PUC: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಶುರು: ನಕಲಿ ಪ್ರಶ್ನೆ ಪತ್ರಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ ಮಂಡಳಿ

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ (ಫೆಬ್ರವರಿ 28) ವಿದ್ಯಾರ್ಥಿಗಳ ಭವಿಷ್ಯದ ನಿರ್ಧರಿಸುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಶುರುವಾಗಲಿದೆ. ಮಾರ್ಚ್ 17ರವರೆಗೆ ನಡೆಯಲಿರುವ ಈ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಈ ಬಾರಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಿಂದ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ರಾಜ್ಯಾದ್ಯಂತ 1,217 ಸುಸಜ್ಜಿತ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷಾ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯಲು ಎಲ್ಲಾ ಕೇಂದ್ರಗಳಲ್ಲೂ ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ.

Karnataka 2nd PUC Exam

ಈ ಬಾರಿಯ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು (Hall Ticket) ತೋರಿಸಿ ಕೆಎಸ್ಆರ್‌ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಬಸ್‌ಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಖಾಸಗಿ ಬಸ್‌ಗಳಲ್ಲೂ ಈ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಬೇಕಾಗಿದ್ದ ಕನಿಷ್ಠ ಅಂಕಗಳನ್ನು (Passing Marks) ಶೇ. 35 ರಿಂದ ಶೇ. 30ಕ್ಕೆ ಇಳಿಕೆ ಮಾಡಲಾಗಿದೆ. ಇದು ವಿದ್ಯಾರ್ಥಿಗಳಲ್ಲಿ ಇದ್ದ ಪರೀಕ್ಷಾ ಭಯವನ್ನು ಕಡಿಮೆ ಮಾಡಲು ಸಹಕಾರಿಯಾಗಲಿದೆ.

ನಕಲಿ ಪ್ರಶ್ನೆಪತ್ರಿಕೆ ವದಂತಿ: ಬೋರ್ಡ್ ಎಚ್ಚರಿಕೆ

ಪರೀಕ್ಷೆ ಸಮೀಪಿಸುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ನಕಲಿ ಪ್ರಶ್ನೆಪತ್ರಿಕೆಗಳನ್ನು ಹರಿಬಿಟ್ಟು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಸ್‌ಇಎಬಿ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ, "ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ, ಅಂತರ್ಜಾಲದಲ್ಲಿ ವೈರಲ್ ಆಗುತ್ತಿರುವುದು ಸಂಪೂರ್ಣ ನಕಲಿ. ಇಂತಹ ವದಂತಿಗಳಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಕಿವಿಗೊಡಬಾರದು. ಇಂತಹವರ ಸೈಬರ್ ಪೊಲೀಸರ ಮೂಲಕ ನಿಗಾ ಇಡಲಾಗಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಸಿದ್ದಾರೆ.

ವಿದ್ಯಾರ್ಥಿಗಳಿಗೆ ' ಕೊನೆಯ ಕ್ಷಣದ ಮಾಹಿತಿ'

ಹಾಲ್ ಟಿಕೆಟ್ ಕಡ್ಡಾಯ: ಪರೀಕ್ಷೆಗೆ ಹೊರಡುವ ಮುನ್ನ ಪ್ರವೇಶ ಪತ್ರ, ಶಾಲಾ ಐಡಿ ಕಾರ್ಡ್ ಹಾಗೂ ಅಗತ್ಯ ಪೆನ್, ಪೆನ್ಸಿಲ್ ಇಟ್ಟುಕೊಂಡಿರುವುದನ್ನು ಎರಡು ಬಾರಿ ಪರಿಶೀಲಿಸಿಕೊಳ್ಳಿ.

ಸಮಯ ಪಾಲನೆ: ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ಪರೀಕ್ಷೆ ನಡೆಯಲಿದೆ. ಟ್ರಾಫಿಕ್ ದಟ್ಟಣೆ ಇರಬಹುದು ಹಾಗಾಗಿ ಕನಿಷ್ಠ 1 ಗಂಟೆ ಮುಂಚಿತವಾಗಿ (ಬೆಳಿಗ್ಗೆ 9:15ರ ಒಳಗೆ) ಪರೀಕ್ಷಾ ಕೇಂದ್ರ ತಲುಪಿ.

ಎಲೆಕ್ಟ್ರಾನಿಕ್ ವಸ್ತುಗಳಿಗೆ ನಿರ್ಬಂಧ: ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಬ್ಲೂಟೂತ್, ಸೈಂಟಿಫೀಕ್‌ ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದ ಒಳಗೆ ತೆಗೆದುಕೊಂಡು ಹೋಗುವಂತಿಲ್ಲ.

ಟೆನ್ಶನ್ ಬೇಡ, ರಿವಿಷನ್ ಮಾಡಿ: ಕೊನೆಯ ಗಳಿಗೆಯಲ್ಲಿ ಹೊಸದಾಗಿ ಏನನ್ನೂ ಓದಲು ಹೋಗದೆ, ಈಗಾಗಲೇ ಓದಿರುವ ವಿಷಯಗಳನ್ನೇ ನಿಧಾನವಾಗಿ, ಶಾಂತಚಿತ್ತರಾಗಿ ಪುನರಾವರ್ತನೆ (Revision) ಮಾಡಿ. ಉತ್ತಮ ನಿದ್ರೆ ಹಾಗೂ ಆರೋಗ್ಯಕರ ಉಪಹಾರ ಸೇವಿಸಿ ಪರೀಕ್ಷೆಗೆ ಹಾಜರಾಗಿ.

ಆರಂಭಿಕ ದಿನಗಳ ಪರೀಕ್ಷಾ ವೇಳಾಪಟ್ಟಿ:

ಫೆಬ್ರವರಿ 28: ಕನ್ನಡ, ಅರೇಬಿಕ್

ಮಾರ್ಚ್ 2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ

ಮಾರ್ಚ್ 3: ಇಂಗ್ಲಿಷ್

ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 5: ಇತಿಹಾಸ

ಮಾರ್ಚ್ 6: ಭೌತಶಾಸ್ತ್ರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+