2nd PUC Result: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ರಿಸಲ್ಟ್ ನೋಡುವುದೇಗೆ? ಇಲ್ಲಿದೆ ವಿವರ
ಬೆಂಗಳೂರು, ಏಪ್ರಿಲ್ 10: ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಬುಧವಾರ) ಪ್ರಕಟಿಸಲಾಗುತ್ತಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಇಂದು (ಏಪ್ರಿಲ್10) ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಹೌದು, ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ತಿಳಿಸಿದೆ. 11 ಗಂಟೆಗೆ ವೆಬ್ಸೈಟ್ನಲ್ಲಿ ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. 2024ರ ದ್ವಿತೀಯ ಪಿಯುಸಿ ಪರೀಕ್ಷೆಗೆ 6.9 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಅವರಲ್ಲಿ 3.3 ಲಕ್ಷ ವಿದ್ಯಾರ್ಥಿಗಳಾಗಿದ್ದು, 3.6 ಲಕ್ಷ ವಿದ್ಯಾರ್ಥಿನಿಯರು. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯನ್ನ ಮೂರು ಭಾಗಗಳಿಗೆ ಮಾಡಲಾಗಿದೆ.

ಫಲಿತಾಂಶ ಪರಿಶೀಲಿಸುವುದು ಹೇಗೆ ಮತ್ತ ಎಲ್ಲಿ?
* karresults.nic.in ಅಥವಾ pue.kar.nic ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
* ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ.
* ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
* ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ.












Click it and Unblock the Notifications