Get Updates
Get notified of breaking news, exclusive insights, and must-see stories!

ಕೆಎಸ್‌ಟಿಡಿಸಿಗೆ ಕಾಪು ಸಿದ್ದಲಿಂಗಸ್ವಾಮಿ ನೇಮಕದ ಹಿಂದಿನ ಯಡಿಯೂರಪ್ಪ ರಾಜಕೀಯ ನಡೆ ಏನು?

ಬೆಂಗಳೂರು, ಜು. 19: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ದೆಹಲಿ ಭೇಟಿಯ ಬೆನ್ನಲ್ಲಿಯೇ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮಹತ್ವದ ಬದಲಾವಣೆ ಆಗಿದೆ. ಬದಲಾವಣೆಯ ಈ ನಿರ್ಧಾರವನ್ನು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೈಗೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಯಾವುದೇ ಮುನ್ಸೂಚನೆಯನ್ನೂ ಕೊಡದೇ ಏಕಾಏಕಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಹಿರಿಯ ನಟಿ ಶ್ರುತಿ ಅವರನ್ನು ಬದಲಾಯಿಸಲಾಗಿದೆ. ಸರ್ಕಾರದ ಮಟ್ಟದಲ್ಲಿ ಇದೊಂದು ಸಣ್ಣ ಬದಲಾವಣೆಯೆ, ಆದರೆ ಈ ಬದಲಾವಣೆಯಿಂದ ಯಡಿಯೂರಪ್ಪ ಅವರು ಕೊಟ್ಟಿರುವ ಸಂದೇಶ ಬಹಳ ದೊಡ್ಡದು ಎಂಬುದರಲ್ಲಿ ಎರಡು ಮಾತಿಲ್ಲ. ಅದಕ್ಕೆ ಕಾರಣವೂ ಇದೆ.

ಬೆಂಗಳೂರಿನ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಕಳೆದ ಕೋರ್ ಕಮಿಟಿ ಸಭೆಯಲ್ಲಿ ನಿಗಮ-ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ ನೇಮಕಾತಿ ಆಗಿರುವವರನ್ನು ಬದಲಾವಣೆ ಮಾಡುವ ಚರ್ಚೆ ನಡೆದಿತ್ತು. ಸರಿಯಾಗಿನ ಕೆಲಸ ಮಾಡದಿರುವವರನ್ನು ಬದಲಾಯಿಸಿದ ಉಳಿದಿರುವ ಎರಡು ವರ್ಷಗಳ ಅವಧಿಗೆ ಪಕ್ಷದ ಕಾರ್ಯರ್ತರು, ಮುಖಂಡರಿಗೆ ಅವಕಾಶ ಮಾಡಿಕೊಡಲು ನಿರ್ಧಾರ ಮಾಡಲಾಗಿತ್ತು. ಆ ತೀರ್ಮಾನ ಕಾರ್ಯರೂಪಕ್ಕೆ ಬರುವ ಮೊದಲೇ ಯಡಿಯೂರಪ್ಪ ರಾಜಕೀಯ ದಾಳ ಉರುಳಿಸಿದ್ದಾರೆ.

ಶ್ರುತಿ ಸ್ಥಾನಕ್ಕೆ ಕಾಪು ಬಂದಿದ್ದು ಯಾಕೆ?

ಶ್ರುತಿ ಸ್ಥಾನಕ್ಕೆ ಕಾಪು ಬಂದಿದ್ದು ಯಾಕೆ?

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಸಲಾಗುತ್ತಿದೆ ಎಂಬ ಚರ್ಚೆ ದೆಹಲಿ ಮಟ್ಟದಲ್ಲಿ ತೀವ್ರವಾಗಿದೆ. ಇದೇ ಸಂದರ್ಭದಲ್ಲಿ ತಮ್ಮ ಒಂದು ಕಾಲದ ಆಪ್ತ ಸಹಾಯಕ ಕಾಪು ಸಿದ್ದಲಿಂಗಸ್ವಾಮಿ ಅವರಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ಯಡಿಯೂರಪ್ಪ ಆದೇಶ ಮಾಡಿದ್ದಾರೆ. ಕೆಎಸ್‌ಟಿಡಿಸಿ ಅಧ್ಯಕ್ಷ ಸ್ಥಾನದಿಂದ ಹಿರಿಯ ಚಿತ್ರನಟಿ ಶ್ರುತಿ ಅವರನ್ನು ವಜಾ ಮಾಡಲಾಗಿದೆ. ಕನಿಷ್ಠಪಕ್ಷ ಅವರನ್ನು ಬದಲಾವಣೆ ಮಾಡಿರುವ ವಿಚಾರವನ್ನೂ ಅವರ ಗಮನಕ್ಕೆ ತಂದಿಲ್ಲ ಎಂಬುದು ಚರ್ಚೆಗೆ ಕಾರಣವಾಗಿದೆ ಅಷ್ಟಕ್ಕೂ ಹೀಗೆ ಮಾಡಿರುವುದಕ್ಕೆ ಕಾರಣ ಏನು?

ಬಿಜೆಪಿಗೆ ಹೊಸತೇನಲ್ಲ ಯಡಿಯೂರಪ್ಪ ಈ ನಡೆ

ಬಿಜೆಪಿಗೆ ಹೊಸತೇನಲ್ಲ ಯಡಿಯೂರಪ್ಪ ಈ ನಡೆ

ಇನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಏಕಾಏಕಿ ಶ್ರುತಿ ಅವರನ್ನು ಬದಲಾವಣೆ ಮಾಡಿ ತಮ್ಮ ಆಪ್ತ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಮಾಡಿದ್ದಾರೆ. ಇಂತಹ ಅವರ ನಿರ್ಧಾರಗಳು ಬಿಜೆಪಿಗೆ ಹೊಸತೇನಲ್ಲ. ವಿರೋಧದ ಮಧ್ಯೆಯೂ ಹಿಂದೆ ತಮ್ಮ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎನ್.ಆರ್. ಸಂತೋಷ್ ಅವರನ್ನು ಯಡಿಯೂರಪ್ಪ ನೇಮಕ ಮಾಡಿದ್ದರು. ಇದೀಗ ಅಂಥದ್ದೆ ನಿರ್ಧಾರವನ್ನು ಕೈಗೊಂಡಿದ್ದಾರೆ. ಆದರೆ ಆ ನೇಮಕಾತಿ ಕಾರಣ ಕಾರಣಕ್ಕೂ, ಈಗ ಸಿದ್ದಲಿಂಗಸ್ವಾಮಿ ಅವರ ನೇಮಕಾತಿ ಹಿಂದಿನ ಕಾರಣಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಅದೇನು?

ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಆಗಿತ್ತು!

ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಆಗಿತ್ತು!

ನಿಗಮ-ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ ಈಗಿರುವವನ್ನು ಬದಲಾಯಿಸಿ ಹೊಸಬರನ್ನು ನೇಮಕ ಮಾಡಲು ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆ ಆಗಿತ್ತು ಎನ್ನಲಾಗಿದೆ. ಉಳಿದಿರುವ ಎರಡು ವರ್ಷಗಳ ಅವಧಿಗೆ ಪಕ್ಷದ ನಿಷ್ಠಾವಂತರಿಗೆ ಅವಕಾಶ ಮಾಡಿಕೊಡಲು ತೀರ್ಮಾನ ಆಗಿತ್ತು. ಅದರಂತೆ ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಟ್ಟಿಯೊಂದನ್ನು ಯಡಿಯೂರಪ್ಪ ಅವರಿಗೆ ಕೊಡಬೇಕಾಗಿತ್ತು. ಆದರೆ ಅದಕ್ಕೂ ಮೊದಲೇ ಯಡಿಯಹೂರಪ್ಪ ಅವರು ಈ ಬದಲಾವಣೆ ಮಾಡಿದ್ದಾರೆ. ಹೀಗಾಗಿ ಸಿಎಂ ಯಡಿಯೂರಪ್ಪ ಅವರ ಈ ನಿರ್ಧಾರದ ಹಿಂದೆ ಬೇರೆಯದ್ದೆ ಕಾರಣವಿದೆ ಎನ್ನಲಾಗುತ್ತಿದೆ. ಆ ಕಾರಣ ಏನು?

ಕೆಎಸ್‌ಟಿಡಿಸಿಗೆ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಕ ಮಾಡುವ ಮೂಲಕ ರಾಜ್ಯ ಬಿಜೆಪಿ ಹಾಗೂ ಹೈಕಮಾಂಡ್‌ಗೆ ಬಿ.ಎಸ್. ಯಡಿಯೂರಪ್ಪ ಅವರು ಪರೋಕ್ಷ ಸಂದೇಶ ರವಾನಿಸಿದ್ದಾರೆ ಎಂಬ ಮಾಹಿತಿ ಅವರ ಆಪ್ತ ಬಿಜೆಪಿ ವಲಯದಿಂದಲೇ ಕೇಳಿ ಬಂದಿದೆ. ದೆಹಲಿ ಭೇಟಿಯ ಬಳಿಕ ಈ ದಿಢೀರ್ ನಿರ್ಧಾರರವನ್ನು ಯಡಿಯೂರಪ್ಪ ತೆಗೆದುಕೊಂಡಿದ್ದಾರೆ. ಈ ನಿರ್ದಾರದ ಹಿಂದಿವೆ ಆ ಎರಡು ಕಾರಣಗಳು.

ಒಂದನೇ ಕಾರಣ ಇದು

ಒಂದನೇ ಕಾರಣ ಇದು

ದೆಹಲಿ ಮಟ್ಟದಲ್ಲಿ ಚರ್ಚೆ ಆಗುತ್ತಿರುವಂತೆ ತಮ್ಮನ್ನು ಸಿಎಂ ಸ್ಥಾನದಿಂದ ಬದಲಾವಣೆ ಮಾಡಲು ಹೈಕಮಾಂಡ್ ಮುಂದಾದರೆ ಇಂತಹ ಅನೇಕ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂಬ ಪರೋಕ್ಷ ಸಂದೇಶವನ್ನು ಯಡಿಯೂರಪ್ಪ ಮಾಡಿದ್ದಾರೆ. ಅದಕ್ಕೆ ಒಂದು ಮುನ್ಸೂಚನೆ ಎಂಬಂತೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಶ್ರುತಿ ಅವರನ್ನು ಬದಲಾವಣೆ ಮಾಡಲಾಗಿದೆ. ಜೊತೆಗೆ ಅವರ ಸ್ಥಾನಕ್ಕೆ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಮತ್ತೊಂದು ಕಾರಣ ಮುಂದಿದೆ.

ಆಪ್ತರನ್ನು ಯಡಿಯೂರಪ್ಪ ಕೈಬಿಡುವುದಿಲ್ಲ

ಆಪ್ತರನ್ನು ಯಡಿಯೂರಪ್ಪ ಕೈಬಿಡುವುದಿಲ್ಲ

ನಂಬಿದ ಆಪ್ತರನ್ನು ಮುಖ್ಯಮಂತ್ರಿ ರಾಜಕೀಯವಾಗಿ ಕೈಬಿಡುವುದಿಲ್ಲ ಎಂಬ ಮಾತು ಬಿಜೆಪಿಯಲ್ಲಿದೆ. ಹೀಗಾಗಿ ಅವರನ್ನು ನಂಬಿಕೊಂಡು ಬಿಜೆಪಿಗೆ ಬಂದವರಿಗೆ ಸೂಕ್ತ ಸ್ಥಾನ-ಮಾನವನ್ನೂ ಸಿಎಂ ಯಡಿಯೂರಪ್ಪ ಕೊಟ್ಟಿದ್ದಾರೆ. ಹೀಗಾಗಿಯೇ ಕಾಂಗ್ರೆಸ್-ಜೆಡಿಎಸ್‌ನಿಂದ 17 ಶಾಸಕರು ಯಡಿಯೂರಪ್ಪ ಅವರನ್ನು ನಂಬಿಕೊಂಡು ಬಂದಿದ್ದರು. ಅವರಿಗೆ ಸಚಿವಸ್ಥಾನಗಳನ್ನು ಯಡಿಯೂರಪ್ಪ ಕೊಟ್ಟಿದ್ದಾರೆ.

ಈ ಬದಲಾವಣೆಯ ಮೂಲಕ ಅದೇ ಸಂದೇಶವನ್ನು ಮತ್ತೊಮ್ಮೆ ಸಿಎಂ ಯಡಿಯೂರಪ್ಪ ಕೊಟ್ಟಿದ್ದಾರೆ. ಆ ಮೂಲಕ ತಮ್ಮ ಆಪ್ತರನ್ನು ಕೈಬಿಡುವುದಿಲ್ಲ ಎಂಬ ಸಂದೇಶ ರವಾನೆಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆಗೆ ಹೈಕಮಾಂಡ್ ಮುಂದಾದಲ್ಲಿ ಬಹುದೊಡ್ಡ ರಾಜಕೀಯ ನಿರ್ಧಾರವನ್ನು ಯಡಿಯೂರಪ್ಪ ಅವರು ಕೈಗೊಳ್ಳಲಿದ್ದಾರೆ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎನ್ನಲಾಗಿತ್ತಿದೆ. ಒಟ್ಟಾರೆ ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ನಿರ್ಧಾರ ಸಂಚಲನ ಮೂಡಿಸಿದೆ.

Recommended Video

    ಅಭಿನಯ ಬ್ರಹ್ಮ Anant Nag ಗೆ Padma Shri ಪ್ರಶಸ್ತಿ ನೀಡುವಂತೆ ಅಭಿಯಾನ | Sandalwood demand |Oneindia Kannada
    ಕಾಪು ಸಿದ್ದಲಿಂಗಸ್ವಾಮಿ ಯಾರು?

    ಕಾಪು ಸಿದ್ದಲಿಂಗಸ್ವಾಮಿ ಯಾರು?

    ಕಾಪು ಸಿದ್ದಲಿಂಗಸ್ವಾಮಿ ಅವರು ಸಿಎಂ ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದರು. ಬಿ.ಎಸ್. ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಅವರ ಆಪ್ತ ಸಹಾಯಕರಾಗಿದ್ದರು. ಅಷ್ಟೇ ಅಲ್ಲ ಯಡಿಯೂರಪ್ಪ ಅವರ ನಿರ್ಧಾರದಲ್ಲಿ ಸಿದ್ದಲಿಂಗಸ್ವಾಮಿ ಅವರ ಅಭಿಪ್ರಾಯವಿರುತ್ತದೆ ಎಂಬ ಮಾತಿಗಳು ಆಗ ಬಿಜೆಪಿ ವಲಯದಿಂದಲೇ ಕೇಳಿ ಬಂದಿದ್ದವು. ಅಷ್ಟು ಪ್ರಭಾವಿಯಾಗಿದ್ದರು ಕಾಪು ಸಿದ್ದಲಿಂಗಸ್ವಾಮಿ ಅವರು.

    ಆದರೆ ಬದಲಾದ ಸ್ಥಿತಿಯಲ್ಲಿ ಕಳೆದ 2012ರಿಂದ ಸಿದ್ದಲಿಂಗಸ್ವಾಮಿ ಅವರನ್ನು ಯಡಿಯೂರಪ್ಪ ದೂರ ಇಟ್ಟಿದ್ದರು. ನಂತರ 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಗ ಯಡಿಯೂರಪ್ಪ ಅವರ ಕರ್ನಾಟಕ ಜನತಾ ಪಕ್ಷ (ಕೆ.ಜೆ.ಪಿ)ದಿಂದ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಎದುರು ಸ್ಪರ್ಧಿಸಿ ಸೋತಿದ್ದರು. ನಂತರ 2018ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಸಿದ್ದಲಿಂಗಸ್ವಾಮಿ ಅವರು ಪ್ರಯತ್ನಿಸಿದ್ದರು.

    ಇದೀಗ ಮತ್ತೊಮ್ಮೆ ಕಾಪು ಸಿದ್ದಲಿಂಗಸ್ವಾಮಿ ಅವರಿಗೆ ಹುದ್ದೆ ಕೊಡುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

    More From
    Prev
    Next
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+