Karnataka Rain: ಕರ್ನಾಟಕದ ಈ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ- ಯಾವ ಜಿಲ್ಲೆಗಳು ತಿಳಿಯಿರಿ
ಬೆಂಗಳೂರು, ಸೆಪ್ಟೆಂಬರ್ 13: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಮನಗರ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಹಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾದ್ಯತೆ ಇದೆ ಎಂದು ತಿಳಿದುಬಂದಿದೆ.
ಸೆಪ್ಟೆಂಬರ್ 12 ರಂದು ರಾಜ್ಯದಲ್ಲಿ ಸುರಿದ ಮಳೆ ಪ್ರಮಾಣ
ದಕ್ಷಿಣ ಕನ್ನಡ: 76.5 ಮಿ.ಮೀ
ಉಡುಪಿ: 71.5 ಮಿ.ಮೀ
ಕಲಬುರಗಿ: 58 ಮಿ.ಮೀ
ಶಿವಮೊಗ್ಗ: 56 ಮಿ.ಮೀ
ಬೆಂಗಳೂರು ನಗರ: 40.5 ಮಿ.ಮೀ
ಉತ್ತರ ಕನ್ನಡ: 39 ಮಿ.ಮೀ
ಚಿಕ್ಕಮಗಳೂರು: 37 ಮಿ.ಮೀ
ಯಾದಗಿರಿ: 37 ಮಿ.ಮೀ
ರಾಯಚೂರು: 31 ಮಿ.ಮೀ
ಕೊಡಗು: 30 ಮಿ.ಮೀ
ರಾಮನಗರ: 29 ಮಿ.ಮೀ
ವಿಜಯಪುರ: 25.5 ಮಿ.ಮೀ
ತುಮಕೂರು: 24 ಮಿ.ಮೀ
ಹಾಸನ: 22 ಮಿ.ಮೀ
ಅಧಿಕ ಮಳೆಯಾದ ಸ್ಥಳಗಳು
ಸೋಮೇಶ್ವರ, ದಕ್ಷಿಣ ಕನ್ನಡ: 76.5 ಮಿ.ಮೀ
ಮಡಾಮಕ್ಕಿ, ಉಡುಪಿ: 71.5 ಮಿ.ಮೀ
ನಾಡ್ಪಾಲು, ಉಡುಪಿ: 60 ಮಿ.ಮೀ
ರಾಜಾಪುರ, ಕಲಬುರಗಿ: 58 ಮಿ.ಮೀ
ಸುಳಗೋಡು, ಶಿವಮೊಗ್ಗ: 56 ಮಿ.ಮೀ

ದೇಶ ಈ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ
ಒಡಿಶಾದಲ್ಲಿ ಅತಿ ಹೆಚ್ಚು ಭಾರಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರಾಖಂಡ, ಪೂರ್ವ ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿರುಗಾಳಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಿಮಾಚಲ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಛತ್ತೀಸ್‌ಗಢ, ವಿದರ್ಭ, ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಆಂಧ್ರಪ್ರದೇಶ ಕರಾವಳಿ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆ. ಪ್ರತ್ಯೇಕ ಸ್ಥಳಗಳಲ್ಲಿ ಮಳೆ ಸುರಿಯಬಹುದು ಎಂಬ ಮಾಹಿತಿ ಲಭ್ಯವಾಗಿದೆ.












Click it and Unblock the Notifications