ಸಮೀಕ್ಷೆಗಳು ಸುಳ್ಳಾಗಲಿವೆ: 31 ಸಾವಿರ ಬೂತ್‌ಗಳಲ್ಲಿ ಬಿಜೆಪಿಗೆ ಮುನ್ನಡೆ : ಬಿಎಲ್ ಸಂತೋಷ್
ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗಲಿದ್ದು, ಬಿಜೆಪಿ ಸ್ಪಷ್ಟ ಗೆಲುವು ಸಾಧಿಸಲಿದೆ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದ್ದಾರೆ. ಈ ಹಿಂದೆಯೂ ಅನೇಕ ಬಾರಿ ಎಕ್ಸಿಟ್ ಪೋಲ್‌ಗಳು ಸುಳ್ಳಾಗಿವೆ, ಈ ಬಾರಿ ಕೂಡ ಹಾಗೆಯೇ ಆಗಲಿದೆ ಎಂದು ಹೇಳಿದ್ದಾರೆ.
With due respects to all celebrity pollsters none of them predicted 282 in 2014 or 303 in 2019 or 156 in 2022. or 104 in 2018. In 2018 @BJP4Karnataka led in 24K booths with 0 leads in 14 ACs . This time we will lead in 31K booths with all ACs contributing. Numbers is your guess.
— B L Santhosh (@blsanthosh) May 11, 2023
ಈ ಬಾರಿ ಕರ್ನಾಟಕದಲ್ಲಿ 31 ಸಾವಿರ ಬೂತ್‌ಗಳಲ್ಲಿ ಬಿಜೆಪಿ ಮುನ್ನಡೆ ಪಡೆಯಲಿದೆ ಎಂದು ಅವರು ಹೇಳಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 282, 2019 ಚುನಾವಣೆಯಲ್ಲಿ 303 ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿರಲಿಲ್ಲ, ಹಾಗೆಯೇ ರಾಜ್ಯದಲ್ಲಿ ಕೂಡ 2018ರಲ್ಲಿ 104 ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂದು ಹೇಳಿರಲಿಲ್ಲ ಎಂದಿದ್ದಾರೆ.

2018ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 14 ಕ್ಷೇತ್ರಗಳಲ್ಲಿ ಹಿನ್ನಡೆ ಪಡೆದಿದ್ದರೂ, 24 ಸಾವಿರ ಬೂತ್‌ಗಳಲ್ಲಿ ಮುನ್ನಡೆ ಸಾಧಿಸಿತ್ತು. ಈ ಬಾರಿ ನಾವು 31,000 ಬೂತ್‌ಗಳಲ್ಲಿ ಮುನ್ನಡೆ ಸಾಧಿಸುತ್ತೇವೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ, ಚುನಾವಣೋತ್ತರ ಸಮೀಕ್ಷೆಯ ಅಂಕಿ ಅಂಶಗಳು ಕೇವಲ ಊಹೆಯಷ್ಟೇ ಎಂದು ಹೇಳಿದ್ದಾರೆ.
ಬಿಜೆಪಿಗೆ ಹಿನ್ನಡೆ ಎಂದ ಸಮೀಕ್ಷೆಗಳು
ಇನ್ನು ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಈ ಬಾರಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ಹೇಳಿವೆ. ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದ್ದು, ಸರಳ ಬಹುಮತ ಪಡೆಯಬಹುದು ಎಂದು ಕೆಲವು ಸಮೀಕ್ಷೆಗಳು ತಿಳಿಸಿದ್ದು, ಇನ್ನೂ ಕೆಲವು ಸಮೀಕ್ಷೆಗಳು ಅತಂತ್ರ ಫಲಿತಾಂಶ ಬರುತ್ತದೆ ಎಂದು ಭವಿಷ್ಯ ಹೇಳಿವೆ.
ಮೂರು ಪಕ್ಷಗಳು ಕೂಡ ಈ ಸಮೀಕ್ಷೆಗಳನ್ನು ನಿರಾಕರಿಸಿವೆ. ಒಂದು ಕಡೆ ಬಿಜೆಪಿ ನಾಯಕರು ನಾವು ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದರೆ, ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾಂಗ್ರೆಸ್ 146 ಸೀಟುಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಕೂಡ ಕಾಂಗ್ರೆಸ್ 130ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಭರ್ಜರಿ ಪ್ರಚಾರ ಮಾಡಿದ ಹೊರತಾಗಿಯೂ ಆಡಳಿತಾರೂಢ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಸಮೀಕ್ಷೆಗಳು ಹೇಳಿವೆ. ಚುನಾವಣೆ ಮುಗಿಸಿ ದೇವಸ್ಥಾನಗಳಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ವಾಪಸಾಗಿದ್ದಾರೆ.
ಹೆಚ್‌ಡಿ ಕುಮಾರಸ್ವಾಮಿ ಆರೋಗ್ಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿದ್ದು, ಮೇ 13ರಂದು ಬೆಂಗಳೂರಿಗೆ ವಾಪಸಾಗಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲು ವಿಫಲವಾದರೆ ಜೆಡಿಎಸ್ ಕಿಂಗ್ ಮೇಕರ್ ಆಗುವ ಎಲ್ಲಾ ಸಾಧ್ಯತೆ ಇದೆ.












Click it and Unblock the Notifications