ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉತ್ತೀರ್ಣರಾದವರು, ಅನುತ್ತೀರ್ಣರಾದವರೆಷ್ಟು?

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 20: ರಾಜ್ಯ ದ್ವಿತೀಯು ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಖಾಸಗಿ ವಿದ್ಯಾರ್ಥಿಗಳು, ಫಲಿತಾಂಶ ತಿರಸ್ಕರಿಸಿದ್ದ ವಿದ್ಯಾರ್ಥಿಗಳು ಹಾಗೂ ಪುನರಾವರ್ತಿ ಅಭ್ಯರ್ಥಿಗಳ ಫಲಿತಾಂಶ ಹೊರ ಬಿದ್ದಿದೆ.

ಒಟ್ಟು 18,414 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಫ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ರಾಜ್ಯದ 187 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಮಾಡಲಾಗಿತ್ತು.

ಇಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶ ಪ್ರಕಟಿಸಿದ್ದಾರೆ. ಅಭ್ಯರ್ಥಿಗಳು http://karresults.nic.in ಲಿಂಕ್ ಮೂಲಕ ಫಲಿತಾಂಶ ನೋಡಬಹುದು.
ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು 72 ಗಂಟೆಗಳ ಒಳಗಿನ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ತರಬೇಕು ಎಂದು ಹೇಳಲಾಗಿತ್ತು.

 Karnataka 2nd PUC Result 2021 Declared; Here is How to Check

ಕೇರಳದ ಗಡಿ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಕೂಡ ಆರ್ಟಿಪಿಸಿಆರ್ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿತ್ತು.. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೇ ಪರೀಕ್ಷೆ ಬರೆಯಬಹುದು. ಪರೀಕ್ಷೆ ಕೇಂದ್ರದ ಆಚೆ ಎಲ್ಲರಿಗೂ ಆರೋಗ್ಯ ತಪಾಸಣೆ ಇರಲಿದೆ ಎಂದು ಪಿಯು ಬೋರ್ಡ್ ತಿಳಿಸಿತ್ತು.ಇಂದು ಇದರ ಫಲಿತಾಂಶ ಹೊರ ಬಿದ್ದಿದೆ.

ವಿಜ್ಞಾನ ವಿಭಾಗದಲ್ಲಿ 600ಕ್ಕೆ 573 ಅತಿ ಹೆಚ್ಚು ಅಂಕ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ 600 ಅಂಕಕ್ಕೆ 592 ಅತಿ ಹೆಚ್ಚು ಅಂಕ ಪಡೆದಿದ್ದರೆ, ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅತಿ ಹೆಚ್ಚು ಅಂಕ ಗಳಿಸಿದ್ದಾರೆ.
18,414 ವಿದ್ಯಾರ್ಥಿಗಳ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. 556 ಪ್ರೆಶರ್ಸ್, 183 ರಿಪೀಟರ್ಸ್ ಪಾಸ್ ಆಗಿದ್ದಾರೆ. 17,470 ಖಾಸಗಿ ವಿದ್ಯಾರ್ಥಿಗಳ ಪೈಕಿ 4,768 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ ಪ್ರಥಮ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿಯಲ್ಲಿ ಪಡೆದ ಅಂಕ ಆಧರಿಸಿಫಲಿತಾಂಶ ನೀಡಲಾಗಿತ್ತು, ಆದರೆ, ಕೆಲ ವಿದ್ಯಾರ್ಥಿಗಳು ಆ ಫಲಿತಾಂಶ ತಿರಸ್ಕರಿಸಿ ಪರೀಕ್ಷೆ ಬರೆದಿದ್ದರು.

ಇಂದು 2020-21ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. ಆಗಸ್ಟ್ 28, 29, 30ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಸಿಇಟಿಗೆ 2,01,834 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. 1.89 ಲಕ್ಷ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ.ಕ್ಷೆ, 1.93 ಲಕ್ಷ ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆ ಬರೆದಿದ್ದಾರೆ.

Recommended Video

ವಿರಾಟ್ ನಂತರ ಈ ಮೂವರಲ್ಲಿ ಯಾರಾಗ್ತಾರೆ RCB ನಾಯಕ? | Oneindia kannada

ಇಂದು ಮಧ್ಯಾಹ್ನ ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಅಶ್ವತ್ಥ್ ನಾರಾಯಣ ಸುದ್ದಿಗೋಷ್ಠಿ ನಡೆಸುತ್ತಾರೆ. ಸುದ್ದಿಗೋಷ್ಠಿ ಬಳಿಕ ಸಿಇಟಿ ಫಲಿತಾಂಶ ಪ್ರಕಟವಾಗುತ್ತದೆ. kea.kar.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ.

English summary
Karnataka 2nd PUC Result 2021 Declared, Minister BC Nagesh Announced Second Pu Result.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X