Breaking: ದ್ವಿತೀಯ ಪಿಯು ಫಲಿತಾಂಶ: ಬಾಲಕಿಯರೇ ಮೇಲುಗೈ, ಒಟ್ಟಾರೆ ಶೇ.61.88 ವಿದ್ಯಾರ್ಥಿಗಳು ಪಾಸ್

ಬೆಂಗಳೂರು, ಜೂ.18: ದ್ವಿತೀಯ ಪಿಯು ಫಲಿತಾಂಶವನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಶನಿವಾರ ಪ್ರಕಟಿಸಿದ್ದು, ಒಟ್ಟಾರೆ 61.88% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣ ಪ್ರಮಾಣ: ಬಾಲಕಿಯರು: ಶೇ.68.72 ಮತ್ತು ಬಾಲಕರು: ಶೇ.55.22 ಇದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

Karnataka 2nd PUC Result 2022 Declared; Here is How to Download Marksheet

ಜಿಲ್ಲಾವಾರು ಮಾಹಿತಿ:
ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.88.02 ವಿದ್ಯಾರ್ಥಿಗಳು ಪಾಸಾಗುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ ಉಡುಪಿ (ಶೇ. 86.38) ಇದ್ದರೆ, ಶೇ.49.31 ವಿದ್ಯಾರ್ಥಿಗಳು ಪಾಸಾಗುವ ಮೂಲಕ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.

ರಾಜ್ಯಕ್ಕೆ ಟಾಪರ್ ಇವರು:
ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆ ಕೂಡ್ಲಿಗು ತಾಲ್ಲೂಕು ಕೊಟ್ಟೂರು ಇಂದು ಇಂಡಿಪೆಂಡೆಂಟ್ ಪಿಯು ಕಾಲೇಜು ವಿದ್ಯಾರ್ಥಿನಿಯರಾದ ಶ್ವೇತಾ ಭೀಮಶಂಕರ್ ಬೈರಗೊಂಡ ಮತ್ತು ಮಡಿವಾಳರ ಸಹನಾ 600ಕ್ಕೆ 594 ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ದಾಸನಪುರದಲ್ಲಿರುವ ಬಿಜಿಎಸ್ ಪಿಯು ಕಾಲೇಜಿನ ನೀಲು ಸಿಂಗ್, ಜಾಲಹಳ್ಳಿಯಲ್ಲಿರುವ ಸೇಂಟ್ ಕ್ಲಾರೆಟ್ ಕಾಂಪೊಸಿಟ್ ಪಿಯು ಕಾಲೇಜು ವಿದ್ಯಾರ್ಥಿ ಆಕಾಶ್ ದಾಸ್, ಚಿಕ್ಕಬಳ್ಳಾಪುರ ಅಗಲಗುರ್ಕಿ ಎಸ್‌ಬಿಜಿಎನ್‌ಎಸ್ ರೂರಲ್ ಕಾಂಪೊಸಿಟ್ ಪಿಯು ಕಾಲೇಜು ವಿದ್ಯಾರ್ಥಿನಿ ನೇಹಾ ಬಿ.ಆರ್. ಮತ್ತು ಜಯನಗರ ಪಿಯು ಕಾಲೇಜಿನ ವಿದ್ಯಾರ್ಥಿ ಮಾನವ್ ವಿಜಯ್ ಕೇಜರಿವಾಲ್ 600ಕ್ಕೆ 596 ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ.

ಇನ್ನು ವಿಜ್ಞಾನ ವಿಭಾಗದಲ್ಲಿ ಬೆಂಗಳೂರು ಜಯನಗರ ಆರ್‌.ವಿ. ಪಿಯು ಕಾಲೇಜಿನ ವಿದ್ಯಾರ್ಥಿನಿ ಸಿಮ್ರಾನ್ ಶೀಷಾ ರಾವ್ 600ಕ್ಕೆ 598 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದ್ದಾರೆ.

ಕಾಲೇಜುವಾರು:

ಕಾಲೇಜುವಾರು ಫಲಿತಾಂಶವನ್ನು ಗಮನಿಸಿದಾಗ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 52.84, ಅನುದಾನಿತ ಪದವಿ ಪೂರ್ವ ಕಾಲೇಜು ಶೇ. 62.05, ಅನುದಾನ ರಹಿತ ಪದವಿ ಪೂರ್ವ ಕಾಲೇಜು 76.50, ಕಾರ್ಪೊರೇಷನ್ ಪದವಿ ಪೂರ್ವ ಕಾಲೇಜು 55.72, ವಿಭಜಿತ ಪದವಿ ಪೂರ್ವ ಕಾಲೇಜು 72.96 ಬಂದಿದೆ.

ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಡೆಯುವುದು ಹೇಗೆ..?

*ಪದವಿಪೂರ್ವ ಅಧಿಕೃತ ವೆಬ್ ಸೈಟ್ http://karresult.nic.in/ ಹೋಗಿ ಕ್ಲಿಕ್ ಮಾಡಿ.

* ಎಸ್‌ಎಸ್‌ಎಲ್‌ಸಿ ಮಾದರಿಯಲ್ಲೇ ಹೊಮ್ ಪೇಜ್ ತೆರೆದುಕೊಂಡು ಪಿಯುಸಿ ರಿಸಲ್ಟ್ ಲಿಂಕ್ ಬ್ಲಿಂಕ್ ಆಗುತ್ತಿರುತ್ತೆ ಅದನ್ನು ಕ್ಲಿಕ್ ಮಾಡಿ.

Recommended Video

      2nd PUC ಫಲಿತಾಂಶ ಪ್ರಕಟ , ಪಾಸ್ ಫೇಲ್ ಲೆಕ್ಕಾಚಾರ | Oneindia Kannada

      * ನೊಂದಣಿ ನಂಬರ್ ಅನ್ನು ಎಂಟ್ರಿ ಮಾಡಿ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿದರೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.

      *ಫಲಿತಾಂಶವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಅಥವಾ ಪ್ರಿಂಟ್ಔಟ್ ತೆಗೆದುಕೊಳ್ಳಬಹುದು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+