ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ನಿಧನ

|
Google Oneindia Kannada News

ಬೆಂಗಳೂರು, ಜ.10: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೋಟಣನಕುಂಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾರ್ಥೀವ ಶರೀರವನ್ನು ಯಲಚೇನಹಳ್ಳಿ ಸಮೀಪದ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಚಂಪಾ ಅವರಿಗೆ 83 ವರ್ಷ ವಯಸ್ಸಾಗಿತ್ತು.

83ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಪಾಟೀಲರ ವ್ಯಕ್ತಿಚಿತ್ರ83ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಪಾಟೀಲರ ವ್ಯಕ್ತಿಚಿತ್ರ

ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಚಂಪಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಪರಿಷತ್ತಿನ ಮೂಲಗಳು ತಿಳಿಸಿವೆ.

Kannada Sahitya Parishat Former President Chandrashekar Patil dies

ಕನ್ನಡದ ಕವಿ, ನಾಟಕಕಾರ, ಹೋರಾಟಗಾರರಾದ ಚಂದ್ರಶೇಖರ ಪಾಟೀಲ ಅವರು 'ಚಂಪಾ' ಎಂದೇ ಪ್ರಖ್ಯಾತರಾಗಿದ್ದರು. 1939ರಲ್ಲಿ ಅವರು ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ ಜನಿಸಿದ್ದರು. ಹತ್ತಿಮತ್ತೂರು- ಹಾವೇರಿ ಶಾಲೆ-ಹೈಸ್ಕೂಲ್ ಮುಗಿಸಿ 1956ರಲ್ಲಿ ಕರ್ನಾಟಕ ಕಾಲೇಜಿಗೆ ಸೇರಿದರು. 1960ರಲ್ಲಿ ಬಿಎ ಪೂರೈಸಿ ಕರ್ನಾಟಕ ವಿಶ್ವವಿದ್ಯಾಲಯದಿಂದ 1962ರಲ್ಲಿ ಎಂ.ಎ. ಮುಗಿಸಿದರು. 1969ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾದರು. 1980-82ರಲ್ಲಿ ಧಾರವಾಡದ ಅಖಿಲ ಕರ್ನಾಟಕ ಕೇಂದ್ರ ಕ್ರಿಯಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಗೋಕಾಕ್ ಚಳವಳಿಗೆ ಪ್ರೇರಣಿ ನೀಡಿದ ಪ್ರಮುಖರಲ್ಲಿ ಚಂಪಾ ಒಬ್ಬರಾಗಿದ್ದರು.

ಕಸಾಪ ಅಧ್ಯಕ್ಷರಾಗಿ ಸೇವೆ:
ಚಂಪಾ ಅವರು 2004-08ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಕ್ರಾಂತಿಕಾರ ಮನೋಭಾವ ಹೊಂದಿದ್ದ ಚಂಪಾ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತನ್ನು ರಾಜ್ಯವ್ಯಾಪಿ ವಿಸ್ತರಿಸುವಲ್ಲಿ ಮತ್ತು ಕನ್ನಡವನ್ನು ಜನರಿಗೆ ತಲುಪಿಸುವಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ.

ಸಂಕ್ರಮಣ ಎಂಬ ಪತ್ರಿಕೆಯನ್ನು ಕಳೆದ 50 ವರ್ಷಗಳಿಂದ ನಿರಂತರವಾಗಿ ಪ್ರಕಟಿಸುತ್ತಿರುವ ಚಂಪಾ ಅವರು ಹತ್ತಕ್ಕೂ ಹೆಚ್ಚು ಗ್ರಂಥಗಳನ್ನು ಸಂಪಾದಿಸಿದ್ದಾರೆ. ಕನ್ನಡ ಸಾಹಿತ್ಯ ಅಕಾಡೆಮಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹೀಗೆ ಹಲವು ಪ್ರಶಸ್ತಿಗಳು ಚಂಪಾ ಅವರಿಗೆ ಸಂದಿವೆ.

ಹೋರಾಟಗಾರ:
ಚಂಪಾ ಅವರು ಒಬ್ಬ ಸಾಹಿತಿಯಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಗುರುತಿಸಿಕೊಂಡದ್ದಕ್ಕಿಂತ ಒಬ್ಬ ಹೋರಾಟಗಾರರಾಗಿ ಹೆಚ್ಚು ಗುರುತಿಸಿಕೊಂಡವರು. ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಕಡ್ಡಾಯವಾಗಬೇಕು ಎಂದು ಬಹಳ ಸಂಘಟಿತವಾದಂತಹ ಹೋರಾಟ ರೂಪಿಸಿದ್ದರು. ಕೇಂದ್ರ ಪಠ್ಯಕ್ರಮದಲ್ಲಿಯೂ ಸಹ ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡವನ್ನು ಕಡ್ಡಾಯವಾಗಿ ಕಲಿಸಬೇಕು ಎಂದು ಆಗ್ರಹಿಸುತ್ತಿದ್ದರು. ಯಾವುದೇ ರಾಜಕೀಯ ನಾಯಕರ ವಿರುದ್ಧ ನಿರ್ಭೀತಿಯಿಂದ ಮಾತನಾಡುತ್ತಿದ್ದರು. ತಮ್ಮ ಉತ್ತರ ಕರ್ನಾಟಕದ ಭಾಷೆಯ ಶೈಲಿಯಲ್ಲಿ ಹಲವರನ್ನು ತಿವಿಯುತ್ತಿದ್ದರು.

ಚಂಪಾ ನಿಧನಕ್ಕೆ ಸಿಎಂ ಸಂತಾಪ:
ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ತೀವ್ರ ಸಂತಾಪ ಸೂಚಿಸಿದ್ದಾರೆ.

ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರು. ಚಂದ್ರಶೇಖರ್ ಪಾಟೀಲ್ ಅವರು ಚಂಪಾ ಎಂದೇ ಪ್ರಸಿದ್ಧರಾದವರು. ಚಂಪಾ ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದರು ಎಂದು ಚಂಪಾ ಅವರನ್ನು ಸಿಎಂ ಬಣ್ಣಿಸಿದ್ದಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಂಕ್ರಮಣ ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕತ್ವದ ಸಾರಥ್ಯವನ್ನು ಅವರು ವಹಿಸಿದ್ದರು. ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿ ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೋರಿದ್ದಾರೆ.

Recommended Video

South Africa ಹಾಗು India ನಡುವಿನ ಮೂರನೇ ಪಂದ್ಯಕ್ಕೆ Kohli ಸಿದ್ಧ! | Oneindia Kannada

English summary
kannada sahitya parishat Former President Chandrashekhar Patil dies
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X