ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯ ವಾರ್ಷಿಕ ಪರೀಕ್ಷೆ ಆರಂಭ

|
Google Oneindia Kannada News

ಬೆಂಗಳೂರು, ಡಿ. 09: ರಾಜ್ಯದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಧ್ಯ ವಾರ್ಷಿಕ ಪರೀಕ್ಷೆ ಗುರುವಾರದಿಂದ ಆರಂಭವಾಗಿದೆ. ಪರೀಕ್ಷೆ ಆರಂಭವಾದ ಮೊದಲ ದಿನ ಇತಿಹಾಸ ಮತ್ತು ಭೌತಶಾಸ್ತ್ರ ಪರೀಕ್ಷೆ ನಡೆಯಿದೆ. ಅದೇ ರೀತಿ ಪ್ರಥಮ ಪಿಯುಸಿಯ ಮಧ್ಯ ವಾರ್ಷಿಕ ಪರೀಕ್ಷೆ ಸಹ ಡಿಸೆಂಬರ್ 9 ರಿಂದ 23 ವರೆಗೂ ನಡೆಯಲಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಯಾ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಿಂದ ಪ್ರಶ್ನೆ ಪತ್ರಿಕೆಗಳನ್ನು ಸಂಬಂಧ ಪಟ್ಟ ಪ್ರತಿ ಕಾಲೇಜಿಗೂ ರವಾನಿಸಲಿದ್ದಾರೆ. ಪರೀಕ್ಷೆ ಮುಗಿದ ಬಳಿಕ ಎಲ್ಲಾ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಸಂಬಂಧ ಪಟ್ಟ ಕಾಲೇಜುಗಳಲ್ಲಿಯೇ ಉಪನ್ಯಾಸಕರು ನಡೆಸಲಿದ್ದಾರೆ. ಆಯಾ ಕಾಲೇಜುಗಳ ಪ್ರಾಂಶುಪಾಲರ ಮೇಲುಸ್ತುವಾರಿಯಲ್ಲಿ ನಡೆಸಲಿದೆ. ಇನ್ನು ಪರೀಕ್ಷೆ ಮುಗಿದ ಹದಿನೈದು ದಿನಗಳ ಬಳಿಕ ಫಲಿತಾಂಶವನ್ನು ಸ್ಯಾಟ್ಸ್‌ನಲ್ಲಿ ಪ್ರಕಟಿಸಲಾಗುತ್ತದೆ.

ಪರೀಕ್ಷೆ ಹಾಗೂ ಮೌಲ್ಯಮಾಪನದಲ್ಲಿ ಏನಾದರೂ ತೊಂದರೆ, ಅಡಚಣೆ ಉಂಟಾದಲ್ಲಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರನ್ನೇ ಜವಾಬ್ದಾರರನ್ನಾಗಿ ಮಾಡಲಾಗುತ್ತದೆ. ಪ್ರಥಮ ಪಿಯುಸಿ ಮಧ್ಯಂತರ ಪರೀಕ್ಷೆ ಕೂಡ ಕಾಲೇಜು ಹಂತದಲ್ಲಿ ನಡೆಯಲಿದ್ದು, ಫಲಿತಾಂಶವನ್ನು ಸ್ಯಾಟ್ಸ್‌ನಲ್ಲಿ ಪ್ರಕಟಿಸಲಾಗುತ್ತದೆ. ಇನ್ನ ಯಾರಾದರೂ ವಿದ್ಯಾರ್ಥಿಗಳು ಕೋವಿಡ್ ಸೋಂಕಿಗೆ ಒಳಗಾಗಿದ್ದರೆ, ಅಂತಹವರಿಗೆ ಮಧ್ಯ ವಾರ್ಷಿಕ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.

Karnataka 1st and 2nd PUC Mid Term Exam 2021 begins from 9 December

ಓಮಿಕ್ರಾನ್ ಭೀತಿ ನಡುವೆಯೂ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಅತಿಯಾಗಿ ಮಳೆ ಬಂದ ಹಿನ್ನೆಲೆಯಲ್ಲಿ ಪರೀಕ್ಷಾ ಅವಧಿಯಲ್ಲಿ ಸ್ವಲ್ಪ ಬದಲಾವಣೆ ತಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿತ್ತು. ಇದೀಗ ಅದರಂತೆ ಪ್ರಥಮ ಹಾಗೂ ದ್ವಿತೀಯ ಪಿಯುಸಿಯ ಮಧ್ಯ ವಾರ್ಷಿಕ ಪರೀಕ್ಷೆ ನಡೆಯುತ್ತಿದೆ.

Karnataka 1st and 2nd PUC Mid Term Exam 2021 begins from 9 December

ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕೊರೊನಾ ಮಾರ್ಗಸೂಚಿ ಪಾಲನೆಗೆ ಸೂಚನೆ ಮಾಡಲಾಗಿದೆ. ಅದರಂತೆ ಕಾಲೇಜುಗಳನ್ನು ಸಾನಿಟೈಸ್ ಮಾಡಲಾಗಿದೆ. ವಿದ್ಯಾರ್ಥಿಗಳ ಸಾಮಾಜಿಕ ಅಂತರ, ಕಡ್ಡಾಯ ಮಾಸ್ಕ್ ಧರಿಸವುದು ಸೇರಿದಂತೆ ಹಲವು ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಪಾಲನೆ ಮಾಡಲು ಸೂಚಿಸಲಾಗಿದೆ. ಹೀಗಾಗಿ ಯಾವುದೇ ಭೀತಿ ಇಲ್ಲದೇ ವಿದ್ಯಾರ್ಥಿಗಳು ಮಧ್ಯ ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

Recommended Video

ಭಾರತ ಸೇನೆಗೆ ಬಿಪಿನ್ ರಾವತ್ ಕೊಟ್ಟ ಕೊಡುಗೆ ಏನೇನು ಗೊತ್ತಾ? | Oneindia Kannada

English summary
Karnataka 1st and 2nd PU mid-term examinations begins from 9 December, with History and Physics in the morning session. Mid-term examinations from December 9 to 23. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X