ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ: ಇಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ

|
Google Oneindia Kannada News

ಬೆಂಗಳೂರು, ಜೂನ್ 18: ಕೊರೊನಾ ಸೋಂಕಿನ ಆತಂಕದ ಬೆನ್ನಲ್ಲೇ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸಿದ್ಧರಿದ್ದಾರೆ. ಇಂದು ಪರೀಕ್ಷೆ ಬರೆಯಲಿದ್ದಾರೆ. ಮಾರ್ಚ್‌ನಲ್ಲಿ ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆಯನ್ನು ಕೊವಿಡ್-19 ರೋಗದಿಂದಾಗಿ ಮುಂದೂಡಲ್ಪಟ್ಟಿತ್ತು.

ಸುಮಾರು 1116ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು , ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾಸ್ಕ್‍ಕಡ್ಡಾಯವಾಗಿದ್ದು , ಪರೀಕ್ಷಾ ಕೇಂದ್ರದ ಹೊರಗೆ ಕೂಡ ಗುಂಪು ಸೇರದಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ದಿನಾಂಕ ಪ್ರಕಟದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ದಿನಾಂಕ ಪ್ರಕಟ

ಪರೀಕ್ಷೆ ನಡೆಸುವ ಬಗ್ಗೆ ಬೇಕು-ಬೇಡಗಳ ಚರ್ಚೆ ನಡೆಯುತ್ತಲೇ ಇದೆ. ಸುಮಾರು 5.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹೊರ ಜಿಲ್ಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 678 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ.

Karnataka 2nd PU English Examination Today

ಸೋಂಕು ಹೆಚ್ಚಾಗಿರುವ ಬಳ್ಳಾರಿ, ಗುಲ್ಬರ್ಗ, ರಾಯಚೂರು, ಉಡುಪಿ ಸೇರಿದಂತೆ ಇತರೆಡೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಕೆಲ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದು, ತಾಂತ್ರಿಕ ಕಾರಣದಿಂದಾಗಿ ಕೇಂದ್ರ ಬದಲಾವಣೆಯಾಗದಿದ್ದ ಪಕ್ಷದಲ್ಲಿ ಅಥವಾ ಹೋಗಲು ಸಾಧ್ಯವಾಗದಿದ್ದರೆ ಅಂತಹ ವಿದ್ಯಾರ್ಥಿಗಳು ಮೂಲ ಕೇಂದ್ರಗಳಿಗೆ ಹೋಗಿ ಪರೀಕ್ಷೆ ಬರೆಯಬಹುದಾಗಿದೆ ಎಂದು ತಿಳಿಸಲಾಗಿದೆ.

ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

ಎಲ್ಲ ಕೊಠಡಿಗಳನ್ನು ಈಗಾಗಲೇ ಸ್ಯಾನಿಟೈಸರ್ ಮಾಡಲಾಗಿದೆ. ವಿದ್ಯಾರ್ಥಿಗಳು ಥರ್ಮಲ್ ಸ್ಕ್ಯಾನಿಂಗ್ ತಪಾಸಣೆಗಾಗಿ ಆಶಾ ಕಾರ್ಯಕರ್ತೆಯರನ್ನು ಮತ್ತು ನರ್ಸ್‌ಗಳನ್ನು ನೇಮಿಸಲಾಗಿದೆ.

English summary
Over 5.95 lakh II PU students will finally be able to write their English paper on Thursday in Karnataka. The examination, which was postponed on account of COVID-19, will be held in 1,016 centres across the State.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X