ಪ್ರಶ್ನೆ ಪತ್ರಿಕೆ ಲೀಕ್ : ದ್ವಿತೀಯ ಪಿಯುಸಿ ಕೆಮೆಸ್ಟ್ರಿ ಪರೀಕ್ಷೆ ರದ್ದು

Posted By:
Subscribe to Oneindia Kannada

ಬೆಂಗಳೂರು, ಮಾ 21: ದ್ವಿತೀಯ ಪಿಯುಸಿ ರಸಾಯನ ಶಾಸ್ತ (ಹೊಸ ಪಠ್ಯ ಕ್ರಮ) ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ಸೋಮವಾರ (ಮಾ 21) ನಡೆದ ಪರೀಕ್ಷೆಯನ್ನು ರದ್ದು ಪಡಿಸಲಾಗಿದೆ ಎಂದು ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಯಾದ ವಿಷಯ ಇಲಾಖೆಯ ಗಮನಕ್ಕೆ ಬಂದಿದ್ದು, ರಸಾಯನ ಶಾಸ್ತ್ರ ಮರುಪರೀಕ್ಷೆಯ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಇಲಾಖೆಯ ನಿರ್ದೇಶಕಿ ಪಲ್ಲವಿ ಆಕೃತಿ ತಿಳಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲವನ್ನು ಪತ್ತೆ ಹಚ್ಚಲು ವಿವರವಾದ ತನಿಖೆಗೆ ಆದೇಶಿಸಲಾಗುತ್ತಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುತ್ತಿದೆ. (ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಬಹಿಷ್ಕಾರ)

Karnataka Second PUC Chemistry exam cancelled due to leakage of question paper

ನಿಷ್ಪಕ್ಷವಾದ ತನಿಖೆ ನಡೆಸುವ ಸಂಬಂಧ ಮಹಿಳಾ ಪದವಿಪೂರ್ವ ಕಾಲೇಜು, ಬಳ್ಳಾರಿ ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಮಾಲೂರು (ಕೋಲಾರ ಜಿಲ್ಲೆ) ಈ ಎರಡು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮತ್ತು ಸಹಮುಖ್ಯ ಅಧೀಕ್ಷಕರುಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಪಲ್ಲವಿ ಆಕೃತಿ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಮುಂದಿನ ಪರೀಕ್ಷೆಗಳನ್ನು ನಡೆಸಲು ಬದಲಿ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಇಲಾಖೆಯ ನಿರ್ದೇಶಕಿ ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka Second PUC Chemistry (New Syllabus) examination that was conducted on March 21, 2016 stands cancelled due to leakage of question paper. The date of re- examination will be communicated in due course - PUC Board.
Please Wait while comments are loading...