2026ರ ದ್ವಿತೀಯ PUC ಫಲಿತಾಂಶ: ನಗರದ ವಿದ್ಯಾರ್ಥಿಗಳನ್ನು ಹಿಂದಿಕ್ಕಿ ದಾಖಲೆ ಬರೆದ ಗ್ರಾಮೀಣ ಪ್ರತಿಭೆಗಳು

ಬೆಂಗಳೂರು: 2026ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವು ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಹೊಸದೊಂದು ಭರವಸೆ ಮೂಡಿಸಿದೆ. ಸಾಮಾನ್ಯವಾಗಿ ನಗರ ಪ್ರದೇಶದ ವಿದ್ಯಾರ್ಥಿಗಳು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಪರೀಕ್ಷೆಗಳಲ್ಲಿ ಹೆಚ್ಚಿನ ಪೈಪೋಟಿ ನೀಡಿ ಮೇಲುಗೈ ಸಾಧಿಸುವುದು ವಾಡಿಕೆ. ಆದರೆ, ಈ ಬಾರಿಯ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಪ್ರತಿಭೆಗಳು ನಗರದ ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಸಾಧನೆ ಮಾಡಿದ್ದಾರೆ. ಇದು ರಾಜ್ಯದ ಶೈಕ್ಷಣಿಕ ವ್ಯವಸ್ಥೆಯಲ್ಲಿ, ಅದರಲ್ಲೂ ಗ್ರಾಮೀಣ ಮಟ್ಟದಲ್ಲಿ ಆಗುತ್ತಿರುವ ಸಕಾರಾತ್ಮಕ ಬೆಳವಣಿಗೆಯ ಸ್ಪಷ್ಟ ನಿದರ್ಶನವಾಗಿದೆ.

ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಗ್ರಾಮೀಣ ಪ್ರದೇಶದಿಂದ ಒಟ್ಟು 1,99,548 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ ಬರೋಬ್ಬರಿ 1,74,845 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಅತ್ಯುತ್ತಮ ಉತ್ತೀರ್ಣ ಪ್ರಮಾಣವನ್ನು ದಾಖಲಿಸಿದ್ದಾರೆ. ವಿಶೇಷವೆಂದರೆ, ನಗರ ಪ್ರದೇಶದ ವಿದ್ಯಾರ್ಥಿಗಳ ಒಟ್ಟಾರೆ ಉತ್ತೀರ್ಣ ಪ್ರಮಾಣಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣವೇ ಈ ಬಾರಿ ಅಧಿಕವಾಗಿದೆ. ಸೌಲಭ್ಯಗಳ ಕೊರತೆಯ ನಡುವೆಯೂ ಹಳ್ಳಿ ಮಕ್ಕಳು ಮಾಡಿರುವ ಈ ಗಮನಾರ್ಹ ಸಾಧನೆ ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

PUC

ಸರ್ಕಾರಿ ಕಾಲೇಜುಗಳ ಕಮಾಲ್

ಈ ಬಾರಿಯ ಫಲಿತಾಂಶದಲ್ಲಿ ಅತಿ ಹೆಚ್ಚು ಗಮನ ಸೆಳೆಯುತ್ತಿರುವ ಮತ್ತೊಂದು ಅಂಶವೆಂದರೆ ಗ್ರಾಮೀಣ ಭಾಗದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಸಾಧನೆ. ಈ ಬಾರಿ ಸರ್ಕಾರಿ ಕಾಲೇಜುಗಳ ಉತ್ತೀರ್ಣ ಪ್ರಮಾಣದಲ್ಲಿ ಶೇ. 19.10 ರಷ್ಟು ಭಾರಿ ಏರಿಕೆ ಕಂಡುಬಂದಿದೆ. ಲಕ್ಷಾಂತರ ರೂಪಾಯಿ ಡೊನೇಷನ್ ಪಡೆಯುವ ಖಾಸಗಿ ಕಾಲೇಜುಗಳ ಅಬ್ಬರದ ನಡುವೆ ಸರ್ಕಾರಿ ಕಾಲೇಜುಗಳು ಈ ಮಟ್ಟದ ಗುಣಮಟ್ಟದ ಫಲಿತಾಂಶ ನೀಡಿರುವುದು, ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಪೋಷಕರಲ್ಲಿ ಮತ್ತಷ್ಟು ಗಟ್ಟಿಗೊಳಿಸಿದೆ.

ಸಾಧನೆಗೆ ಕಾರಣವೇನು?

ಗ್ರಾಮೀಣ ಭಾಗದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ರಾಜ್ಯ ಸರ್ಕಾರ ಕಳೆದ ಕೆಲವು ವರ್ಷಗಳಿಂದ ಸತತವಾಗಿ ನೀಡುತ್ತಿರುವ ಉತ್ತೇಜನ ಹಾಗೂ ಜಾರಿಗೆ ತಂದಿರುವ ವಿಶೇಷ ಯೋಜನೆಗಳೇ ಈ ಐತಿಹಾಸಿಕ ಬದಲಾವಣೆಗೆ ಮುಖ್ಯ ಕಾರಣ ಎಂದು ವಿಶ್ಲೇಷಿಸಲಾಗಿದೆ. ಗ್ರಾಮೀಣ ಕಾಲೇಜುಗಳಿಗೆ ಮೂಲಸೌಕರ್ಯಗಳ ಒದಗಣೆ, ಪ್ರಮುಖ ವಿಷಯಗಳಿಗೆ ಉಪನ್ಯಾಸಕರ ಕೊರತೆ ನೀಗಿಸಲು ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳು ಹಾಗೂ ವಾರ್ಷಿಕ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ನಡೆಸಿದ ವಿಶೇಷ ತರಗತಿಗಳು ಅತ್ಯುತ್ತಮ ಫಲ ನೀಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+