ಉಪಮುಖ್ಯಮಂತ್ರಿ ಸ್ಥಾನಗಳಿಗೆ ದಲಿತ, ಲಿಂಗಾಯತ ನಾಯಕರ ನೇಮಕ?
Recommended Video

ಬೆಂಗಳೂರು, ಮೇ 21: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕರ್ನಾಟಕ ಇಬ್ಬರು ಉಪಮುಖ್ಯಮಂತ್ರಿಗಳನ್ನು ಹೊಂದುವ ಸಾಧ್ಯತೆ ಇದೆ.
ಈ ಎರಡೂ ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಲಿಂಗಾಯತ ಮತ್ತು ದಲಿತ ನಾಯಕರನ್ನು ಮುಂದಿಡುವ ಸಂಭವವಿದೆ. ದೆಹಲಿಯಲ್ಲಿ ಸೋಮವಾರ ಕುಮಾರಸ್ವಾಮಿ ಅವರು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ನಿರ್ಧಾರವಾಗಲಿದೆ.
ಇಬ್ಬರು ಉಪಮುಖ್ಯಮಂತ್ರಿಗಳನ್ನು ನೇಮಿಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರೂ ಸುಳಿವು ನೀಡಿದ್ದಾರೆ. ಇಬ್ಬರು ಉಪಮುಖ್ಯಮಂತ್ರಿಗಳಲ್ಲಿ ಪರಮೇಶ್ವರ್ ಅವರೂ ಒಬ್ಬರು ಎಂದು ಮೂಲಗಳು ತಿಳಿಸಿವೆ.

ಇನ್ನೊಂದು ಆಯ್ಕೆ ಲಿಂಗಾಯತ ಮುಖಂಡರದ್ದಾಗಿದ್ದು, ಕಾಂಗ್ರೆಸ್ ಶ್ಯಾಮನೂರು ಶಿವಶಂಕರಪ್ಪ ಅವರ ಬಗ್ಗೆ ಒಲವು ತೋರಿಸಿದೆ.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಗುರುವಾರ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಜತೆಗೂಡಿ ವಿಶ್ವಾಸಮತದಲ್ಲಿ ಭಾಗವಹಿಸಲಿದ್ದಾರೆ.
ವಿಶ್ವಾಸಮತಕ್ಕೂ ಮುನ್ನ ಸ್ಪೀಕರ್ ಚುನಾವಣೆ ನಡೆಯಲಿದೆ. ವಿಶ್ವಾಸಮತ ಯಾಚನೆ ಬಳಿಕ ಇಬ್ಬರು ಉಪಮುಖ್ಯಮಂತ್ರಿಗಳ ಆಯ್ಕೆಯನ್ನು ಪ್ರಕಟಿಸುವ ನಿರೀಕ್ಷೆಯಿದೆ.












Click it and Unblock the Notifications