ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ದ್ವಿತೀಯ ಪಿಯುಸಿ 2023ರ ತಾತ್ಕಾಲಿಕ ವೇಳಾಪಟ್ಟಿ

|
Google Oneindia Kannada News

ಬೆಂಗಳೂರು, ಅ.22: ಕರ್ನಾಟಕ ರಾಜ್ಯದ 2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ತಾತ್ಕಾಲಿಕ ವೇಳಾಪಟ್ಟಿಯ ತಿಳಿಸಿರುವಂತೆ ಪರೀಕ್ಷೆಗಳು ಮಾರ್ಚ್ 10 ರಿಂದ ಮಾರ್ಚ್ 29, 2023ರ ವರೆಗೆ ನಿಗದಿಯಾಗಿವೆ.

''2ನೇ ಪಿಯು ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಬಗ್ಗೆ ಮುಂದಿನ ಪರಿಷ್ಕರಣೆಯನ್ನು ಅಧಿಕೃತ ವೆಬ್ ತಾಣದಲ್ಲಿ ಇಲಾಖೆ ಪ್ರಕಟಿಸಲಿದೆ'' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ವೇಳಾಪಟ್ಟಿಯಂತ್ ಪರೀಕ್ಷೆಗಳು ಮಾರ್ಚ್ 10 ರಿಂದ 29,2023ರ ವರೆಗೆ ಬೆಳಗ್ಗೆ 10:15 ರಿಂದ ಮಧ್ಯಾಹ್ನ 1:30ರ ವರೆಗೆ ನಡೆಯಲಿದೆ.

ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2023ರ ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ.

ಮಾರ್ಚ್ 10: ಕನ್ನಡ, ಅರೇಬಿಕ್
ಮಾರ್ಚ್ 11: ಗಣಿತ, ಶಿಕ್ಷಣ
ಮಾರ್ಚ್ 13: ಅರ್ಥಶಾಸ್ತ್ರ
ಮಾರ್ಚ್ 14: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನೋವಿಜ್ಞಾನ, ರಸಾಯನಶಾಸ್ತ್ರ, ಮೂಲ ಗಣಿತ

Karnataka 2nd PUC Exam 2023 Tentative Time Table Released

ಮಾರ್ಚ್ 15: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 16: ಲಾಜಿಕ್, ಬಿಸಿನೆಸ್ ಸ್ಟಡೀಸ್
ಮಾರ್ಚ್ 17: ಮಾಹಿತಿ ಮತ್ತು ತಂತ್ರಜ್ಞಾನ, ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಸೌಂದರ್ಯ ಮತ್ತು ಕ್ಷೇಮ
ಮಾರ್ಚ್ 18: ಭೂಗೋಳ, ಜೀವಶಾಸ್ತ್ರ
ಮಾರ್ಚ್ 20: ಇತಿಹಾಸ, ಭೌತಶಾಸ್ತ್ರ
ಮಾರ್ಚ್ 21: ಹಿಂದಿ
ಮಾರ್ಚ್ 23: ಇಂಗ್ಲಿಷ್
ಮಾರ್ಚ್ 25: ರಾಜ್ಯಶಾಸ್ತ್ರ, ಅಂಕಿಅಂಶ
ಮಾರ್ಚ್ 27: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂವಿಜ್ಞಾನ, ಗೃಹ ವಿಜ್ಞಾನ
ಮಾರ್ಚ್ 29: ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್.
Karnataka 2nd PUC Exam 2023 Tentative Time Table Released

ಹಿಜಾಬ್ ಗೊಂದಲದ ನಡುವೆ ಕಳೆದ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದರು. 6,00,519 ಫ್ರಷರ್ ವಿದ್ಯಾರ್ಥಿಗಳಾಗಿದ್ದು , 61,808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್‌ 18 ರಂದು ಪ್ರಕಟಿಸಲಾಗಿತ್ತು.

ಎಲ್ಲ ವಿದ್ಯಾರ್ಥಿಗಳು ಹಾಗೂ ಪೋಷಕರು ಇಲಾಖೆಯ ವೆಬ್‌ಸೈಟ್‌ನಲ್ಲಿ ಹಾಕಿರುವ ಈ ವೇಳಾಪಟ್ಟಿಯನ್ನು ನೋಡಬಹುದಾಗಿದೆ. ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಈ ಕುರಿತು ಸೂಚನೆ ನೀಡಲಾಗಿದ್ದು, ದಿನಾಂಕ ಪರಿಷ್ಕರಣೆ ಆಗಿರುವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

English summary
Karnataka 2nd PUC Exam 2023 Tentative Time Table Released by Primary and Higher education minister BC Nagesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X