ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

|
Google Oneindia Kannada News

ಬೆಂಗಳೂರು, ಜುಲೈ 20: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ.
ಫಲಿತಾಂಶ ನೀಡಲು ಪಿಯು ಬೋರ್ಡ್ ಮುಂದೆ ಸವಾಲೊಂದು ಎದುರಾಗಿದ್ದು, ನೋಂದಣಿ ಸಂಖ್ಯೆ ಇಲ್ಲದೇ ಫಲಿತಾಂಶ ನೋಡುವುದು ಹೇಗೆ ಎಂಬ ಗೊಂದಲ ಬಗೆಹರಿಸಲು ಪಿಯು ಬೋರ್ಡ್ ಸ್ಪಷ್ಟನೆ ನೀಡಿದೆ. ಪ್ರತಿ ವರ್ಷ ಪರೀಕ್ಷೆಗೆ ಕೊಟ್ಟ ನೋಂದಣಿ ಸಂಖ್ಯೆ ಮೇಲೆ ಫಲಿತಾಂಶ ಸಿಗುತ್ತಿತ್ತು. ಈ ಬಾರಿ ಪರೀಕ್ಷೆಯಾಗದೆ ರಿಜಿಸ್ಟರ್ ನಂಬರ್ ಸಿಕ್ಕಿಲ್ಲ. ಹೀಗಾಗಿ, ಫಲಿತಾಂಶ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸದಾಗಿ ರಿಜಿಸ್ಟರ್ ನಂಬರ್ ಜನರೇಟ್ ಮಾಡುವ ವ್ಯವಸ್ಥೆ ಮಾಡಲಾಗಿದೆ. Know my number ಆಯ್ಕೆಯನ್ನು ಪಿಯು ವೆಬ್​ಸೈಟ್​ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಬಹುದು. 4.30ರ ಸುಮಾರಿಗೆ ಅಧಿಕೃತವಾಗಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

Karnataka 2nd PUC Result 2021 Live: Results Declared On karresults.nic.in- Check Results, Pass Percentage

ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಅನ್ನು ಖಚಿತಪಡಿಸಿಕೊಳ್ಳುವ ಮೂಲಕ http://karresults.nic.in ವೆಬ್​ಸೈಟ್​ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ಇದಲ್ಲದೆ ವಿದ್ಯಾರ್ಥಿಗಳಿಗೆ ಎಸ್ಎಂಎಸ್ ಮೂಲಕ ದ್ವಿತೀಯ ಪಿಯುಸಿಯ ಫಲಿತಾಂಶ ಲಭ್ಯವಾಗಲಿದೆ .

ಸ್ಯಾಟ್ಸ್‌ನಲ್ಲಿ ನೋಂದಣಿಯಾಗಿರುವ ಮೊಬೈಲ್ ನಂಬರ್‌ಗೆ ಫಲಿತಾಂಶ ಬರಲಿದೆ. ಪಿಯು ಫಲಿತಾಂಶದ ಬಗ್ಗೆ ಅಸಮಧಾನವಿದ್ದರೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.

ಹತ್ತನೇ ತರಗತಿಯಲ್ಲಿ ವಿಷಯವಾರು ಪಡೆದಿದ್ದ ಅಂಕಗಳ ಶೇ.45ರಷ್ಟು ಅಂಕ ಗಳಿಕೆ, ಪ್ರಧಮ ಪಿಯುಸಿ ಪರೀಕ್ಷೆಯಲ್ಲಿ ಗಳಿಸರುವ ಅಂಕದಲ್ಲಿ ಶೇ.45ರಷ್ಟು ಅಂಕವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ.

ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಶೇ.10ರಷ್ಟು ಅಂಕ ಜತೆಗೆ ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳಿಗೆ ಶೇ.5ರಷ್ಟು ಫಲಿತಾಂಶ ನೀಡುತ್ತೇವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

SSLC+1st PUC+ ದ್ವಿತೀಯ ಪಿಯುಸಿ ಕೃಪಾಂಕ ಪರಿಗಣನೆ ಮಾಡಲಾಗಿದೆ. ಅದರಂತೆ, 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​ನಲ್ಲಿ ತೇರ್ಗಡೆ ಆಗಿದ್ದಾರೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಪುನರಾವರ್ತಿತ ಅಭ್ಯರ್ಥಿಗಳ ಫಲಿತಾಂಶ ಕೂಡ ಪ್ರಕಟಿಸಲಾಗುತ್ತಿದೆ, ಕನಿಷ್ಠ ಉತ್ತೀರ್ಣ ಅಂಕ ನೀಡಿ ಪಾಸು ಮಾಡಲಾಗುತ್ತದೆ. 4,50,706 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಒಟ್ಟು 6,65497 ಪರೀಕ್ಷೆ ಬರೆಯಬೇಕಿದ್ದವರು , ಡಿಸ್ಟಿಂಕ್ಷನ್ ಮತ್ತು ಫಸ್ಟ್ ಕ್ಲಾಸ್ - 1,95,650 , ದ್ವಿತೀಯ ದರ್ಜೆ , 1,47, 055ಯಲ್ಲಿ ಉತ್ತೀರ್ಣರಾಗಿದ್ದಾರೆ.

600ಕ್ಕೆ 600 ಅಂಕ ಪಡೆದ ವಿದ್ಯಾರ್ಥಿಗಳು: ದಕ್ಷಿಣ ಕನ್ನಡ ಜಿಲ್ಲೆ 445, ಬೆಂಗಳೂರು ದಕ್ಷಿಣ 302, ಬೆಂಗಳೂರು ಉತ್ತರ 261, ಉಡುಪಿ 149, ಹಾಸನ 104 ವಿದ್ಯಾರ್ಥಿಗಳು.
ವಾಣಿಜ್ಯ ವಿಭಾಗ-2,51,686, ವಿಜ್ಞಾನ, 2,19,777, ಕಲಾ ವಿಭಾಗದಲ್ಲಿ 1,95,304 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಂಖ್ಯೆ 1,47,594 ಇದ್ದರೆ, ನಗರ ಪ್ರದೇಶದಲ್ಲಿ 5,18,903 ವಿದ್ಯಾರ್ಥಿಗಳಿದ್ದಾರೆ.

English summary
Karnataka PUC Results 2021 Live Updates: Results declared on karresults.nic.in. Check latest updates, pass percentage, passing criteria and more updates on 2nd PUC Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X