ಕನ್ನಡ, ತಮಿಳು, ತೆಲುಗು, ಮಲಯಾಳಂ ಈಗ ಒಂದಾಗಿ ನಿಲ್ಲಬೇಕು: ಕಮಲ್ ಹೇಳಿಕೆಗೆ ಕರವೇ ಮಹತ್ವದ ಟ್ವೀಟ್
ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎನ್ನುವ ನಟ ಕಮಲ್ ಹಾಸನ್ ಅವರ ಹೇಳಿಕೆಗೆ ಕರ್ನಾಟಕದಾದ್ಯಂತ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಈ ವಿಚಾರವಾಗಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಪ್ರತಿಕ್ರಿಯಿಸಿದ್ದಾರೆ. ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ಕನ್ನಡ ಭಾಷೆಯು ತಮಿಳಿನಿಂದ ಉಗಮವಾಯಿತು ಎಂದು ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು, ದುರುದ್ದೇಶಪೂರಿತ ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಹದ್ದಾಗಿದೆ. ಈ ಹೇಳಿಕೆ ಅವರ ಅಜ್ಞಾನವನ್ನು ಬಯಲುಗೊಳಿಸುತ್ತದೆ. ಕನ್ನಡ ಮತ್ತು ತಮಿಳು ಭಾಷೆಗಳು ದ್ರಾವಿಡ ಭಾಷಾ ಕುಟುಂಬಕ್ಕೆ ಸೇರಿದ್ದರೂ, ಇವು ತಮ್ಮದೇ ಆದ ಸ್ವತಂತ್ರ ಇತಿಹಾಸ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಹೊಂದಿವೆ ಎಂದಿದ್ದಾರೆ.
ಕನ್ನಡ ಭಾಷೆಗೆ ಸುಮಾರು 4600-5000 ವರ್ಷಗಳ ಇತಿಹಾಸವಿದೆ. ಭಾಷಾಶಾಸ್ತ್ರೀಯ ಅಧ್ಯಯನಗಳ ಪ್ರಕಾರ, ದ್ರಾವಿಡ ಭಾಷೆಗಳು ಮೂಲ ದ್ರಾವಿಡ ಭಾಷೆಯಿಂದ (ಪ್ರೊಟೊ-ದ್ರಾವಿಡಿಯನ್) ಸುಮಾರು 2500-3000 ಕ್ರಿ.ಪೂ. ಆಸುಪಾಸಿನಲ್ಲಿ ಕವಲೊಡೆದಿವೆ. ಅಶೋಕನ ಕಾಲದ ಪ್ರಾಕೃತ ಶಾಸನಗಳಲ್ಲಿ (ಕ್ರಿ.ಪೂ. 3ನೇ ಶತಮಾನ) ಕರ್ನಾಟಕದಲ್ಲಿ ಕಂಡುಬಂದ ಕೆಲವು ಶಾಸನಗಳು ಕನ್ನಡದ ಆದಿಪದಗಳ ಬಳಕೆಯನ್ನು ಸೂಚಿಸುತ್ತವೆ. ಕನ್ನಡದ ಲಿಖಿತ ರೂಪಕ್ಕೆ 2000 ವರ್ಷಗಳ ಇತಿಹಾಸವಿದ್ದು, ಇದಕ್ಕೂ ಮುಂಚಿನ 2000 ವರ್ಷಗಳ ಭಾಷಿಕ ಇತಿಹಾಸವನ್ನು ಒಳಗೊಂಡಂತೆ, ಕನ್ನಡ ನುಡಿಯ ಒಟ್ಟಾರೆ ಇತಿಹಾಸ 4600 ವರ್ಷಗಳಿಗೂ ಹೆಚ್ಚಿನದಾಗಿದೆ ಎಂದು ಹೇಳಿದ್ದಾರೆ.

ತಮಿಳು ಸಾಹಿತ್ಯಕ್ಕೆ ಪ್ರಾಚೀನತೆಯಿದ್ದರೂ, ತಮಿಳು ಭಾಷೆಯು ಕನ್ನಡಕ್ಕಿಂತ ಹಳೆಯದು ಎನ್ನಲು ಯಾವುದೇ ಐತಿಹಾಸಿಕ ಅಥವಾ ಭಾಷಾಶಾಸ್ತ್ರೀಯ ಆಧಾರಗಳಿಲ್ಲ. ಇತ್ತೀಚಿನ ಭಾಷಾಶಾಸ್ತ್ರೀಯ ಸಂಶೋಧನೆಗಳು ತಮಿಳು, ಕನ್ನಡ, ತುಳು, ತೆಲುಗು ಮೊದಲಾದ ದ್ರಾವಿಡ ಭಾಷೆಗಳು ಮೂಲ ದ್ರಾವಿಡ ಭಾಷೆಯಿಂದ ಏಕಕಾಲಕ್ಕೆ ವಿಕಾಸಗೊಂಡಿವೆ ಎಂದು ಸ್ಪಷ್ಟಪಡಿಸಿವೆ. ಹಲ್ಮಿಡಿ ಶಾಸನ (ಕ್ರಿ.ಶ. 450) ಕನ್ನಡದ ಅತ್ಯಂತ ಪ್ರಾಚೀನ ಲಿಖಿತ ದಾಖಲೆಯಾಗಿದ್ದು, ಕನ್ನಡದ ಸ್ವತಂತ್ರ ಅಸ್ತಿತ್ವವನ್ನು ದೃಢಪಡಿಸುತ್ತದೆ. ಇದಕ್ಕಿಂತಲೂ ಹಳೆಯ ಬ್ರಾಹ್ಮೀ ಲಿಪಿಯ ಶಾಸನಗಳು ಕರ್ನಾಟಕದ ಬನವಾಸಿ, ಚಂದ್ರವಳ್ಳಿಯಂತಹ ಕಡೆಗಳಲ್ಲಿ ಕಂಡುಬಂದಿವೆ, ಇದು ಕನ್ನಡ ಭಾಷೆಯು ತಮಿಳಿನಿಂದ ಉಗಮವಾಗಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ.
ಕನ್ನಡ ಸಾಹಿತ್ಯವು ತನ್ನದೇ ಆದ ವಿಶಿಷ್ಟ ವ್ಯಾಕರಣ, ಶಬ್ದಕೋಶ ಮತ್ತು ಶೈಲಿಯನ್ನು ಹೊಂದಿದೆ. ತಮಿಳಿನಿಂದ ಸಂಪೂರ್ಣ ಭಿನ್ನವಾಗಿದೆ. ಪಂಪ, ರನ್ನ, ಬಸವಣ್ಣ, ಕುವೆಂಪು ಮುಂತಾದ ಕವಿಗಳಿಂದ ಮತ್ತು ಎಂಟು ಜ್ಞಾನಪೀಠ ಪ್ರಶಸ್ತಿಗಳಿಂದ ಸಮೃದ್ಧವಾದ ಕನ್ನಡ ಸಾಹಿತ್ಯವು ತನ್ನ ಸ್ವತಂತ್ರ ಗುರುತನ್ನು ಶತಮಾನಗಳಿಂದ ಉಳಿಸಿಕೊಂಡಿದೆ.
ಕಮಲ್ ಹಾಸನ್ ಅವರ ಈ ಹೇಳಿಕೆಯು ದಕ್ಷಿಣ ಭಾರತದ ಜನತೆಯು ಹಿಂದಿ ಹೇರಿಕೆ ಮತ್ತು ಸಾಮ್ರಾಜ್ಯಶಾಹಿಯ ವಿರುದ್ಧ ನಡೆಸುತ್ತಿರುವ ಒಗ್ಗಟ್ಟಿನ ಹೋರಾಟಕ್ಕೆ ಗಂಭೀರ ಹಾನಿಯುಂಟುಮಾಡುತ್ತದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮೊದಲಾದ ದ್ರಾವಿಡ ಭಾಷೆಗಳು ಒಂದಾಗಿ ನಿಲ್ಲಬೇಕಾದ ಈ ಸಂದರ್ಭದಲ್ಲಿ, ಈ ಜವಾಬ್ದಾರಿಯಿಲ್ಲದ ಹೇಳಿಕೆಯು ಭಾಷಿಕ ಸಮುದಾಯಗಳ ನಡುವೆ ಒಡಕು ಮತ್ತು ಭಿನ್ನಾಭಿಪ್ರಾಯವನ್ನು ಉಂಟುಮಾಡುವ ಕೀಳುಮಟ್ಟದ ರಾಜಕೀಯ ತಂತ್ರವಾಗಿದೆ. ಇದು ಕೇವಲ ಕನ್ನಡಿಗರಿಗೆ ಅವಮಾನವಲ್ಲ, ದಕ್ಷಿಣ ಭಾರತದ ಎಲ್ಲ ಭಾಷೆಗಳ ಗೌರವಕ್ಕೆ ಧಕ್ಕೆ ತರುವ ಕೃತ್ಯವಾಗಿದೆ ಅಂತ ಅವರು ಹೇಳಿದ್ದಾರೆ.
ಕಮಲ್ ಹಾಸನ್ ಅವರು ಒಬ್ಬ ಅತ್ಯುತ್ತಮ ಕಲಾವಿದರಾಗಿದ್ದು, ಕನ್ನಡ ಸಿನಿಮಾಗಳಲ್ಲೂ ಕೆಲಸ ಮಾಡಿದ್ದಾರೆ. ಆದರೆ, ಇಂತಹ ಹೇಳಿಕೆಗಳಿಂದ ಕನ್ನಡಿಗರು ಮತ್ತು ತಮಿಳರ ನಡುವೆ ದ್ವೇಷವನ್ನು ಹುಟ್ಟುಹಾಕುವುದು ಸರಿಯಲ್ಲ. ಅವರು ತಕ್ಷಣವೇ ತಮ್ಮ ತಪ್ಪನ್ನು ಸರಿಪಡಿಸಿಕೊಂಡು, ಕನ್ನಡಿಗರ ಭಾವನೆಗಳಿಗೆ ಗೌರವ ತೋರಬೇಕೆಂದು ಒತ್ತಾಯಿಸುತ್ತೇವೆ. ಕನ್ನಡಿಗರೆಲ್ಲರೂ ಈ ರೀತಿಯ ದುರುದ್ದೇಶಪೂರಿತ ಹೇಳಿಕೆಗಳ ವಿರುದ್ಧ ಒಗ್ಗಟ್ಟಾಗಿ ಧ್ವನಿಯೆತ್ತಬೇಕೆಂದು ಕರೆ ನೀಡುತ್ತೇನೆ ಎಂದು ಅವರು ಆಗ್ರಹಿಸಿದ್ದಾರೆ.
-
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
KD Song Controversy: ಸೆರಗ ಸರ್ಸೆ ಹಾಡು ವಿವಾದ: ಪ್ರೇಮ್ ವಿರುದ್ಧ ದೂರು, ನೋಟಿಸ್ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್ -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
Bengaluru: ಬೆಂಗಳೂರಲ್ಲಿ ಟೀ ಶಾಪ್ನಲ್ಲಿ 10 ಭಾಷೆ ಮಾತನಾಡುವವರು ಸಿಗ್ತಾರೆ: ನಾರ್ಥಿ ಯುವತಿ ವೈರಲ್ ಪೋಸ್ಟ್ -
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು












Click it and Unblock the Notifications