2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್‌ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ನಡೆಸಿದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಹತ್ವದ ಹಾಗೂ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಶೀಘ್ರದಲ್ಲೇ ಕೇಂದ್ರ ಸರ್ಕಾರದ ಅಧಿಕೃತ ಅಪ್ಲಿಕೇಶನ್ ಆದ 'ಡಿಜಿಲಾಕರ್' (DigiLocker) ನಲ್ಲಿ ಲಭ್ಯವಾಗಲಿದೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿರುವ ಡಿಜಿಲಾಕರ್, "ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ 12ನೇ ತರಗತಿಯ ಫಲಿತಾಂಶ 2026 ಶೀಘ್ರದಲ್ಲೇ ಡಿಜಿಲಾಕರ್‌ನಲ್ಲಿ ಲಭ್ಯವಾಗಲಿದೆ. ಯಾವುದೇ ಸಾಲುಗಟ್ಟಿ ನಿಲ್ಲುವ ಅಗತ್ಯವಿಲ್ಲ, ಯಾವುದೇ ಕಾಗದಪತ್ರಗಳ ಜಂಜಾಟವಿಲ್ಲ. ನಿಮ್ಮ ಫಲಿತಾಂಶಗಳನ್ನು ಅತ್ಯಂತ ಸುರಕ್ಷಿತವಾಗಿ ಪಡೆದುಕೊಳ್ಳಿ. ಶೀಘ್ರವೇ ನಿಮ್ಮ ಅಂಕಗಳನ್ನು ಪರಿಶೀಲಿಸಲು ಸಿದ್ಧರಾಗಿರಿ" ಎಂದು ತಿಳಿಸಿದೆ. ಜೊತೆಗೆ ಹೆಚ್ಚಿನ ಮಾಹಿತಿಗಾಗಿ digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಲು ಸೂಚಿಸಲಾಗಿದೆ.

PUC

ಡಿಜಿಲಾಕರ್‌ನಲ್ಲಿ ಫಲಿತಾಂಶ ಪಡೆಯುವುದರ ಲಾಭಗಳೇನು?

ಸಾಮಾನ್ಯವಾಗಿ ಫಲಿತಾಂಶ ಪ್ರಕಟವಾದ ತಕ್ಷಣ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಸರ್ವರ್ ಸಮಸ್ಯೆ ಉಂಟಾಗಿ ವಿದ್ಯಾರ್ಥಿಗಳು ಪರದಾಡುವುದು ಸಾಮಾನ್ಯ. ಆದರೆ ಡಿಜಿಲಾಕರ್ ಮೂಲಕ ವಿದ್ಯಾರ್ಥಿಗಳು ಯಾವುದೇ ಅಡೆತಡೆಯಿಲ್ಲದೆ, ಸುಲಭವಾಗಿ ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದು ಮತ್ತು ಅದರ ಡಿಜಿಟಲ್ ಪ್ರತಿಯನ್ನು ತಕ್ಷಣವೇ ಡೌನ್‌ಲೋಡ್ ಮಾಡಿಕೊಳ್ಳಬಹುದು. ಇಲ್ಲಿ ಲಭ್ಯವಾಗುವ ಡಿಜಿಟಲ್ ಅಂಕಪಟ್ಟಿಗಳು ಭೌತಿಕ ಅಂಕಪಟ್ಟಿಗಳಿಗೆ (Physical Marksheet) ಸಮನಾದ ಅಧಿಕೃತ ಮಾನ್ಯತೆಯನ್ನು ಹೊಂದಿರುತ್ತವೆ. ಮುಂದಿನ ವ್ಯಾಸಂಗಕ್ಕೆ ಪ್ರವೇಶಾತಿ ಪಡೆಯಲು ಅಥವಾ ಇತರ ಯಾವುದೇ ಅಧಿಕೃತ ಕೆಲಸಗಳಿಗೆ ಈ ಡಿಜಿಟಲ್ ಅಂಕಪಟ್ಟಿಯನ್ನು ನೇರವಾಗಿ ಬಳಸಿಕೊಳ್ಳಬಹುದು. ಶಾಲೆಯಿಂದ ಅಥವಾ ಕಾಲೇಜಿನಿಂದ ಮೂಲ ಅಂಕಪಟ್ಟಿ ಕೈಸೇರುವವರೆಗೂ ಕಾಯುವ ಅಗತ್ಯ ಇರುವುದಿಲ್ಲ.

ಡಿಜಿಲಾಕರ್‌ನಲ್ಲಿ ರಿಸಲ್ಟ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸರಳ ಹಂತಗಳು

ಮೊದಲಿಗೆ ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಗೂಗಲ್ ಪ್ಲೇ-ಸ್ಟೋರ್ ಅಥವಾ ಆಪಲ್ ಆ್ಯಪ್ ಸ್ಟೋರ್‌ನಿಂದ ಅಧಿಕೃತ 'DigiLocker' ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ (ಅಥವಾ ಕಂಪ್ಯೂಟರ್‌ನಲ್ಲಿ digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ).

1. ಆ್ಯಪ್ ತೆರೆದ ನಂತರ, ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಅದಕ್ಕೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಬಳಸಿ 'Sign Up' ಮಾಡಿ. (ಈಗಾಗಲೇ ಖಾತೆ ಇದ್ದರೆ 'Login' ಆಗಿ).

2. ಲಾಗಿನ್ ಆದ ಬಳಿಕ, 'Search' ಆಯ್ಕೆಗೆ ಹೋಗಿ 'Karnataka School Examination and Assessment Board' ಅಥವಾ 'KSEAB' ಎಂದು ಮೊದಲು ಟೈಪ್ ಮಾಡಿ.

3. ಅಲ್ಲಿ ಕಾಣುವ 'Class 12 Passing Certificate' ಅಥವಾ 'Marksheet' ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

4. ಈಗ ನಿಮ್ಮ ದ್ವಿತೀಯ ಪಿಯುಸಿ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪರೀಕ್ಷೆಯ ವರ್ಷವನ್ನು (2026) ಸರಿಯಾಗಿ ನಮೂದಿಸಿ 'Get Document' ಬಟನ್ ಒತ್ತಿ.

5. ತಕ್ಷಣವೇ ನಿಮ್ಮ ದ್ವಿತೀಯ ಪಿಯುಸಿ ಅಂಕಪಟ್ಟಿ ಪರದೆಯ ಮೇಲೆ ಮೂಡುತ್ತದೆ. ಮುಂದಿನ ರೆಫರೆನ್ಸ್‌ಗಾಗಿ ಇದನ್ನು ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಬಹುದು.

ತಂತ್ರಜ್ಞಾನದ ಬಳಕೆಯೊಂದಿಗೆ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಫಲಿತಾಂಶದ ಲಭ್ಯತೆಯನ್ನು ಮತ್ತಷ್ಟು ಸುಗಮ ಹಾಗೂ ಪಾರದರ್ಶಕಗೊಳಿಸಿದೆ. ವಿದ್ಯಾರ್ಥಿಗಳು ಈಗಲೇ ತಮ್ಮ ಡಿಜಿಲಾಕರ್ ಖಾತೆಯನ್ನು ಸಕ್ರಿಯಗೊಳಿಸಿಕೊಂಡು, ಫಲಿತಾಂಶ ಪ್ರಕಟವಾದ ತಕ್ಷಣ ತಮ್ಮ ಅಂಕಗಳನ್ನು ಸುಲಭವಾಗಿ ಪಡೆಯಲು ಸಜ್ಜಾಗುವುದು ಉತ್ತಮ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+