Karnataka Rain: ಕರ್ನಾಟಕದಲ್ಲಿ ಈ ವಾರ ಸುರಿಯಲಿದೆ ಭಾರೀ ಮಳೆ- ಯಾವ ಜಿಲ್ಲೆಗಳಲ್ಲಿ ತಿಳಿಯಿರಿ

ಬೆಂಗಳೂರು, ಸೆಪ್ಟೆಂಬರ್‌ 06: ಆಗಸ್ಟ್‌ ತಿಂಗಳಲ್ಲಿ ಕರ್ನಾಟಕದಲ್ಲಿ ಮಳೆಯ ಕೊರತೆ ಉಂಟಾಗಿತ್ತು. ಇದು ವಿದ್ಯುತ್‌ ಹಾಗೂ ನೀರಿನ ಭೀತಿಯನ್ನು ಹೆಚ್ಚಿಸಿತ್ತು. ಆದರೆ, ಸೆಪ್ಟೆಂಬರ್‌ ತಿಂಗಳಲ್ಲಿ ನೈರುತ್ಯ ಮಾನ್ಸೂನ್‌ ಸಕ್ರಿಯಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಾದ್ಯಂತ ಮುಂಗಾರು ಮತ್ತೆ ಸಕ್ರಿಯಗೊಂಡಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ನಿನ್ನೆ ( ಮಂಗಳವಾರ ) ರಾತ್ರಿ 8.30 ರ ವರೆಗೆ ಬೆಂಗಳೂರಿನಲ್ಲಿ 18 ಮಿಮೀ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 15 ಮಿಮೀ ಮಳೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

karantaka-rain

'ನ್ಯೂ ಇಂಡಿಯಾನ್‌ ಎಕ್ಸ್‌ಪ್ರೆಸ್‌' ಜೊತೆ ಮಾತನಾಡಿರುವ ಹವಾಮಾನ ಇಲಾಖೆ ವಿಜ್ಞಾನಿ ಎ ಪ್ರಸಾದ್, 'ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್ 8 ರ ವರೆಗೆ ಮಳೆಯಾಗಲಿದೆ. ಮುಂದಿನ 48 ಗಂಟೆಗಳ ಕಾಲ, ಉತ್ತರ ಒಳನಾಡಿನ ಗುಡುಗು ಸಹಿತ ಮಳೆ ಸುರಿಯಲಿದೆ' ಎಂದು ಹೇಳಿದ್ದಾರೆ.

'ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ' ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹವಾಮಾನ ಇಲಾಖೆ ಪ್ರಕಾರ, ಮಂಗಳವಾರ ರಾತ್ರಿ 8.30 ರ ವರೆಗೆ, ಕಲಬುರಗಿ ಜಿಲ್ಲೆಯ ಸೇಡಂನಲ್ಲಿ 8 ಸೆಂ.ಮೀ, ಬೀದರ್‌ನಲ್ಲಿ 6 ಸೆಂ.ಮೀ, ಉಡುಪಿ ಜಿಲ್ಲೆಯ ಕೋಟ ಮತ್ತು ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ತಲಾ 5 ಸೆಂ.ಮೀ ಮಳೆ ದಾಖಲಾಗಿದೆ.

ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಕೆ ನೀಡಿದೆ. ಬೀದರ್, ಕಲಬುರಗಿ, ಕೊಪ್ಪಳ ಮತ್ತು ರಾಯಚೂರ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಉತ್ತರ ಒಳಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರದಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ನಾಲ್ಕು ಮರಗಳು ಧರೆಗುರುಳಿವೆ. ಬಿಬಿಎಂಪಿ ನಿಯಂತ್ರಣ ಕೊಠಡಿ ಪ್ರಕಾರ, ಜೆಪಿ ನಗರ, ರಾಜರಾಜೇಶ್ವರಿ ನಗರ ಮತ್ತು ಎಚ್‌ಎಎಲ್ 2 ಹಂತಗಳಲ್ಲಿ ಮೂರು ಮರಗಳು ಧರೆಗುರುಳಿವೆ. ಕೆಸಿ ಜನರಲ್ ಆಸ್ಪತ್ರೆ ಬಳಿ ಮತ್ತೊಂದು ಮರ ಧರೆಗುರುಳಿದೆ. ಇದರಿಂದ ದ್ವಿಚಕ್ರ ವಾಹನ ಹಾಗೂ ಕಾರಿಗೆ ಹಾನಿಯಾಗಿದೆ. ಪಕ್ಕದ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ಕಾರು ಚಾಲಕ ಹಾಗೂ ಬೈಕ್ ಸವಾರ ಅದೃಷ್ಟವಶಾತ್ ಪಾರಾಗಿದ್ದಾರೆ. ಥಣಿಸಂದ್ರದ ಎರಡು ರಸ್ತೆಗಳು ಸೇರಿದಂತೆ ಹಲವು ರಸ್ತೆಗಳು ಜಲಾವೃತಗೊಂಡಿವೆ.

ಬಿಬಿಎಂಪಿ ವಲಯವಾರು ಮಳೆ

ಪೂರ್ವ: 4 ರಿಂದ 27 ಮಿ.ಮೀ
ಪಶ್ಚಿಮ: 11 ರಿಂದ 32 ಮಿ.ಮೀ
ದಕ್ಷಿಣ: 18 ರಿಂದ 46 ಮಿ.ಮೀ
ಬೊಮ್ಮನಹಳ್ಳಿ: 16 ರಿಂದ 54 ಮಿ.ಮೀ
ಮಹದೇವಪುರ: 23 ಮಿ.ಮೀ
ಆರ್.ಆರ್.ನಗರ: 14.5 ರಿಂದ 42 ಮಿ.ಮೀ
ಯಲಹಂಕ: 4 ರಿಂದ 19 ಮಿ.ಮೀ
ದಾಸರಹಳ್ಳಿ: 6 ರಿಂದ 21.5 ಮಿ.ಮೀ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+