PUC: ಪಿಯು ಬೋರ್ಡ್ ಹಾಗೂ ಕಾಲೇಜು ಆಡಳಿತ ಮಂಡಳಿ ಎಡವಟ್ಟು: ಪರೀಕ್ಷಾ ಕೇಂದ್ರ ಹುಡುಕಲು ಪರದಾಡಿದ ವಿದ್ಯಾರ್ಥಿಗಳು
ಯಾದಗಿರಿ: ರಾಜ್ಯಾದ್ಯಂತ ಇಂದಿನಿಂದ (ಫೆಬ್ರವರಿ 28) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಬಿಗಿ ಭದ್ರತೆಯ ನಡುವೆ ಆರಂಭವಾಗಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ನೇತೃತ್ವದಲ್ಲಿ 1,217 ಕೇಂದ್ರಗಳಲ್ಲಿ ಒಟ್ಟು 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಸಿಸಿಟಿವಿ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆದರೆ, ಇಷ್ಟೆಲ್ಲಾ ಸಿದ್ಧತೆಗಳ ನಡುವೆಯೂ ಪಿಯು ಬೋರ್ಡ್ ಹಾಗೂ ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದಾಗಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ತೀವ್ರ ಆತಂಕಕ್ಕೀಡಾದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ನಗರದ ಸಬಾ ಪಿಯು ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಲಾಗಿತ್ತು. ಈ ಕೇಂದ್ರಕ್ಕೆ ಸುತ್ತಮುತ್ತಲಿನ ವಿವಿಧ ಹಳ್ಳಿಗಳಿಂದ ಹಾಗೂ ಬೇರೆ ಬೇರೆ ಊರುಗಳಿಂದ ನೂರಾರು ವಿದ್ಯಾರ್ಥಿಗಳು ಬೆಳಗ್ಗೆಯೇ ಆಗಮಿಸಿದ್ದರು. ಆದರೆ, ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಪ್ರವೇಶ ಪತ್ರದಲ್ಲಿ (Hall Ticket) ಪರೀಕ್ಷಾ ಕೇಂದ್ರದ ವಿಳಾಸವನ್ನು ಸಂಪೂರ್ಣವಾಗಿ ತಪ್ಪಾಗಿ ನಮೂದಿಸಲಾಗಿತ್ತು.

ಪ್ರವೇಶ ಪತ್ರದಲ್ಲಿ ಸಬಾ ಪಿಯು ಕಾಲೇಜಿನ ವಿಳಾಸವನ್ನು 'ಗಂಜ್ ರೋಡ್' (Gunj Road) ಎಂದು ಮುದ್ರಿಸಲಾಗಿತ್ತು. ಆದರೆ, ವಾಸ್ತವವಾಗಿ ಈ ಕಾಲೇಜು ಇರುವುದು ನಗರದ 'ಲುಂಬಿನಿ ಪಾರ್ಕ್' (Lumbini Park) ಬಳಿ. ಹಾಲ್ ಟಿಕೆಟ್ನಲ್ಲಿರುವ ವಿಳಾಸವನ್ನೇ ನಂಬಿಕೊಂಡು ಬಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಗಂಜ್ ರೋಡ್ಗೆ ತೆರಳಿ ಕಾಲೇಜಿಗಾಗಿ ಹುಡುಕಾಟ ನಡೆಸಿದ್ದಾರೆ. ಅಲ್ಲಿ ಯಾವುದೇ ಕಾಲೇಜು ಇಲ್ಲದಿರುವುದನ್ನು ಕಂಡು ವಿದ್ಯಾರ್ಥಿಗಳು ಅಕ್ಷರಶಃ ಕಂಗಾಲಾಗಿದ್ದಾರೆ.
ಗಂಟೆಗಳ ಕಾಲ ರಸ್ತೆಯಲ್ಲೇ ಪರದಾಡಿದ ವಿದ್ಯಾರ್ಥಿಗಳು
ಪರೀಕ್ಷೆ ಆರಂಭವಾಗಲು ಸಮಯ ಹತ್ತಿರವಾಗುತ್ತಿದ್ದಂತೆ, ಪರೀಕ್ಷಾ ಕೇಂದ್ರ ಸಿಗದೆ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಪರೀಕ್ಷೆ ತಪ್ಪಿಹೋಗುವ ಭಯದಲ್ಲಿ ಕೆಲ ವಿದ್ಯಾರ್ಥಿಗಳು ಕಣ್ಣೀರು ಹಾಕಿದ ಪ್ರಸಂಗವೂ ನಡೆಯಿತು. ಗಂಟೆಗಳ ಕಾಲ ಪರೀಕ್ಷಾ ಕೇಂದ್ರಕ್ಕಾಗಿ ಹುಡುಕಾಟ ನಡೆಸಿದ್ದಾರೆ. ವಿಳಾಸದ ಬಗ್ಗೆ ಅಲ್ಲಿನ ಸ್ಥಳೀಯ ಅಂಗಡಿಯವರನ್ನು ಹಾಗೂ ಸಾರ್ವಜನಿಕರನ್ನು ವಿಚಾರಿಸಿದಾಗ, ಸಬಾ ಕಾಲೇಜು ಲುಂಬಿನಿ ಪಾರ್ಕ್ ಬಳಿ ಇರುವುದು ತಿಳಿದುಬಂದಿದೆ.
ಕೊನೆಗೆ ಸ್ಥಳೀಯರ ಸಹಾಯದಿಂದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಲುಂಬಿನಿ ಪಾರ್ಕ್ ಬಳಿ ಇರುವ ಸಬಾ ಪಿಯು ಕಾಲೇಜಿಗೆ ಬಂದು ತಲುಪಿದ್ದಾರೆ.
ಆಡಳಿತ ಮಂಡಳಿ ವಿರುದ್ಧ ಆಕ್ರೋಶ
ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಇಂತಹ ಮಹತ್ವದ ಪರೀಕ್ಷೆಯ ವಿಚಾರದಲ್ಲಿ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಆಡಳಿತ ಮಂಡಳಿ ಇಷ್ಟು ಬೇಜವಾಬ್ದಾರಿಯಿಂದ ವರ್ತಿಸಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. "ಮಕ್ಕಳು ವರ್ಷವಿಡೀ ಕಷ್ಟಪಟ್ಟು ಓದಿರುತ್ತಾರೆ. ಪರೀಕ್ಷೆಯ ದಿನ ಬೆಳಗ್ಗೆ ಅವರಿಗೆ ಮಾನಸಿಕ ನೆಮ್ಮದಿ ಇರಬೇಕು. ಆದರೆ, ಇಂತಹ ತಪ್ಪುಗಳಿಂದ ಮಕ್ಕಳು ಪರೀಕ್ಷೆ ಬರೆಯುವ ಮುನ್ನವೇ ಮಾನಸಿಕವಾಗಿ ಕುಗ್ಗಿಹೋಗುತ್ತಾರೆ. ಪ್ರವೇಶ ಪತ್ರಗಳನ್ನು ಮುದ್ರಿಸುವ ಮುನ್ನ ವಿಳಾಸವನ್ನು ಸರಿಯಾಗಿ ಪರಿಶೀಲಿಸುವ ಕನಿಷ್ಠ ಜವಾಬ್ದಾರಿ ಇಲಾಖೆಗೆ ಇಲ್ಲವೇ?" ಎಂದು ಪೋಷಕರು ಪ್ರಶ್ನಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications