ಏಪ್ರಿಲ್ 15ರಂದೇ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು, ಏಪ್ರಿಲ್ 12: ದ್ವಿತೀಯ ಪಿಯು ಫಲಿತಾಂಶವು ಸೋಮವಾರವೇ (ಏಪ್ರಿಲ್ 15) ಪ್ರಕಟವಾಗಲಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸೋಮವಾರ ಬೆಳಿಗ್ಗೆ 11 ಗಂಟೆಗೆ ಪವಿಪೂರ್ವ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಲಿದೆ. ಮಂಗಳವಾರ ಎಲ್ಲ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಮಾರ್ಚ್ 1ರಿಂದ 17ನೇ ತಾರೀಕಿನವರೆಗೆ ಪಿಯು ಪರೀಕ್ಷೆಗಳು ರಾಜ್ಯದಾದ್ಯಂತ ನಡೆದಿದ್ದವು. ಏಪ್ರಿಲ್ 29ರಿಂದ ಮೇ 1ರವರೆಗೆ ಸಿಇಟಿ ಪರೀಕ್ಷೆಗಳು ನಡೆಯಲಿವೆ. ಪಿಯುನಲ್ಲಿ ವಿಜ್ಞಾನ ವಿಷಯದಲ್ಲಿ ಓದಿರುವ ಬಹುತೇಕ ವಿದ್ಯಾರ್ಥಿಗಳು ಸಿಇಟಿ ಬರೆಯವುದರಿಂದ ವಿದ್ಯಾರ್ಥಿಗಳ ಮೇಲೆ ಒತ್ತಡ ಕಡಿಮೆ ಮಾಡುವ ಸಲುವಾಗಿ ಪರೀಕ್ಷೆ ಆರಂಭಕ್ಕೂ ಮುನ್ನವೇ ಫಲಿತಾಂಶ ಪ್ರಕಟಿಸಲು ಉದ್ದೇಶಿಸಲಾಗಿದೆ.

 karnataka 2nd puc result 2019 to be announced on April 15

ಮೌಲ್ಯಮಾಪನದ ಬಳಿಕ ಅಂಕಗಳನ್ನು ಆನ್‌ಲೈನ್‌ ಮೂಲಕ ಸರ್ವರ್‌ಗೆ ಸೇರಿಸುವ ವ್ಯವಸ್ಥೆಯಿಂದಾಗಿ ಈ ಬಾರಿ ಫಲಿತಾಂಶವನ್ನು ಬೇಗನೆ ಪ್ರಕಟಿಸಲು ಸಾಧ್ಯವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ. ಶಿಖಾ ತಿಳಿಸಿದ್ದರು. ಇದೇ ಮೊದಲ ಬಾರಿಗೆ ಸಿಇಟಿ ಆರಂಭಕ್ಕೂ ಮುನ್ನವೇ ಪಿಯು ಫಲಿತಾಂಶ ಹೊರಬೀಳುತ್ತಿದೆ.

ಪ್ರಸಕ್ತ ಸಾಲಿನಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ಪಿಯು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ 1.94 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಈ ಮೊದಲು ಏಪ್ರಿಲ್ 17ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದವು. ಆದರೆ, ಇದನ್ನು ಶಿಖಾ ನಿರಾಕರಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+