ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಸಮಿತಿ ರಚನೆ, ಅರ್ಜಿ ಸಲ್ಲಿಕೆ ಹೇಗೆ?
ಬೆಂಗಳೂರು, ಅಕ್ಟೋಬರ್ 01: ಕರ್ನಾಟಕ ಸರ್ಕಾರ 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರನ್ನು ಆಯ್ಕೆ ಮಾಡಲು ಸಮಿತಿ ರಚನೆ ಮಾಡಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕಲು ಆನ್‌ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲು ಸಮಿತಿ ರಚಿಸಲಾಗಿದೆ. 38 ಸದಸ್ಯರನ್ನೊಳಗೊಂಡ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯು ಅರ್ಹರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯುವ ಸಮಿತಿಯ ಸಭೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ 1ರಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಆನ್‌ಲೈನ್ ಮೂಲಕ ಅರ್ಜಿ ಹಾಕಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ. 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಶಿಫಾರಸ್ಸು ಮಾಡಲು ಸಾರ್ವಜನಿಕರಿಂದ ನಾಮನಿರ್ದೇಶನವನ್ನು ಆಹ್ವಾನಿಸಲಾಗಿದೆ.
ನಾಮನಿರ್ದೇಶನದ ಅವಧಿಯು ಅಕ್ಟೋಬರ್ 1 ರಿಂದ 15ರ ವರೆಗೆ ಇದ್ದು, ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.inಮೂಲಕ ಶಿಫಾರಸು ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೇಳಿದೆ.
ಕೆಲವು ವರ್ಷಗಳಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆನ್‌ಲೈನ್ ಮೂಲಕವೇ ಅರ್ಜಿಗಳನ್ನು ಸ್ವೀಕಾರ ಮಾಡುತ್ತದೆ. ಆಫ್‌ಲೈನ್‌ನಲ್ಲಿ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಇಲಾಖೆ ಸ್ಪಷ್ಟವಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಅಥವ ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ವಿವಿಧ ಕ್ಷೇತ್ರಗಳ ಗಣ್ಯರನ್ನು ಆಯ್ಕೆ ಮಾಡಿ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ.
2022ನೇ ಸಾಲಿನಲ್ಲಿ ಒಟ್ಟು 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿತ್ತು. ಈ ಪ್ರಶಸ್ತಿಯೂ ಪ್ರಶಸ್ತಿ ಫಲಕ, 5 ಲಕ್ಷ ರೂಪಾಯಿ ನಗದನ್ನು ಒಳಗೊಂಡಿದೆ. ಈ ಪ್ರಶಸ್ತಿಗೆ ಸಾಧಕರನ್ನು ಮುಖ್ಯಮಂತ್ರಿಗಳ ನೇತೃತ್ವದ ಸಮಿತಿ ಅಂತಿಮಗೊಳಿಸುತ್ತದೆ.
ಕಳೆದ ವರ್ಷ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ರಾಷ್ಟ್ರಾದ್ಯಂತ ಅಮೃತಮಹೋತ್ಸವವನ್ನು ಆಚರಿಸಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ಸಮಾಜದಲ್ಲಿ ಉತ್ತಮ ಕಾರ್ಯವನ್ನು ನಿರ್ವಹಿಸುತ್ತಿರುವ ಅನೇಕ ಸಂಘ-ಸಂಸ್ಥೆಗಳಿದ್ದು, ಅವುಗಳನ್ನು ಗುರುತಿಸಲು ಇದು ಸದಾವಕಾಶವಾಗಿದೆ ಎಂದು ತಿಳಿಸಲಾಗಿತ್ತು.
ಅದರ ನಿಮಿತ್ತವಾಗಿ 10 ಸಂಸ್ಥೆಗಳಿಗೆ ಅಮೃತ ಮಹೋತ್ಸವದ ರಾಜ್ಯ ಪ್ರಶಸ್ತಿಯನ್ನು ನೀಡಬಹುದೆಂದು ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ನಿರ್ಧರಿಸಲಾಗಿತ್ತು. ಅದರನ್ವಯ ರಾಜ್ಯೋತ್ಸವ ಪ್ರಶಸ್ತಿ ಸಂದರ್ಭದಲ್ಲಿ 10 ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ -2022 ಅನ್ನು ನೀಡಲು ಸರ್ಕಾರವು ನಿರ್ಧರಿಸಿತ್ತು.
ಸರ್ಕಾರದ ಆದೇಶ ದಿನಾಂಕ 30/10/2022ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ರಾಷ್ಟ್ರಾದ್ಯಂತ ಅಮೃತ ಮಹೋತ್ಸವದ ಆಚರಣೆಯ ಸಂಬಂಧ 10 ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ - 2022 ಅನ್ನು ನೀಡಿ ಗೌರವಿಸಲು ಸರ್ಕಾರವು ಹರ್ಷಿಸುತ್ತದೆ ಎಂದು ಹೇಳಿತ್ತು.
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆ ಕೆಲವು ವರ್ಷ ವಿವಾದ ಹುಟ್ಟು ಹಾಕಿದ್ದು, ಇದೆ. ಸಾಧಕರ ಆಯ್ಕೆ, ಸಮಿತಿ ರಚನೆ ಮುಂತಾದ ವಿಚಾರ ಮುಂದಿಟ್ಟುಕೊಂಡು ಕೆಲವರು ಕೋರ್ಟ್ ಮೆಟ್ಟಿಲು ಸಹ ಏರಿದ್ದರು.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?











Click it and Unblock the Notifications