ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೋಗ್ಯ ಸೇವೆಗೆ ಕವಚ ಯೋಜನೆ ಅಡಿ 120 ಆಂಬ್ಯುಲೆನ್ಸ್‌ಗಳ ಸೇರ್ಪಡೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 12: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕವಚ ಯೋಜನೆಯಡಿ 120 ಆಂಬುಲೆನ್ಸ್ ಅನ್ನು ಸೇರ್ಪಡೆಗೊಳಿಸಲಾಗಿದೆ.

ವಿಧಾನಸೌಧದ ಮುಂಭಾಗ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರೋಗ್ಯ ಕವಚ ಯೋಜನೆಯಡಿ 710 ಆಂಬ್ಯುಲೆನ್ಸ್ ಕಾರ್ಯನಿರ್ವಹಿಸುತ್ತಿದ್ದು ಅದರಲ್ಲಿ 155 ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಅಂಬುಲನ್ಸ್ ಆಗಿವೆ. ಇಂದು ಲೋಕಾರ್ಪಣೆಗೊಳಿಸಿದ 120 ಆಂಬ್ಯುಲೆನ್ಸ್ ಗಳು ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಅಂಬುಲನ್ಸ್ ಆಗಿವೆ ಎಂದರು.

ಬೆಂಗಳೂರು ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ: ಮುಖ್ಯಮಂತ್ರಿ ಬೊಮ್ಮಾಯಿಬೆಂಗಳೂರು ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ

ಆಂಬ್ಯುಲೆನ್ಸ್ ಸೇವೆ ಆರೋಗ್ಯ ಸೇವೆಯ ಪ್ರಮುಖ ಅಂಗವಾಗಿದ್ದು ತುರ್ತು ಪರಿಸ್ಥಿತಿಗಲ್ಲಿ ಜೀವ ಉಳಿಸಲು ನಿರ್ಣಾಯಕ ಪಾತ್ರ ವಹಿಸುತ್ತವೆ. ಹೃದ್ರೋಗ, ಸ್ಟ್ರೋಕ್ ಮುಂತಾದ ಸಂದರ್ಭಗಳಲ್ಲಿ ಗೋಲ್ಡನ್ ಅವರ್ ಎಂದು ಕರೆಯಲ್ಪಡುವ ಸಮಯ ನಿರ್ಣಾಯಕವಾಗಿದ್ದು, ಆಂಬ್ಯುಲೆನ್ಸ್ ಸೇವೆಯ ಜಾಲ ವಿಸ್ತರಿಸಿ ಗುಣಮಟ್ಟ ಹೆಚ್ಚಿಸಲು ಹೊಸ ಕಾಯಕಲ್ಪ ನೀಡಲಾಗುವುದು ಎಂದರು.

Karnataka: 120 Ambulances added for health service under Kavach Plan

ಕವಚ ಸೇವೆಗೆ ಆಧುನಿಕ ಸ್ಪರ್ಶ:

2008ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅಂದಿನ ಆರೋಗ್ಯ ಸಚಿವ ಶ್ರೀರಾಮುಲು ಅವಧಿಯಲ್ಲಿ ಆರಂಭವಾದ ಆರೋಗ್ಯ ಕವಚ ಸೇವೆಗೆ ಆಧುನಿಕ ಸ್ಪರ್ಶ ನೀಡಲಾಗುವುದು. ಆಸ್ಪತ್ರೆಗಳ ಮ್ಯಾಪಿಂಗ್, ಜಿಪಿಎಸ್ ತಂತ್ರಜ್ಞಾನ ಅಳವಡಿಸಿಕೊಂಡರೆ ವ್ಯಕ್ತಿ ಕರೆ ಮಾಡಿದ 10-15 ನಿಮಿಷದಲ್ಲಿ ಆಂಬ್ಯುಲೆನ್ಸ್ ತಲುಪಿ, ಸಮೀಪದ ಆಸ್ಪತ್ರೆ ಗುರುತಿಸಬಹುದು. ಈ ನಗರ ಪ್ರದೇಶದಲ್ಲಿ 30-45 ನಿಮಿಷ ಹಾಗೂ ಗ್ರಾಮೀಣ ಭಾಗದಲ್ಲಿ 45 ನಿಮಿಷಕ್ಕಿಂತ ಹೆಚ್ಚು ಸಮಯ ಬೇಕಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗವಾಗಿ ಸೇವೆ ದೊರಕುವಂತೆ ಸುಧಾರಣೆ ತರಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ನೂತನ ಟೆಂಡರ್ ಕರೆದಿದ್ದು, ಶೀಘ್ರದಲ್ಲಿ ಆರೋಗ್ಯ ಕವಚ ಸೇವೆಯನ್ನು ಇನ್ನಷ್ಟು ಸುಗಮಗೊಳಿಸಲಾಗುವುದು.

ಪ್ರಸ್ತುತ 1 ಲಕ್ಷ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಲಭ್ಯವಿದ್ದು, ಮುಂದಿನ ದಿನಗಳಲ್ಲಿ 40-50 ಸಾವಿರ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಲಭ್ಯತೆ ಕಲ್ಪಿಸಲಾಗುವುದು ಎಂದರು. ಅಂಬುಲನ್ಸ್ ಚಾಲಕರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿ, ಉತ್ಕೃಷ್ಟ ಸೇವೆ ನೆಧ್ವ ನಿಟ್ಟಿನಲ್ಲಿ ಅವರಿಗೆ ಹೆಚ್ಚಿನ ತರಬೇತಿ ನೀಡಲಾಗುವುದು ಎಂದು ಹೇಳಿದರು.

5 ಕೋಟಿ ಲಸಿಕೆಯತ್ತ ರಾಜ್ಯ ದಾಪುಗಾಲು:

Recommended Video

ಟೆಸ್ಟ್ ಮ್ಯಾಚ್ ರದ್ದಾಗಿದ್ದಕ್ಕೆ ಕೋಪಗೊಂಡ ಇಂಗ್ಲೆಂಡ್ ಆಟಗಾರರು !! | Oneindia Kannada

ರಾಜ್ಯದಲ್ಲಿ ದಿನಕ್ಕೆ ಸರಾಸರಿ 3.8 ಲಕ್ಷ ಡೋಸ್ ಲಸಿಎಕ್ ನೀಡಲಾಗುತ್ತಿದ್ದು ಇದು ಇಡೀ ರಷ್ಯಾ ದೇಶದಲ್ಲಿ ನೀಡುತ್ತಿರುವ ಲಸಿಕೆಗಿಂತ ಹೆಚ್ಚಾಗಿದೆ. ಕರ್ನಾಟಕ 5 ಕೋಟಿ ಡೋಸ್ ಲಸಿಕೆ ವಿತರಣೆ ಪೂರೈಸುವತ್ತ ದಾಪುಗಾಲು ಇಡುತ್ತಿದ್ದು ಶೀಘ್ರವೇ ಈ ಮೈಲಿಗಲ್ಲು ತಲುಪಲಿದೆ, ಎಂದರು.

English summary
Karnataka: 120 Ambulances added for health service under Kavach Plan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X