೆಂಬರ್ ಮಾತ್ರವಲ್ಲ ವರ್ಷಪೂರ್ತಿ ಕನ್ನಡಿಗರಿಗೆ ಕನ್ನಡ ಹಬ್ಬವೇ. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
13. ಭವ್ಯ ಇತಿಹಾಸ, ಪರಂಪರೆ ನಮ್ಮದು. ವಿಶ್ವ ಲಿಪಿಗಳ ರಾಣಿ ಕನ್ನಡ ಎನ್ನುವ ಹಿರಿಮೆ ಕನ್ನಡಕ್ಕಿದೆ. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು
14. ಸರ್ವಧರ್ಮಿಯರು ಕಟ್ಟಿದ ಕನ್ನಡವಿದು.. ಈ ಪರಂಪರೆ ಮುಂದುವರಿಯಲಿ ಎಲ್ಲರಿಗೂ ಕನ್ನಡ ರಾಜ್ಯೋತ್ಸವ ಶುಭಾಶಯಗಳು.

15. ಎಲ್ಲಾದರೂ ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು. ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
16. ಗಗನ ಗಾಳಿಯಲಿ ಜಿಗಿದು ಜೀವಿಸಲಿ ಚೆಲುವ ಕನ್ನಡದ ಬಾವುಟ! ನಿಮ್ಮೆಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯ
17. ಕನ್ನಡ ಕಾರುಣ್ಯದ ಭಾಷೆ. ಕನ್ನಡ ಗೊತ್ತಿಲ್ಲ ಎನ್ನುವವರಿಗೆ ಪ್ರೀಯಿಂದಲೇ ಕಿವಿ ಹಿಂಡಿ ಕನ್ನಡ ಕಲಿಸೋಣ. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
18. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
19. ನಿಮ್ಮ ಮನೆ ಭಾಷೆ ಮನೆಗಿರಲಿ.. ನಾಡಭಾಷೆ
20. ಸಾಧುಂಗೆ ಸಾಧು
ಮಾಧುರ್ಯಂಗೆ ಮಾಧುರ್ಯನ್
ಬಾಧಿಪ್ಪ ಕಲಿಗೆ ಕಲಿಯುಗ ವಿಪರೀತನ್
ಮಾಧವನೀತನ್ ಪೆರನಲ್ಲ...
ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
21. ಕೊಡವ, ತುಳು, ಬ್ಯಾರಿ ಸೇರಿ ಹಲವು ಭಾಷೆಗಳು ಕನ್ನಡದ ಸೋದರ ಭಾಷೆಗಳು ಕನ್ನಡದೊಂದಿಗೆ ಒಂದಾಗಿರುವ ಈ ಭಾಷೆಗಳೂ ಬೆಳೆಯಲಿ. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
22. ಕನ್ನಡವೇ ಕನ್ನಡಿಗರ ಅಸ್ಮಿತೆ.. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
23. ಕನ್ನಡ ಎನೆ ಕುಣಿದಾಡುವುದೆನ್ನೆದೆ ಕನ್ನಡವೆನೆ ಕಿವಿ ನಿಮಿರುವುದು. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications