ರಾಜ್ಯದ 27 ಸಾವಿರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು
ಬೆಂಗಳೂರು, ಜೂನ್ 18: ಕೊರೊನಾ ವೈರಸ್ ಲಾಕ್‌ಡೌನ್‌ನಿಂದ ಮುಂದಕ್ಕೆ ಹೋಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ನಡೆಯಿತು. ಇಂಗ್ಲೀಷ್ ವಿಷಯದ ಪರೀಕ್ಷೆ ಬಾಕಿ ಉಳಿದುಕೊಂಡಿದ್ದು, ಇಂದಿಗೆ ಪರೀಕ್ಷೆ ಮುಗಿದಿದೆ.
Recommended Video
ಕೊರೊನಾ ಭೀತಿ ನಡುವೆಯೇ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಪರೀಕ್ಷೆ ಬರೆಯಲಾಗಿದೆ. ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿ ಮಾಡಲಾಗಿದೆ. ಎಲ್ಲ ಕ್ರಮಗಳನ್ನು ತೆಗೆದುಕೊಂಡರೂ ಕೆಲವೊಂದು ಕಡೆ ಎಡವಟ್ಟು ನಡೆದಿವೆ.
ಪರೀಕ್ಷೆ ಏನೋ ಮುಗಿದಿದೆ. ಆದರೆ, ಇನ್ನೊಂದು ಪ್ರಮುಖ ವಿಷಯ ಏನೆಂದರೆ, ಈ ಬಾರಿ ಪರೀಕ್ಷೆ ಸಾಕಷ್ಟು ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇಂದು ರಾಜ್ಯದಲ್ಲಿ 5,95,997 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಆದರೆ, ಈ ಪೈಕಿ ಬರೋಬ್ಬರಿ 27022 ಮಕ್ಕಳು ಪರೀಕ್ಷೆ ಬರೆದಿಲ್ಲ. ಈ ವಿದ್ಯಾರ್ಥಿಗಳು ಕೊರೊನಾ ಭಯದಿಂದಲೇ ಪರೀಕ್ಷೆಗೆ ಹಾಜರಾಗಿಲ್ಲ ಎನ್ನುವ ಪ್ರಶ್ನೆ ಎದುರಾಗಿದೆ.

27022 ಮಕ್ಕಳು ಪರೀಕ್ಷೆ ಬರೆದಿಲ್ಲ
ಇಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5,68,975 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಆದರೆ, ಪರೀಕ್ಷೆ ತೆಗೆದುಕೊಂಡವರ ಸಂಖ್ಯೆ 5,95,997 ಆಗಿದೆ. ಇವರಲ್ಲಿ 27022 ಮಕ್ಕಳು ಈ ಬಾರಿ ಪರೀಕ್ಷೆ ಬರೆದಿಲ್ಲ. ಪರೀಕ್ಷೆ ಬರೆದವರ ಪೈಕಿ ಅಂತರ ಜಿಲ್ಲೆಯಲ್ಲಿ 18,529 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 1,889 ಹೊರ ರಾಜ್ಯದ ವಿದ್ಯಾರ್ಥಿಗಳು ಸಹ ಪರೀಕ್ಷೆ ಬರೆದಿದ್ದಾರೆ.

ಕಲಬುರಗಿಯಲ್ಲಿ ಹೆಚ್ಚಿನ ಸಂಖ್ಯೆ
ಪರೀಕ್ಷೆ ಬರೆಯದ 27022 ಮಕ್ಕಳಲ್ಲಿ ಕಲಬುರಗಿ ಜಿಲ್ಲೆಯವರು ಹೆಚ್ಚಾಗಿದ್ದಾರೆ. ಇಲ್ಲಿನ 1750 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರೂ, ಇಂದಿನ ಪರೀಕ್ಷೆಯಲ್ಲಿ ಹಾಜರಾಗಿಲ್ಲ. ಕೊಡಗಿನಲ್ಲಿ ಮಕ್ಕಳ ಹಾಜರಾತಿಯ ಶೇಕಡ ಪ್ರಮಾಣ ಎಲ್ಲ ಜಿಲ್ಲೆಗಳಿಂತ ಹೆಚ್ಚಿದೆ. ಆದರೂ ಕೂಡ ಅಲ್ಲಿ 140 ವಿದ್ಯಾರ್ಥಿಗಳು ಪರೀಕ್ಷೆ ಬರೆದಿಲ್ಲ. ಈ ಅಂಕಿಗಳ ಬಗ್ಗೆ ಪಿಯುಸಿ ನಿರ್ದೇಶಕ ಡಾ.ರೇಜು ಮಾಹಿತಿ ನೀಡಿದ್ದಾರೆ.

12 ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು
ಕರ್ನಾಟಕದ 12 ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿಲ್ಲ. ಕಲಬುರಗಿ 1750, ಬೆಂಗಳೂರು ದಕ್ಷಿಣ 1675, ಬೆಂಗಳೂರು ಉತ್ತರ 1646, ತುಮಕೂರು 1457, ಮೈಸೂರು 1401, ಬಿಜಾಪುರ 1476, ಚಿಕ್ಕೋಡಿ 1359, ರಾಯಚೂರು 1347, ದಾವಣಗೆರೆ 1292, ಬಳ್ಳಾರಿ 1261, ಬೆಳಗಾವಿ 1044, ಚಿತ್ರದುರ್ಗ 1040 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ.

ಉಳಿದ ಜಿಲ್ಲೆಗಳಲ್ಲಿ
ಉಳಿದ ಜಿಲ್ಲೆಗಳಾದ ಕೋಲಾರ 730, ಮಂಡ್ಯ 682, ಯಾದಗಿರಿ 568, ಶಿವಮೊಗ್ಗ 538, ಹಾಸನ 535, ದಕ್ಷಿಣ ಕನ್ನಡ 466, ಕೊಪ್ಪಳ 463, ಚಿಕ್ಕಬಳ್ಳಾಪುರ 442, ಉತ್ತರ ಕನ್ನಡ 435, ಚಾಮರಾಜನಗರ 268, ಉಡುಪಿ 163, ಕೊಡಗು 140 ವಿದ್ಯಾರ್ಥಿಗಳು ಇಂದು ನಡೆದ ಪರೀಕ್ಷೆಯಲ್ಲಿ ಹಾಜರಾಗಿಲ್ಲ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications