ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ರಾಜ್ಯೋತ್ಸವ: ಶಿಕ್ಷಣ ಇಲಾಖೆಯಿಂದ ಅ. 28ರಂದು 'ಕೋಟಿ ಕಂಠ ಗಾಯನ'

|
Google Oneindia Kannada News

ಬೆಂಗಳೂರು, ಅಕ್ಟೋಬರ್ 21: ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಮತ್ತು ಕಚೇರಿಗಳಲ್ಲಿ 67ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅಕ್ಟೋಬರ್ 28ರಂದು 'ಕೋಟಿ ಕಂಠ ಗಾಯನ' ಕಾರ್ಯಕ್ರಮ ಹಮ್ಮಿಕೊಂಡಿದೆ. ಅಂದು ಸರ್ಕಾರ ಸೂಚಿಸಿದ ಕನ್ನಡದ ಗೀತೆಗಳು ಮೊಳಗಲಿವೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ನನ್ನ ನಾಡು-ನನ್ನ ಹಾಡು 'ಕೋಟಿ ಕಂಠ ಗಾಯನ' ಸಮೂಹ ಕಾರ್ಯಕ್ರಮ ಆಯೋಜನೆ ಕುರಿತು ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಸಭೆ ನಡೆಸಿ ತಿರ್ಮಾನಿಸಲಾಗಿದೆ. ರಾಜ್ಯೋತ್ಸವ ಅಂಗವಾಗಿ ಸೂಚಿಸಲಾಗದ ಮೂರು ಆಯ್ದ ಗೀತೆಗಳನ್ನು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳು ಹಾಡಲಿದ್ದಾರೆ. ಮಕ್ಕಳ ಜೊತೆಗೆ ಎಲ್ಲ ಕಚೇರಿಗಳಲ್ಲಿ ನಡೆಯಲಿದೆ. ಈ ವೇಳೆ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು, ಎಸ್‌ಡಿಎಂಸಿ ಆಡಳಿತ ಸಿಬ್ಬಂದಿ, ಅಧಿಕಾರಿಗಳು ಹಾಗೂ ನೌಕರರನ್ನು ಪಾಲ್ಗೊಳ್ಳುವಂತೆ ತಿಳಿಸಲಾಗಿದೆ.

 Breaking: ಹಿಂದಿ ಭಾಷೆಯಲ್ಲಿ ವೈದ್ಯಕೀಯ ಶಿಕ್ಷಣ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಘೋಷಣೆ Breaking: ಹಿಂದಿ ಭಾಷೆಯಲ್ಲಿ ವೈದ್ಯಕೀಯ ಶಿಕ್ಷಣ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಘೋಷಣೆ

kannada rajyotsava karnataka Education dept. organize Koti Kantha Gayana on Oct.28th

ಯಾವು ಹಾಡುಗಳು ಮೊಳಗಲಿವೆ?

ಅಕ್ಟೋಬರ್ 28ರಂದು ಬೆಳಗ್ಗೆ 11ಗಂಟೆಗೆ ಕಾರ್ಯಕ್ರಮ ಜರುಗಲಿದ್ದು, ಕನ್ನಡದ ಶ್ರೇಷ್ಠತೆಯನ್ನು ಸಾರಲಾಗುತ್ತದೆ. ರಾಜ್ಯ ಸರ್ಕಾರ ಸಾಮೂಹಿಕ ಹಾಡಿಗೆ ಕೆಲವು ಕನ್ನಡದ ಹಾಡುಗಳನ್ನು ಸೂಚಿಸಿದ್ದು, ಅದರಲ್ಲಿ ಮೂರು ಹಾಡು ಹಾಡಬೇಕಿದೆ. ಮೊದಲು 'ನಾಡಗೀತೆ' ನಂತರ ಹುಯಿಲಗೊಳ ನಾರಾಯಣರಾಯರ 'ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು', ರಾಷ್ಟ್ರಕವಿ ಕುವೆಂಪು ಅವರ 'ಬಾರಿಸು ಕನ್ನಡ ಡಿಂಡಿಮವಾ',ಡಾ.ಡಿ.ಎಸ್‌. ಕರ್ಕಿ ಅವರ 'ಹೆಚ್ಚೇವು ಕನ್ನಡದ ದೀಪ', ಡಾ.ಚನ್ನವೀರ ಕಣವಿ ಅವರ 'ವಿಶ್ವವಿನೂತನ ವಿದ್ಯಾಚೇತನ' ಹಾಗೂ ಡಾ. ಹಂಸಲೇಖ ಅವರ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಎಂಬ ಹಾಡುಗಳನ್ನು ಹಾಡುವಂತೆ ತಿಳಿಸಿದೆ.

kannada rajyotsava karnataka Education dept. organize Koti Kantha Gayana on Oct.28th

ಕಾರ್ಯಕ್ರಮದಲ್ಲಿ ಭಾಗವಹಿಸುವುದು ಹೇಗೆ?

'ಕೋಟಿ ಕಂಠ ಗಾಯನ' ಕಾರ್ಯಕ್ರಮದಲ್ಲಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳು ಅವಕಾಶ ನೀಡಲಾಗಿದೆ. ಇಂದಿನಿಂದ ಅಕ್ಟೋಬರ್ 28ರವರೆಗೆ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿಗೆ ಈ ವೆಬ್‌ಸೈಟ್‌ ಗೆ ಭೇಟಿ ನೀಡಿ ಕ್ಯೂರ್‌ ಕೋಡ್ ಸ್ಕ್ಯಾನ್ ಮಾಡಬಹುದು. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಶಾಲಾ ಮುಖ್ಯಸ್ಥರನ್ನು ಭೇಟಿ ಮಾಡಬೇಕು ಎಂದು ಸುತ್ತೋಲೆ ತಿಳಿಸಿದೆ.

English summary
https://kannada.oneindia.com/news/india/do-you-know-where-is-the-slowest-train-that-runs-only-46-km-in-5-hours-272272.html
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X