270 ಕಲಾವಿದರಿಗೆ ಪಿಂಚಣಿ ಮಂಜೂರು; ಕನ್ನಡ ಮಾತನಾಡಿದರೆ ಮಾತ್ರ ಭಾಷೆಯ ಬೆಳವಣಿಗೆ; ತಂಗಡಗಿ
ಕೊಪ್ಪಳ: ಸಂಸ್ಕೃತಿಗೆ ಧಕ್ಕೆಯಾಗದಂತೆ ಕನ್ನಡ ಭಾಷೆಯನ್ನು ಸಧೃಡವಾಗಿ ಉಳಿಸಿ, ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ನಿರಂತರ ಬಳಕೆಯಿಂದ ಭಾಷೆ ಉಳಿಯುತ್ತದೆ. ಏಕೀಕರಣ ಚಳವಳಿಯಲ್ಲಿ ಕೊಪ್ಪಳದ ಪಾತ್ರ ಮಹತ್ವದ್ದು, ಈ ಜಿಲ್ಲೆ ಸುಮಾರ 270 ಕಲಾವಿದರಿಗೆ ಪಿಂಚಣಿ ಮಂಜೂರು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್. ಎಸ್.ತಂಗಡಗಿ ಹೇಳಿದರು. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಜಿಲ್ಲೆಯ ಶಿವಲಿಂಗಪ್ಪ, ದಾವಲಸಾಬ ಅತ್ತಾರ ಸೇರಿ ಇತರ 69 ಮಂದಿಗೆ ಸಚಿವರು ಅಭಿನಂದನೆ ತಿಳಿಸಿದರು.
71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕನ್ನಡ ನಾಡಿನಲ್ಲಿ ಮಾತೃಭಾಷೆಯಾದ ಕನ್ನಡಕ್ಕೆ ಪ್ರಥಮ ಆದ್ಯತೆ ಎಂಬ ನೀತಿಯನ್ನು ನಮ್ಮ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಇದಕ್ಕೆ ಪೂರಕವಾಗಿ ಎಲ್ಲಾ ಹಂತಗಳಲ್ಲೂ ಕನ್ನಡದ ಅನುಷ್ಠಾನಕ್ಕೆ ಮುಂದಾಗಿದೆ ಎಂದು ಹೇಳಿದರು.

ನಿತ್ಯ ಕನ್ನಡ ಭಾಷೆ ಬಳಸಿದ್ರೆ ಮಾತ್ರ ಬೆಳವಣಿಗೆ ಸಾಧ್ಯ
ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ನಮ್ಮ ಸರ್ಕಾರವು ಹೆಚ್ಚಿನ ಒತ್ತು ನೀಡಿದೆ. ಕನ್ನಡವನ್ನು ಕನ್ನಡಿಗರೆಲ್ಲರೂ ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯವಿದೆ. ಕನ್ನಡದ ಲಿಪಿಯನ್ನು ಮುಂದಿನ ಜನಾಂಗಕ್ಕೂ ಬರೆಯಲು ಕಲಿಸಿದಾಗ ಮಾತ್ರ ಈ ಭಾಷೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗಲು ಸಾಧ್ಯ ಎಂದರು.
ರಾಷ್ಟ್ರಕವಿ ಕುವೆಂಪು ಅವರು ಹೇಳುವಂತೆ ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಇಲ್ಲಿ ವಿವಿಧತೆಯಲ್ಲಿ ಏಕತೆ ನೆಲೆಸಿದೆ. ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಿಂದ ಶ್ರೀಮಂತವಾಗಿದೆ. ಕರ್ನಾಟಕಕ್ಕೆ ಭವ್ಯ ಇತಿಹಾಸವಿದ್ದು, ಮೌರ್ಯರು, ಕದಂಬರು, ವಿಜಯನಗರದ ಅರಸರು ಸೇರಿದಂತೆ ಇನ್ನು ಅನೇಕ ರಾಜ-ಮನೆತನಗಳು ನಾಡಿಗೆ ನೀಡಿದ ಕೊಡುಗೆ ಅಮೋಘವಾಗಿದೆ. ಸಾಮಾಜಿಕ ಕ್ರಾಂತಿಯ ಹರಿಕಾರ ಜಗಜ್ಯೋತಿ ಬಸವಣ್ಣನವರಂಥಹ ವಚನಕಾರರು, ಪುರಂದರ ದಾಸರು, ಕನಕದಾಸರು, ಸಂತಕವಿಗಳು ಬಾಳಿ ಬದುಕಿದ ನೆಲ ಇದು. ಐತಿಹಾಸಿಕ ಜಿಲ್ಲೆಯಾಗಿರುವ ಕೊಪ್ಪಳ ಜಿಲ್ಲೆಯು ಅಪಾರ ವೈವಿಧ್ಯತೆ ಹೊಂದಿದ್ದು, ವಿವಿಧ ಸಮುದಾಯಗಳ ಸಂಪ್ರದಾಯ, ಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ ಸಮೃದ್ದಿಯಾಗಿದೆ ಎಂದು ಶ್ಲಾಘಿಸಿದರು.
ಸ್ವಾತಂತ್ರ್ಯ ಪೂರ್ವದಿಂದಲೂ ಕನ್ನಡ ನಾಡಿಗಾಗಿ ಏಕತೆಯ ಹೋರಾಟ ನಡೆದು 1956 ರಲ್ಲಿ ಭಾಷಾವಾರು ಪ್ರಾಂತ್ಯಗಳು ರಚನೆಯಾಗಿ ಮೈಸೂರು ರಾಜ್ಯವಾಗಿತ್ತು. ತರುವಾಯ ನವೆಂಬರ 01, 1973 ರಂದು ನಮ್ಮ ರಾಜ್ಯವು ಕರ್ನಾಟಕವೆಂದು ನಾಮಕರಣಗೊಂಡಿತು. ಅಂದಿನಿಂದ ಇಂದಿನವರೆಗೆ ಕರ್ನಾಟಕವು ಕನ್ನಡಿಗರ ಭಾವ ಬಂಧನ ಬೆಸೆಯುತ್ತಾ ಬಂದಿದೆ.
ಏಕೀಕರಣ ಚಳವಳಿಯಲ್ಲಿ ಕೊಪ್ಪಳದ ಪಾತ್ರ ಮಹತ್ವದ್ದು
ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಕೊಪ್ಪಳ ಜಿಲ್ಲೆಯ ಪಾತ್ರವೂ ಅಷ್ಟೇ ಪ್ರಮುಖವಾಗಿದೆ. ಜಿಲ್ಲೆಯ ಅಳವಂಡಿ ಶಿವಮೂರ್ತಿಸ್ವಾಮಿ, ಶಿರೂರು ವೀರಭದ್ರಪ್ಪ ತೆಗ್ಗಿನಮನಿ, ಶಂಕರಗೌಡ್ರು, ಪ್ರಭುರಾಜ ಪಾಟೀಲ್ ಸಂಗನಾಳ, ಪಂಚಾಕ್ಷರಿ ಹಿರೇಮಠ, ಸೋಮಪ್ಪ ಡಂಬಳ, ದೇವೇಂದ್ರಕುಮಾರ ಹಕಾರಿ, ಭೀಮನಗೌಡ ಪಾಟೀಲ್ ಸೇರಿ ಮುಂತಾದವರು ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ್ದನ್ನು ಅವರ ಸ್ಮರಿಸಿದರು.
ಗ್ಯಾರಂಟಿ ಯೋಜನೆಯಿಂದ ನೆಮ್ಮದಿಯ ಬದುಕು
ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಜನರು ನೆಮ್ಮದಿಯಿಂದ ಬದುಕುವಂತಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 13.49 ಕೋಟಿಗೂ ಅಧಿಕ ಮಹಿಳೆಯರು ಶಕ್ತಿ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಯುವನಿಧಿ ಯೋಜನೆಗೆ 16,856 ಯುವಕರು ನೋಂದಣಿಯಾಗಿದ್ದು, ಒಟ್ಟು 45 ಕೋಟಿ ರೂ. ವೆಚ್ಚ ಮಾಡಲಾಗಿದೆ. ಗೃಹ ಲಕ್ಷ್ಮೀ ಯೋಜನೆಯಡಿ 3,12,592 ಮಹಿಳೆಯರು ಸದುಪಯೋಗ ಪಡೆದಿದ್ದಾರೆ ಎಂದರು.
ಅನ್ನ ಭಾಗ್ಯ ಯೋಜನೆಯಡಿ 2, 90,459 ಬಿಪಿಎಲ್ ಪಡಿತರ ಕಾರ್ಡ್ ಗಳಿದ್ದು, 10,83,537 ಫಲಾನುಭವಿಗಳಿಗೆ ಪ್ರತಿ ತಿಂಗಳು 10 ಕೆಜಿ ಪಡಿತರವನ್ನು ಉಚಿತವಾಗಿ ಪಡೆಯುತ್ತಿದ್ದಾರೆ.
ಇನ್ನು ಗೃಹ ಜ್ಯೋತಿ ಯೋಜನೆಯಡಿ 2,89,875 ಗ್ರಾಹಕರ ಪೈಕಿ 2 ಲಕ್ಷದ 83 ಸಾವಿರದ 558 ಫಲಾನುಭವಿಗಳು ಈ ಯೋಜನೆಯ ಸದುಪಯೋಗವನ್ನು ಪಡೆಯುತ್ತಿದ್ದಾರೆ.
2026-27ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ಕೊಪ್ಪಳ ಜಿಲ್ಲೆಗೆ ಮೈಕ್ರೋ ವಲಯದಲ್ಲಿ 231.26 ಕೋಟಿ ರೂ. ಹಾಗೂ ಮ್ಯಾಕ್ರೋ ವಲಯದಲ್ಲಿ 99.11 ಕೋಟಿ ರೂ. ಹೀಗೆ ಒಟ್ಟು 330.37 ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ವಿಬಿ-ಜಿ ರಾಮಜಿ ಯೋಜನೆಯಡಿ ಉದ್ಯೋಗ ಒದಗಿಸಲು ರೂ.469.67 ಕೋಟಿ ಕ್ರಿಯಾ ಯೋಜನೆ ಸಿದ್ಧಪಡಿಸಿ 12,846 ಕಾಮಗಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಬರಗಾಲಕ್ಕೆ ಅನುಗುಣವಾಗಿ ಕೆರೆ ಪುನಃಶ್ಚತನ, ಕೃಷಿ ಹೊಂಡ, ವೈಯಕ್ತಿಕ/ಸಮುದಾಯ ಕೊಳವೆ ಬಾವಿ ಮರುಪೂರಣ ಘಟಕ, ಕುರಿ, ಕೋಳಿ, ಹಂದಿ ಶೆಡ್ಗಳ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅಕ್ಟೋಬರ್ 23 ರ ಅಂತ್ಯಕ್ಕೆ ಒಟ್ಟು 18.51 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ವಿವರಿಸಿದರು.
270 ಕಲಾವಿದರಿಗೆ ಪಿಂಚಣಿ ಮಂಜೂರು
ಕಲೆ ಮತ್ತು ಸಂಸ್ಕೃತಿ ಪ್ರೋತ್ಸಾಹಕ್ಕಾಗಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ, ಚಿಗುರು, ಯುವ ಸೌರಭ ಮತ್ತು ಕಲಾ ಪ್ರತಿಭೋತ್ಸವದಂತಹ ಕಾರ್ಯಕ್ರಮಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಅದರ ಜೊತೆಗೆ ಕಷ್ಟ ಪರಿಸ್ಥಿತಿಯಲ್ಲಿರುವ ಕಲಾವಿದರ ಆರ್ಥಿಕ ನೆರವಿಗಾಗಿ ಸರ್ಕಾರದಿಂದ ಕೊಪ್ಪಳ ಜಿಲ್ಲೆಯ ಒಟ್ಟು 270 ಕಲಾವಿದರಿಗೆ ಪಿಂಚಣಿ ಮಂಜೂರು ಮಾಡಲಾಗಿದೆ ಎಂದು ತಮ್ಮ ಭಾಷಣದಲ್ಲಿ ಮಾಹಿತಿ ನೀಡಿದರು.
ಗಂಗಾವತಿ ಉಪವಿಭಾಗ ಆಸ್ಪತ್ರೆಯು ರಾಜ್ಯದಲ್ಲಿಯೇ 16 ವಿಭಾಗಗಳಲ್ಲಿ ರಾಷ್ಟ್ರೀಯ ಗುಣಮಟ್ಟ ಖಾತ್ರಿ ಯೋಜನೆಯಡಿಯಲ್ಲಿ ಪ್ರಮಾಣ ಪತ್ರ ಪಡೆದ ಮೊದಲ ತಾಲ್ಲೂಕು ಆಸ್ಪತ್ರೆಯಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ 14 ವರ್ಷದಿಂದ 15 ವರ್ಷದೊಳಗಿನ ಒಟ್ಟು 12,188 ಹೆಣ್ಣು ಮಕ್ಕಳಿಗೆ ಹೆಚ್.ಪಿ.ವಿ ಲಸಿಕೆಯನ್ನು ಹಾಕಲಾಗಿದೆ. ಜಿಲ್ಲೆಯು ಕ್ಷಯರೋಗ ಪತ್ತೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ. ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಮಲೇರಿಯಾ ನಿವಾರಣೆ "ಶೂನ್ಯ ಮಲೇರಿಯಾ" ಸ್ಥಿತಿಯನ್ನು ಕಾಪಾಡಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ರಾಘವೇಂದ್ರ ಹಿಟ್ನಾಳ್, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್, ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ್, ಸಿಇಓ ವರ್ಣಿತ ನೇಗಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Click it and Unblock the Notifications