Get Updates
Get notified of breaking news, exclusive insights, and must-see stories!

ರಾಜ್ಯೋತ್ಸವದಂದು ಕನ್ನಡದ 5 ಗೀತೆಗಳ ಗಾಯನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ!

ಬೆಂಗಳೂರು, ಅಕ್ಟೋಬರ್‌ 21: ಕರ್ನಾಟಕದ ಜನತೆಗೆ ನವೆಂಬರ್ 1 ಹೆಮ್ಮೆಯ ದಿನವಾಗಿದೆ. ಪ್ರತಿ ವರ್ಷ ಬಹಳ ಅದ್ದೂರಿಯಾಗಿ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತದೆ.

ಕರ್ನಾಟಕದ ಪ್ರತಿ ಮನೆಯಲ್ಲೂ ಹಬ್ಬದ ರೀತಿಯಲ್ಲಿ ರಾಜ್ಯೋತ್ಸವವನ್ನು ಆಚರಣೆ ಮಾಡುತ್ತಾರೆ. ಈ ಬಾರಿ ರಾಜ್ಯ ಸರ್ಕಾರ ವಿಶಿಷ್ಟ ಕಾರ್ಯಕ್ರಮದ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ.

Kannada Rajyotsava: Singing Of 5 Kannada Songs Is Compulsory On Rajyotsava

ಹೌದು, ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣಗೊಂಡು ನವೆಂಬರ್‌ 01 ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ ಐದು ಕನ್ನಡಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶವನ್ನ ಹೊರಡಿಸಿದೆ.

ಕರ್ನಾಟಕ ಸಂಭ್ರಮ-50ರ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕ ಅರಿವು ಮೂಡಿಸುವ ಯೋಜನೆ ಹಮ್ಮಿಕೊಳ್ಳುವಂತೆ ಕರ್ನಾಟಕ ಸರ್ಕಾರ ಸೂಚಿಸಿದೆ.

ಇನ್ನೂ ರಾಜ್ಯಾದ್ಯಂಕ ಎಲ್ಲ ಜಿಲ್ಲಾ ಹಾಗೂ ತಾಲೂಕು ಮತ್ತು ಗ್ರಾಮಪಂಚಾಯಿತಿ ಮಟ್ಟದಲ್ಲಿ ನವೆಂಬರ್‌ 1 ರಂದು ರಾಜ್ಯೋತ್ಸವ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿರುವಂತೆ ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ, ತಾಯಿಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಂತರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು (ಹುಯಿಳಗೋಳ ನಾರಾಯಣ ರಾಯರು), ಎಲ್ಲಾದರೂ ಇರು ಎಂತಾದರು ಇರು (ಕುವೆಂಪು), ಒಂದೇ ಒಂದೇ ಕರ್ನಾಟಕ ಒಂದೇ ( ದ. ರಾ. ಬೇಂದ್ರೆ), ಹೊತ್ತಿತೋ ಹೊತ್ತಿತು ಕನ್ನಡ ದೀಪ ( ಸಿದ್ದಯ್ಯ ಪುರಾಣಿಕ) ಮತ್ತು ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ (ಚನ್ನವೀರ ಕಣವಿ) ಗೀತೆಗಳನ್ನು ಕಡ್ಡಾಯವಾಗಿ ಹಾಡಬೇಕು ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+