ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರುನಾಡಿಗೆ 59ನೇ ಜನ್ಮದಿನ, ಕಾರ್ಯಕ್ರಮಗಳ ಪಟ್ಟಿ

|
Google Oneindia Kannada News

ಬೆಂಗಳೂರು, ನ.1 : ಕರುನಾಡಿಗೆ ಇಂದು 59ನೇ ಜನ್ಮದಿನ. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ಮೇಳದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡು ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಇಂದು ಬೆಳಗ್ಗೆ 9 ಗಂಟೆಗೆ ಆರಂಭವಾಗಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಬೆಳಗಾವಿ, ಬೆಂಗಳೂರು, ಮೈಸೂರು ಹಾಗೂ ಕಲಬುರ್ಗಿ ವಿಭಾಗದ 9,691 ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.

 Kannada

ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡಿಗರಿಗೆ ಟ್ವೀಟರ್ ಮೂಲಕ ಶುಭಾಶಯ ಸಲ್ಲಿಸಿದ್ದಾರೆ. [ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ]

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳ ಪಟ್ಟಿ

* ಆಮ್ ಆದ್ಮಿ ಪಕ್ಷದ ವತಿಯಿಂದ ಬೆಂಗಳೂರಿನ ಗೋವಿಂದರಾಜನಗರ ಮತ್ತು ವಿಜಯನಗರದ ಕಾರ್ಯಕರ್ತರು ಕನ್ನಡ ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ. ವಿದ್ಯಾಶಂಕರ್, ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಭಾಗವಹಿಸಲಿದ್ದು, ಪಕ್ಷದ ಮುಖಂಡರಾದ ರವಿ ಕೃಷ್ಣ ರೆಡ್ಡಿ , ರಾಜ್ಯ ಸಂಚಾಲಕರಾದ ಸಿದ್ಧಾರ್ಥ್ ಶರ್ಮ ಮತ್ತಿತರರು ಭಾಗವಹಿಸಲಿದ್ದಾರೆ. ಶಂಕರನಾಗ್ ಆಟೋ ಸ್ಟ್ಯಾಂಡ್ (ವಿಜಯನಗರ ಬಸ್ ಸ್ಟ್ಯಾಂಡ್) ಬಳಿ 9.30ಕ್ಕೆ ಕಾರ್ಯಕ್ರಮ ನಡೆಯಲಿದೆ.

* ಕನ್ನಡ ರಾಜ್ಯೋತ್ಸವ ದಿನಾಚರಣಾ ಸಮಿತಿ ವತಿಯಿಂದ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ಮಾಜಿ ಪ್ರಧಾನಿ ಹಾಗೂ ಲೋಕಸಭಾ ಸದಸ್ಯರಾದ ಎಚ್.ಡಿ. ದೇವೇಗೌಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ ಅವರು ಧ್ವಜಾರೋಹಣ ಹಾಗೂ ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. [ರಾಜ್ಯೋತ್ಸವ ಸಂದರ್ಭದಲ್ಲಿ ನಾಡ ಗೀತೆ ಓದಿ, ಕೇಳಿ]

* 58 ಸಾಹಿತಿಗಳಿಗ ಸನ್ಮಾನ ಮತ್ತು ಹಾಸ್ಯ ಸಂಭ್ರಮ ಕಾರ್ಯಕ್ರಮ ಬೆಂಗಳೂರಿನ ಕೆ.ಜಿ.ರಸ್ತೆಯಲ್ಲಿರುವ ಶಿಕ್ಷಕರ ಸದನದಲ್ಲಿ ನಡೆಯಲಿದೆ. ಸ್ವಪ್ನ ಬುಕ್ ಹೌಸ್ ಈ ಕಾರ್ಯಕ್ರಮ ಆಯೋಜಿಸಿದ್ದು, ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ, ಹಿರಿಯ ಸಾಹಿತಿ ಪ್ರೊ.ಜಿ.ವೆಂಕಟಸುಬ್ಬಯ್ಯ, ತರಳಬಾಳು ಸ್ವಾಮೀಜಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಬೆಳಗ್ಗೆ 10.15ಕ್ಕೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ.

* ಕನ್ನಡ ರಾಜ್ಯೋತ್ಸವ ಸಮಿತಿ ವತಿಯಿಂದ ಭುವನೇಶ್ವರಿ ಪೂಜೆ, ಧ್ವಜಾರೋಹಣ ಬೆಳಗ್ಗೆ 9.30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆಯಲಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಧ್ವಜಾರೋಹಣ ಮಾಡಲಿದ್ದಾರೆ.

*ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಬಣದಿಂದ ಧ್ವಜಾರೋಹಣ ಮತ್ತು ಕನ್ನಡ ರಾಜ್ಯೋತ್ಸವ ಆಚರಣೆ ಬೆಳಗ್ಗೆ 10.30ಕ್ಕೆ ಭೈರತಿಯಲ್ಲಿ ನಡೆಯಲಿದೆ. ಪ್ರವೀಣ್ ಕುಮಾರ್ ಶೆಟ್ಟಿ, ಶಾಸಕ ಬಸವರಾಜು ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

* ಸಂಜೆ 6.30ಕ್ಕೆ 59 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವ ಕಾರ್ಯಕ್ರಮ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಕೇಂದ್ರ ಸಚಿವ ಅನಂತ ಕುಮಾರ್, ಸಚಿವರಾದ ರಾಮಲಿಂಗಾ ರೆಡ್ಡಿ, ಉಮಾಶ್ರೀ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

*ಕನ್ನಡ ಪುಸ್ತಕ ಪ್ರಕಾಶಕರ ಸಂಘ ವಿಜಯನಗರದ ಆದಿಚುಂಚನಗಿರಿ ಆಟದ ಮೈದಾನದಲ್ಲಿ ಸಂಜೆ 5 ಗಂಟೆಗೆ ಬೃಹತ್ ಪುಸ್ತಕ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾಹಿತಿ ದೊಡ್ಡರಂಗೇಗೌಡ, ಬಂಜೆಗೆರೆ ಜಯಪ್ರಕಾಶ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

* ಮಹಿಳಾ ವಿಶೇಷ ಘಟಕದ ಉದ್ಫಾಟನಾ ಸಮಾರಂಭ : ಉದ್ಘಾಟನೆ ಸಿಎಂ ಸಿದ್ದರಾಮಯ್ಯ, ಭಾಗವಹಿಸುವವರು ಸಚಿವ ಆರ್. ರೋಷನ್ ಬೇಗ್, ಸಚಿವೆ ಉಮಾಶ್ರೀ, ಮಧ್ಯಾಹ್ನ 12.30ಕ್ಕೆ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣ, ಶಿವಾಜಿನಗರ.

English summary
59th Karnataka Rajyotsava celebrating in Karnataka on Saturday, November 1. Here is Kannada rajyotsava functions list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X