ಕರ್ನಾಟಕ: ಇಂಧನ ಕ್ಷೇತ್ರದಲ್ಲಿ 2ಲಕ್ಷ ಕೋಟಿ ಬಂಡವಾಳ ಹೂಡಿಕೆ: ಸಿಎಂ
ಬೆಂಗಳೂರು, ಡಿಸೆಂಬರ್ 16: ಸದ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಸುಮಾರು 2 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಹರಿದು ಬಂದಿದೆ. ಇದರಿಂದ ಇಂಧನ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿ ರಾಜ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ಇಂಡಿಯಾ ಎನರ್ಜಿ ವೀಕ್ -2023 ಪೂರ್ವಭಾಗಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಿ ಅವರು ಮಾತನಾಡಿದರು. ಭಾರತದದಲ್ಲಿ ಶೇ.46 ರಷ್ಟು ವಿದ್ಯುತ್ ಕರ್ನಾಟಕದಲ್ಲಿ ಉತ್ಪಾದನೆ ಆಗುತ್ತಿದೆ ಎಂದರು.
ಕರ್ನಾಟಕವು ಇಂಧನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಏಷ್ಯಾದಲ್ಲೇ ಮೊದಲ ಜಲವಿದ್ಯುತ್ ಶಕ್ತಿ ಘಟಕವನ್ನು ಪ್ರಾರಂಭಿಸಿದ್ದು, ಈ ನೆಲದಲ್ಲಿಯೇ. ಕರ್ನಾಟಕದಲ್ಲಿ ಹಾಲಿ 31,000ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಅದರಲ್ಲಿ ಅರ್ಧದಷ್ಟು ನವೀಕರಿಸಬಹುದಾದ ಇಂಧನವಾಗಿದೆ. ಬೆಂಗಳೂರಿನ ಸಮೀಪವೇ ಸೋಲಾರ್ ಪಾಕ್ ಸ್ಥಾಪಿಸಲಾಗಿದೆ. ಈ ಎಲ್ಲ ಅಂಶಗಳಿಂದ ಭಾರತದ ಶೇ.46 ರಷ್ಟು ವಿದ್ಯುತ್ ಕರ್ನಾಟಕ ರಾಜ್ಯದಲ್ಲಿ ಉತ್ಪಾದನೆ ಆಗುತ್ತಿದೆ.
ಆದರೆ ಇಂದು ವಿದ್ಯುತ್ ಸಂಗ್ರಹಣೆ ಸವಾಲಿನ ವಿಷಯವಾಗಿದೆ. ನವೀಕರಿಸಬಹುದಾದ ಇಂಧನವನ್ನು ವಿದ್ಯುತ್ ಉತ್ಪಾದನೆ ಹಾಗೂ ಸಂಗ್ರಹಣೆ ಹೆಚ್ಚಿಸಲು ಬಳಸಲಾಗುತ್ತದೆ. ರಾಜ್ಯದ ಹೈಡ್ರೋಜನ್ ಸೈನ್ಸ್ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಯೂ ಆಗುತ್ತಿದೆ. ಇದಲ್ಲದೇ ಸಮುದ್ರದ ನೀರಿನಿಂದ ಅಮೋನಿಯಾ ಉತ್ಪಾದನೆಗೆ ಒತ್ತು ನೀಡಲಾಗುತ್ತಿದೆ. ಪಳೆಯುಳಿಕೆ ಇಂಧನದ ಕಡಿಮೆ ಬಳಕೆ ಹಾಗೂ ಆರ್ಥಿಕತೆಯ ಅಭಿವೃದ್ಧಿಯಲ್ಲಿ ಸಮತೋಲನ ಕಂಡುಕೊಳ್ಳಬೇಕಿದೆ ಎಂದು ವಿವರಿಸಿದರು.

'ಒಂದು ದೇಶ-ಒಂದು ಗ್ರೀಡ್' ನೀತಿಯಿಂದ ಸುಧಾರಣೆ
ಇಂಧನ ಕ್ಷೇತ್ರದಲ್ಲಿ ಉತ್ತಮ ಆರ್ ಎಂಡ್ ಡಿ ಕೇಂದ್ರಗಳು ರಾಜ್ಯದಲ್ಲಿವೆ. ರಾಜ್ಯದಲ್ಲಿ ಉತ್ತಮ ರೀತಿಯ ವಿದ್ಯುತ್ ಉತ್ಪಾದನೆ ಹಾಗೂ ಪ್ರಸರಣಾ ವ್ಯವಸ್ಥೆಗಳಿವೆ. ಕೇಂದ್ರ ಸರ್ಕಾರದ ಒಂದು ದೇಶ, ಒಂದು ಗ್ರಿಡ್ ನೀತಿಯು ಇಂಧನ ಕ್ಷೇತ್ರದಲ್ಲಿ ಸುಧಾರಣೆ ತರಲಿದೆ. ದೇಶದಾದ್ಯಂತ ವಿದ್ಯುತ್ ಪ್ರಸರಣವನ್ನು ಸರಳೀಕರಿಸುವ ಯೋಜನೆ ಇದಾಗಿದೆ. ದೇಶಕ್ಕೆ ಸಾಕಾಗುವಷ್ಟು ಇಂಧನ ಉತ್ಪಾದನೆ ಆಗುವತ್ತ ಪ್ರಯತ್ನಗಳಾಗುತ್ತಿದೆ. ಹಸಿರು ಇಂಧನದ ಉತ್ಪಾದನೆ ಹಾಗೂ ಬಳಕೆಯ ಬಗ್ಗೆ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ಗಮನಹರಿಸಬೇಕು. ಇಂಡಿಯಾ ಎನರ್ಜಿ ವೀಕ್ 2023 ಕಾರ್ಯಕ್ರಮ ಉದ್ದೇಶ ಸಾಕಾರಗೊಳ್ಳಲಿ ಎಂದು ಮುಖ್ಯಮಂತ್ರಿಗಳು ಆಶಿಸಿದರು.
ಅಭಿವೃದ್ಧಿಗೆ ಇಂಧನ ಶಕ್ತಿ ಬೇಕು
ಸಾಹಸಪ್ರಿಯನಾದ ಮನುಷ್ಯ ಹೊಸ ಅವಿಷ್ಕಾರಗಳನ್ನು ಮಾಡುತ್ತಲೇ ಇರುತ್ತಾನೆ. ಮೂಲಭೂತ ಸಂಶೋಧನೆಗಳನ್ನು ಪ್ರತ್ಯೇಕ ವ್ಯಕ್ತಿಗಳು ಮಾಡಿರುವುದೇ ಹೊರತು ಸಂಸ್ಥೆಗಳಲ್ಲ. ವಿಜ್ಞಾನಿಗಳಾದ ಸರ್ ಐಸಾಕ್ ನ್ಯೂಟನ್, ಥಾಮಸ್ ಆಲ್ವಾ ಎಡಿಸನ್ ನಂತವರ ಸಂಶೋಧನೆಗಳು ಪ್ರಪಂಚಕ್ಕೆ ಒಳಿತನ್ನು ತಂದಿದೆ. ಮನುಷ್ಯನ ಎಲ್ಲ ಅವಶ್ಯಕತೆಗಳನ್ನು ನಿಸರ್ಗ ಪೂರೈಸುತ್ತದೆ. ಸುಸ್ಥಿರ ಅಭಿವೃದ್ಧಿ ಹಾಗೂ ಸುಸ್ಥಿರ ಪರಿಸರವನ್ನು ಖಾತ್ರಿಪಡಿಸುವ ಸಂಶೋಧನೆಗಳು ನಡೆಯಬೇಕು. ಇಂಧನ ಮತ್ತು ಪರಿಸರ ವಿಜ್ಞಾನ ಎರಡೂ ಸಮತೋಲನವನ್ನು ಸಾಧಿಸಬೇಕು. ಪಳೆಯುಳಿಕೆ ಇಂಧನದಿಂದ ಪರಿಸರದಲ್ಲಿ ಅಸಮತೋಲನತೆಯನ್ನು ಸೃಷ್ಟಿಸಿದೆ. ಅಭಿವೃದ್ಧಿಗೆ ಇಂಧನ ಶಕ್ತಿ ಬೇಕು ಎಂದರು.
ಕಾರ್ಯಕ್ರಮದಲ್ಲಿ ಕೇಂದ್ರ ನೈಸರ್ಗಿಕ ಅನಿಲ ಮತ್ತು ಪೆಟ್ರೋಲಿಯಂ, ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಡಾ. ಹರ್ ದೀಪ್ ಸಿಂಗ್ ಪುರಿ ಮತ್ತಿತರರು ಪಾಲ್ಗೊಂಡಿದ್ದರು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications