ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ 2ನೇ ಪಿಯು ಫಲಿತಾಂಶ: 88 ಕಾಲೇಜುಗಳಲ್ಲಿ ಶೂನ್ಯ ಸಾಧನೆ

|
Google Oneindia Kannada News

ಬೆಂಗಳೂರು, ಜುಲೈ 14: ಕೊರೊನಾವೈರಸ್ ಸೋಂಕಿನಿಂದ ವಿಳಂಬವಾಗಿದ್ದ ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶವು ಮಂಗಳವಾರ ಮಧ್ಯಾಹ್ನ ಪ್ರಕಟವಾಗಿದೆ.

ಮಲ್ಲೇಶ್ವರದಲ್ಲಿರುವ ಪಿಯು ಬೋರ್ಡ್ ನಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶವನ್ನು ಪ್ರಕಟಿಸಿದರು. ರಾಜ್ಯದಲ್ಲಿ ಒಟ್ಟಾರೆ, ಶೇ.69.20 ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ ಶೇ. 76.02 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ,65.52 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾವಿಭಾಗದಲ್ಲಿ ಶೇ. 41.27 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ವಿಜಯಪುರಕ್ಕೆ ಕೊನೆ ಸ್ಥಾನದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ವಿಜಯಪುರಕ್ಕೆ ಕೊನೆ ಸ್ಥಾನ

ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಈ ಎರಡು ಜಿಲ್ಲೆಗಳಲ್ಲಿ ಶೇ. 90.75 ರಷ್ಟು ಫಲಿತಾಂಶ ಬಂದಿದೆ. ವಿಜಯಪುರ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.

Karnataka 2nd puc result 2020: Total of 88 PU colleges have secured zero percent passes

ಫಲಿತಾಂಶದ ಮುಖ್ಯಾಂಶ:
92 ಕಾಲೇಜುಗಳು ಶೇ 100 ಫಲಿತಾಂಶ

88 ಕಾಲೇಜುಗಳು ಶೂನ್ಯ ಫಲಿತಾಂಶ

ಶ್ಯೂನ ಫಲಿತಾಂಶ ಬಂದ ಕಾಲೇಜ್ ಗಳ ಮೇಲೆ ಕ್ರಮ.

3 ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ 100 ಫಲಿತಾಂಶ

1 ಅನುದಾನಿತ ಪದವಿ ಪೂರ್ವ ಕಾಲೇಜು ಶೇ 100 ಫಲಿತಾಂಶ

88 ಅನುದಾನ ರಹಿತ ಪದವಿ ಪೂರ್ವ ಕಾಲೇಜು ಶೇ 100 ಫಲಿತಾಂಶ

ವಿದ್ಯಾರ್ಥಿಗಳು ತಮ್ಮ ಫಲಿತಾಂಶ ತಿಳಿಯಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ಪಿಯು ವೆಬ್ ಸೈಟ್
www.pue.kar.nic.in, http://www.karresults.nic.in
ನಲ್ಲಿ ಮಧ್ಯಾಹ್ನ 12ಗಂಟೆ ನಂತರ ಫಲಿತಾಂಶ ಲಭ್ಯವಿರಲಿದೆ.

ಮಾರ್ಚ್ 4 ರಿಂದ 21 ರವರೆಗೆ ಹಾಗೂ ಕೊನೆಯ ಇಂಗ್ಲೀಷ್ ಪರೀಕ್ಷೆಯು ಜೂನ್ 18 ರಂದು ಪರೀಕ್ಷೆಗಳು ನಡೆದಿದ್ದವು. 1016 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಸುಮಾರು 70 ಮೌಲ್ಯಮಾಪನ ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಲಾಗಿದೆ. ಒಟ್ಟು 6,75,277 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ ಹೊಸಬರು 5,56267 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 3,84,947 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪುನಾರಾವರ್ತಿತ 91,025 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 25,602 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

English summary
Karnataka 2nd puc result 2020: Total of 88 PU colleges have secured zero percent passes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X