ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

|
Google Oneindia Kannada News

ಬೆಂಗಳೂರು, ಮೇ 5: ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ಫಲಿತಾಂಶ ಇಂದು ಪ್ರಕಟಿಸಿದೆ.

Recommended Video

ಅಯ್ಯೋ ದೇವ್ರೇ.. ಕುಡಿಯೋಕೆ ಸಿಗುತ್ತೆ ಅಂತಾ ಹೀಗಾ ಆಡೋದು | Oneindia Kannada

ಕೊರೊನಾವೈರಸ್ ಕೊವಿಡ್ 19 (Covid-19) ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಫಲಿತಾಂಶವನ್ನು ಕಾಲೇಜುಗಳಲ್ಲಿ ಪ್ರಕಟಿಸದೆ ಕಾಲೇಜು ಆಡಳಿತ ಮಂಡಳಿಗಳು ವಿದ್ಯಾರ್ಥಿಗಳ ಮೊಬೈಲ್​​ಗೆ ಸಂದೇಶ ಅಥವಾ ಇಮೇಲ್‌ ಮೂಲಕ ಫಲಿತಾಂಶದ ವಿವರ ಕಳುಹಿಸುವಂತೆ ಸರ್ಕಾರ ಸೂಚಿಸಿದೆ.

ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಿದೆ.

Karnataka 1st PUC results 2020 declared, how to check online

ಒಟ್ಟು 6.53 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 2 ಲಕ್ಷ ಕಲಾ ವಿಭಾಗ, 2.48 ವಾಣಿಜ್ಯ, 2.4 ಲಕ್ಷ ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿಪರೀಕ್ಷೆ ಬರೆದಿದ್ದರು. ಕಳೆದ ವಾರವಷ್ಟೇ ಕಾಲೇಜುಗಳು ಮೇ 5ನೇ ತಾರೀಕಿನಂದು ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದ ಪೂರ್ವ ಶಿಕ್ಷಣ ಇಲಾಖೆ ಇದರಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜುಮಟ್ಟದಲ್ಲಿಯೇ ನಿರ್ವಹಿಸಲು‌ ಮಾನದಂಡಗಳನ್ನು ಸದ್ಯದಲ್ಲೇ ತಿಳಿಸಲಿದ್ದೇವೆ ಎಂದು ಸ್ಪಷ್ಟಪಡಿಸಿತ್ತು.

'ಈ ವರ್ಷ ಎಸ್ಎಸ್‌ಎಲ್‌ಸಿ ಪರೀಕ್ಷೆ ಬೇಡ' ಎಂದ ಶಿಕ್ಷಣ ತಜ್ಞರು!'ಈ ವರ್ಷ ಎಸ್ಎಸ್‌ಎಲ್‌ಸಿ ಪರೀಕ್ಷೆ ಬೇಡ' ಎಂದ ಶಿಕ್ಷಣ ತಜ್ಞರು!

ಇದಲ್ಲದೆ ಒಂದು ವೇಳೆ ಈ ಬಗ್ಗೆ ದೂರುಗಳು ಬಂದಲ್ಲಿ, ಕಾಲೇಜುಗಳ ಮೇಲೆ ನಿರ್ದಾಕ್ಷಿಣ್ಯವಾದ ಕ್ರಮಕ್ಕೆ ಮುಂದಾಗಲಾಗುವುದೆಂದು ಪದವಿಪೂರ್ವ ಶಿಕ್ಷಣ ನಿರ್ದೇಶಕರು ತಮ್ಮ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಜತೆಗೆ ಖಾಸಗಿ ಪಿಯು ಕಾಲೇಜುಗಳು ಇಂತಹ ಸಾಮಾಜಿಕ ಸಂಕಷ್ಟದ ಸಂದರ್ಭ ದಲ್ಲಿ ಅಸಹಾಯಕ ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯಿಸಬಾರದು, ಇಚ್ಛಿಸುವ ಪೋಷಕರಿಂದ ಕಂತುಗಳ ಮೂಲಕ ಸ್ವೀಕರಿಸತಕ್ಕದ್ದು ಹಾಗೂ 2020-21 ನೇ ಈ ಸಾಲಿಗೆ ಯಾವುದೇ ಕಾರಣಕ್ಕೂ ಬೋಧನ ಶುಲ್ಕವನ್ನು ಹೆಚ್ಚಿಸಬಾರದೆಂದು ಇಲಾಖೆಯು ನಿರ್ದೇಶನ ನೀಡಿತ್ತು.

ಆನ್‌ಲೈನ್ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.SuVidya, result.bspucpa.com ಮೂಲಕವು ಫಲಿತಾಂಶ ವೀಕ್ಷಿಸಬಹುದಾಗಿದೆ.

ಫಲಿತಾಂಶ ವೀಕ್ಷಿಸುವುದು ಹೇಗೆ?
1- result.bspucpa.com ಗೆ ಭೇಟಿ ನೀಡಿ
2-ನಿಮ್ಮ ರಿಜಿಸ್ಟರ್ ನಂಬರ್ ಹಾಗೂ ಹುಟ್ಟಿದ ದಿನಾಂಕ ಎಂಟರ್ ಮಾಡಿ
3-ನಿಮ್ಮ ಫಲಿತಾಂಶ ಸ್ಕ್ರೀನ್‌ ಮುಂದೆ ಬರಲಿದೆ
4-ಡೌನ್‌ಲೋಡ್ ಮಾಡಿ, ಪ್ರಿಂಟ್‌ಔಟ್ ತೆಗೆದುಕೊಳ್ಳುವುದಿದ್ದರೆ ತೆಗೆದುಕೊಳ್ಳಿ

English summary
Karnataka KSEEB 1st PUC results 2020: The students can get the results via online portal- SuVidya,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X