ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ನಿನ್ನೆ ಅಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆ -1ರ ಫಲಿತಾಂಶ ಹೊರಬಿದ್ದಿದೆ. ಪರೀಕ್ಷೆ-1 ರಲ್ಲಿ ವಿಫಲರಾದವರು, ಉತ್ತೀರ್ಣರಾಗಲು ಮತ್ತು ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಈ ಎರಡನೇ ಅವಕಾಶವಾದ ಪರೀಕ್ಷೆ-2ರನ್ನು ಬರೆಯಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಧಿಕೃತ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಿದೆ. ಪರೀಕ್ಷೆ-2 ಏಪ್ರಿಲ್ 30 ರಿಂದ ಆರಂಭವಾಗಿ ಮೇ 13ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಇದನ್ನು ಸಮರ್ಥವಾಗಿ ಬಳಸಿಕೊಳ್ಳಬಹುದಾಗಿದೆ.

ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು (KSEAB) 2026ರ ದ್ವಿತೀಯ ಪಿಯುಸಿ ಪರೀಕ್ಷೆ - 2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಪ್ರಮುಖ ವಿಷಯಗಳ ಪರೀಕ್ಷೆಗಳು ಬೆಳಗಿನ ಪಾಳಿಯಲ್ಲಿ ಅಂದರೆ 10-00 ಗಂಟೆಯಿಂದ ಮಧ್ಯಾಹ್ನ 1-00 ಗಂಟೆಯವರೆಗೆ, ಒಟ್ಟು 3 ಗಂಟೆಗಳ ಕಾಲ ನಡೆಯಲಿವೆ.

2nd PUC Exam 2

ವಿಷಯವಾರು ದಿನಾಂಕಗಳ ಜೊತೆಗೆ ವೇಳಾಪಟ್ಟಿಯ ಪೂರ್ಣ ವಿವರ ಹೀಗಿದೆ

ಏಪ್ರಿಲ್ 30, 2026 (ಗುರುವಾರ): ಕನ್ನಡ ಮತ್ತು ಅರೇಬಿಕ್ ಭಾಷಾ ವಿಷಯಗಳೊಂದಿಗೆ ಪರೀಕ್ಷೆಗಳು ಶುರುವಾಗಲಿವೆ.

ಮೇ 02, 2026 (ಶನಿವಾರ): ಐಚ್ಛಿಕ ಕನ್ನಡ, ತರ್ಕಶಾಸ್ತ್ರ (Logic), ಲೆಕ್ಕಶಾಸ್ತ್ರ (Accountancy) ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆ ಜರುಗಲಿದೆ.

ಮೇ 04, 2026 (ಸೋಮವಾರ): ಇಂಗ್ಲೀಷ್ ವಿಷಯದ ಪರೀಕ್ಷೆ ನಡೆಯಲಿದೆ.

ಮೇ 05, 2026 (ಮಂಗಳವಾರ): ವ್ಯವಹಾರ ಅಧ್ಯಯನ, ಭೌತಶಾಸ್ತ್ರ ಮತ್ತು ಶಿಕ್ಷಣಶಾಸ್ತ್ರ ವಿಷಯಗಳಿಗೆ ಪರೀಕ್ಷೆ ನಿಗದಿಯಾಗಿದೆ.

ಮೇ 06, 2026 (ಬುಧವಾರ): ಅರ್ಥಶಾಸ್ತ್ರ ಹಾಗೂ ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಮೇ 07, 2026 (ಗುರುವಾರ): ಇತಿಹಾಸ, ಗಣಿತ ಮತ್ತು ಗೃಹವಿಜ್ಞಾನ ವಿಷಯಗಳ ಪರೀಕ್ಷೆ ಇರಲಿದೆ.

ಮೇ 08, 2026 (ಶುಕ್ರವಾರ): ರಾಜ್ಯಶಾಸ್ತ್ರ, ವಿದ್ಯುನ್ಮಾನಶಾಸ್ತ್ರ (ಎಲೆಕ್ಟ್ರಾನಿಕ್ಸ್) ಮತ್ತು ಗಣಕ ವಿಜ್ಞಾನ ಪರೀಕ್ಷೆಗಳು ಜರುಗಲಿವೆ.

ಮೇ 09, 2026 (ಶನಿವಾರ): ಹಿಂದಿ ಭಾಷಾ ಪರೀಕ್ಷೆ ನಡೆಯಲಿದೆ.

ಮೇ 11, 2026 (ಸೋಮವಾರ): ಸಮಾಜಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಮೇ 12, 2026 (ಮಂಗಳವಾರ): ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೂಗರ್ಭ ಶಾಸ್ತ್ರ ಮತ್ತು ಮೂಲ ಗಣಿತ ಪರೀಕ್ಷೆಗಳು ನಿಗದಿಯಾಗಿವೆ.

ಮೇ 13, 2026 (ಬುಧವಾರ): ಬೆಳಗಿನ ಪಾಳಿಯಲ್ಲಿ (10.00 AM ದಿಂದ 1.00 PM) ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮತ್ತು ಹಿಂದೂಸ್ತಾನಿ ಸಂಗೀತ ಪರೀಕ್ಷೆಗಳು ನಡೆಯಲಿವೆ. ಅದೇ ದಿನ ಮಧ್ಯಾಹ್ನ 2.00 ಗಂಟೆಯಿಂದ 4.15ರವರೆಗೆ ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್‌ ವೆಲ್‌ನೆಸ್, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ ಮುಂತಾದ ವೃತ್ತಿಪರ ವಿಷಯಗಳ ಪರೀಕ್ಷೆಗಳು ಜರುಗಲಿವೆ.

ವೇಳಾಪಟ್ಟಿಯ ಪ್ರಕಾರ ಮೇ 1 (ಶುಕ್ರವಾರ), ಮೇ 3 (ಭಾನುವಾರ) ಮತ್ತು ಮೇ 10 (ಭಾನುವಾರ) ರಂದು ಸಾರ್ವಜನಿಕ ರಜಾ ದಿನಗಳಾಗಿರುವುದರಿಂದ ಯಾವುದೇ ಪರೀಕ್ಷೆಗಳು ಇರುವುದಿಲ್ಲ.

ವಿದ್ಯಾರ್ಥಿಗಳು ಈ ವೇಳಾಪಟ್ಟಿಯನ್ನು ಸರಿಯಾಗಿ ಗಮನದಲ್ಲಿಟ್ಟುಕೊಂಡು, ಯಾವುದೇ ಆತಂಕವಿಲ್ಲದೆ ತಮ್ಮ ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ಮೊದಲನೇ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ನಿರಾಶರಾಗದೆ, ಮಂಡಳಿಯು ನೀಡಿರುವ ಈ ಎರಡನೇ ಅವಕಾಶದಲ್ಲಿ ಹೆಚ್ಚು ಅಂಕಗಳಿಸಿ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಲು ಶಿಕ್ಷಣ ತಜ್ಞರು ಸಲಹೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+