ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಠಗಳಿಗೆ ಮೂಗುದಾರ ಹಾಕುವ ಮಸೂದೆ ವಾಪಸ್!

|
Google Oneindia Kannada News

ಬೆಂಗಳೂರು, ಡಿ. 24 : ಭಾರೀ ವಿವಾದಕ್ಕೆ ಕಾರಣವಾಗಿರುವ ಮಠಗಳ ಮೇಲಿನ ನಿಯಂತ್ರಣಕ್ಕಾಗಿ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿದ್ದ ವಿಧೇಯಕವನ್ನು ವಾಪಸ್ ಪಡೆಯಲು ಸರ್ಕಾರ ತೀರ್ಮಾನಿಸಿದೆ. ಮಸೂದೆಯನ್ನು ಮಂಡಿಸಿ ಪ್ರತಿಪಕ್ಷಗಳ ಹೋರಾಟಕ್ಕೆ ದಾರಿ ಮಾಡಿಕೊಟ್ಟಿದ್ದೇವೆ. ಆದ್ದರಿಂದ ಮಸೂದೆ ವಾಪಸ್ ಪಡೆಯುವುದು ಸೂಕ್ತ ಎಂದು ಹಿರಿಯ ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಎಂದು ತಿಳಿದುಬಂದಿದೆ.

ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಮಸೂದೆ ಕುರಿತು ಸಿದ್ಧಪಡಿಸಿದ ಟಿಪ್ಪಣಿಯನ್ನು ಪ್ರಸ್ತಾಪಿಸಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಬಹುತೇಕ ಎಲ್ಲಾ ಸಚಿವರೂ ಮಸೂದೆ ಬೇಕಿರಲಿಲ್ಲ, ಇದನ್ನು ವಾಪಸ್ ಪಡೆಯೋಣ ಎಂದು ಸಲಹೆ ನೀಡಿದ್ದಾರೆ. [ಮಠಗಳ ಮೇಲೆ ಹಿಡಿತಕ್ಕೆ ಸಜ್ಜಾದ ಸರ್ಕಾರ]

TB Jayachandra

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ ಅವರು, 'ಹಿಂದೂ ಧಾರ್ಮಿಕ ಸಂಸ್ಥೆ, ಮಠಗಳನ್ನು ಸರ್ಕಾರದ ನಿಯಂತ್ರಣಕ್ಕೆ ಒಳಪಡಿಸಲು ಮಂಡಿಸಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ಯಥಾಸ್ಥಿತಿಯಲ್ಲಿಟ್ಟು, ಕಾನೂನು ತಜ್ಞರ ಜತೆ ಚರ್ಚಿಸಿ ಸುಪ್ರೀಂಕೋರ್ಟ್ ಮುಂದೆ ನಿಲುವು ಮಂಡಿಸಲು ನಿರ್ಧರಿಸಲಾಗಿದೆ' ಎಂದು ಹೇಳಿದರು. [ಮಠಗಳಿಗೆ ಮೂಗುದಾರ, ಸಚಿವರ ಸ್ಪಷ್ಟನೆಗಳು]

ಹಿಂದೆ ನಿರ್ದೇಶನವಿತ್ತು : ಕರ್ನಾಟಕದ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕದ ವ್ಯಾಜ್ಯದ ಬಗ್ಗೆ ಹೈಕೋರ್ಟ್ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದಾಗ, ನಿರ್ದಿಷ್ಟ ಸಂದರ್ಭ, ವಿವಾದಗಳು ಉಂಟಾದಾಗ ಮಠಗಳ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಕಾಯ್ದೆಯಲ್ಲಿ ಅವಕಾಶವಿಲ್ಲ, ಅದನ್ನು ಸೇರ್ಪಡೆಗೊಳಿಸಿ ಎಂದು ನಿರ್ದೇಶನ ಬಂದಿತ್ತು. [ಮಸೂದೆ ಬಗ್ಗೆ ಸಿಎಂ ಹೇಳುವುದೇನು?]

ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರ ಮಠಗಳ ಮೇಲೆ ನಿಯಂತ್ರಣದ ನಿಯಮಗಳನ್ನು ಸೇರಿಸುವುದಾಗಿ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿತ್ತು. ಮೇಲ್ಮನವಿ ಸುಪ್ರೀಂಕೋರ್ಟ್‌ಗೆ ಹೋದಾಗ, ಅಲ್ಲಿಯು ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಲಾಗಿತ್ತು ಎಂದು ಜಯಚಂದ್ರ ಅವರು ವಿವರಣೆ ನೀಡಿದರು.

ಜನವರಿ 13ರಂದು ಕಾಯ್ದೆ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಅದಕ್ಕೆ ಮುನ್ನವೇ ಹಿಂದೆ ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಂ.ಎನ್. ರಾವ್, ಅಡ್ವೋಕೇಟ್ ಜನರಲ್ ಅವರ ಜೊತೆ ಚರ್ಚಿಸಲಿದ್ದೇವೆ ಎಂದು ಸಚಿವರು ತಿಳಿಸಿದರು.

ಇತ್ತ ಬಿಜೆಪಿ ಮಸೂದೆ ಮಂಡಿಸಿರುವ ಸರ್ಕಾರ ವಿರುದ್ಧ ಹೋರಾಟ ನಡೆಸಲು ಮುಂದಾಗಿದ್ದು, ಮಠಾಧೀಶರ ಬೆಂಬಲವನ್ನು ಕೇಳಿದೆ. ಸರ್ಕಾರ ವಿಧೇಯಕವನ್ನು ತಾತ್ಕಾಲಿಕವಾಗಿ ಯಥಾಸ್ಥಿತಿಯಲ್ಲಿ ಇಡಲು ತೀರ್ಮಾನಿಸಿದ್ದು, ಪ್ರತಿಪಕ್ಷಗಳು, ಮಠಾಧೀಶರು ಪ್ರತಿಭಟನೆ ನಡೆಸಬಾರದು ಎಂದು ಸಚಿವರು ಮನವಿ ಮಾಡಿದ್ದಾರೆ.

ಏನಿದು ಮಸೂದೆ : ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆಯನ್ನು ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು.

ಸೂಕ್ತ ನಿರ್ವಹಣೆ ಇಲ್ಲದ ಮಠ, ವಿವಾದಕ್ಕೆ ಸಿಲುಕಿರುವ ಮಠ, ಧಾಮಿಕ ಸಂಸ್ಥೆಗಳು ಹಾಗೂ ದೇಗುಲಗಳ ಸ್ವಾಧೀನಕ್ಕಾಗಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ-2014ರಲ್ಲಿ ಅವಕಾಶವಿತ್ತು.

English summary
Karnataka government on Tuesday decided to withdraw a controversial amendment bill that proposed taking over mismanaged mutts in the State said Law Minister T.B.Jayachandra after cabinet meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X