ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, ಪೂರಕ ಪರೀಕ್ಷೆ ರದ್ದು!

|
Google Oneindia Kannada News

ಬೆಂಗಳೂರು, ಜು. 13: ಅತ್ಯಂತ ಸವಾಲನ್ನು ಎದುರಿಸಿ ಪಿಯುಸಿ ಇಂಗ್ಲೀಷ್ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಿದ್ದ ಸರ್ಕಾರ, ಇದೀಗ ಪಿಯುಸಿ ಪೂರಕ ಪರೀಕ್ಷೆ ರದ್ದುಗೊಳಿಸಿ ಆದೇಶ ಮಾಡಿದೆ.

Recommended Video

Rameshwaram - A Spiritual Journey To The Divine Site Of Tamil Nadu | Oneindia Kannada

ರಾಜ್ಯಾದ್ಯಂತ ಕೋವಿಡ್ ಸೋಂಕಿತರ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಇದೇ ಜುಲೈ 16 ರಿಂದ 27ರವರೆಗೆ ನಿಗದಿಯಾಗಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಸುಮಾರು 60 ಸಾವಿರ ವಿದ್ಯಾರ್ಥಿಗಳು ಸಪ್ಲಿಮೆಂಟರಿ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕಾಗಿತ್ತು. ಆಯಾ ಕಾಲೇಜುಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಟ್ಟು ಜುಲೈ 30 ರಂದು ಫಲಿತಾಂಶವನ್ನು ಪ್ರಕಟಿಸಲು ನಿರ್ಧರಿಸಲಾಗಿತ್ತು ಎಂದು ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಜುಲೈ 14 ರಂದು ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಜುಲೈ 14 ರಂದು ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿಗೆ ತೇರ್ಗಡೆ:

ಇದೀಗ ಕೋವಿಡ್ ಸೊಂಕಿತರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳ ಪರೀಕ್ಷೆಯನ್ನು ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ತೇರ್ಗಡೆಗೊಳಿಸಲಾಗುವುದು ಎಂದು ಮಾಹಿತಿ ಕೊಟ್ಟಿದ್ದಾರೆ ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ಹೇಳಿಕೆ ಕೊಟ್ಟಿದ್ದಾರೆ.

Karnataka 1st PUC Supplementary Exam Cancelled in Wake of COVID-19

ಹಾಜರಾತಿ ಕೊರತೆಯಿಲ್ಲದ, ಅನಿವಾರ್ಯ ಸಂದರ್ಭದಲ್ಲಿ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗಳು ಪ್ರಾರಂಭವಾದ ಬಳಿಕ ದ್ವಿತೀಯ ಪಿಯುಸಿಯ ಪ್ರಥಮ ಕಿರು ಪರೀಕ್ಷೆ ನಡೆಯುವ ಮೊದಲು, ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣವಾಗಿರುವ ವಿಷಯಗಳಿಗೆ ಮತ್ತೊಮ್ಮೆ ಕಾಲೇಜುಗಳಲ್ಲಿಯೆ ಕಿರುಪರೀಕ್ಷೆಯನ್ನು ನಡೆಸಲಾಗುವುದು. ಆ ಮೂಲಕ ಅವರ ಕಲಿಕಾ ಮಟ್ಟವನ್ನು ಮೌಲ್ಯಮಾಪನ ಮಾಡಲಾಗುವು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ

ಆದರೆ, ಹಾಜರಾತಿಯ ಕೊರತೆಯಿಂದ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ಪಡೆಯದ ವಿದ್ಯಾರ್ಥಿಗಳು ಮಾತ್ರ ಅನುತ್ತೀರ್ಣಗೊಳ್ಳುವರು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

English summary
The first PUC supplementary exam, scheduled for July 16 to 27, has been canceled, said Education Minister S Suresh Kumar. The decision comes as the number of cases of Covid infected increasing across the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X