Get Updates
Get notified of breaking news, exclusive insights, and must-see stories!

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿಗೆ ಪ್ರಥಮ ಸ್ಥಾನ

ಬೆಂಗಳೂರು, ಏ.15: ಪದವಿಪೂರ್ವ ಶಿಕ್ಷಣ ಇಲಾಖೆ ಸೋಮವಾರ ದ್ವಿತೀಯ ಪಿಯುಸಿ ಫಲಿತಾಂಶ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ, ಕೊಡಗು ಮೂರನೇ ಸ್ಥಾನ ಪಡೆದುಕೊಂಡಿದೆ.

2018-19ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಮೊದಲ ಸ್ಥಾನ ಉಡುಪಿ- ಶೇ.92.20 ಎರಡನೇ ಸ್ಥಾನ ದಕ್ಷಿಣ ಕನ್ನಡ ಶೇ. 90.91- ತೃತೀಯ ಸ್ಥಾನ ಕೊಡಗು- 83.31 ಹಾಗೂ ಚಿತ್ರದುರ್ಗ ಕೊನೆಯ ಸ್ಥಾನ ಶೇ.51.42 ರಷ್ಟು ಗಳಿಸಿದೆ.

Karnataka 2nd puc result declared

ಬೆಂಗಳೂರು ಗ್ರಾಮಾಂತರ 10ನೇ ಸ್ಥಾನ, ಬೆಂಗಳೂರು ಉತ್ತರ 11ನೇ ಸ್ಥಾನ, ವಿಕಲಚೇತನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ, ದೃಷ್ಟಿ ವಿಕಲಚೇತನರು ಶೇ. 72ರಷ್ಟು ಫಲಿತಾಂಶ ಪಡೆದಿದ್ದಾರೆ.

Karnataka 2nd puc result declared

94 ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದುಕೊಂಡಿವೆ. ಮೂರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದಿವೆ.

ಗ್ರಾಮಾಂತರ ಭಾಗದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಶೇ. 66.58ರಷ್ಟು ಫಲಿತಾಂಶ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಶೇ.66.39ರಷ್ಟು ಫಲಿತಾಂಶ ಲಭ್ಯವಾಗಿದೆ. ಇನ್ನು ಶೇ.68.24ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ.

80 ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದೆ. ಒಟ್ಟು 6,71,653 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಅದರಲ್ಲಿ 4,14,587 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಒಟ್ಟು 15 ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದೆ. 1 ಅನುದಾನಿತ, 63 ಅನುದಾನ ರಹಿತ ಪದವಿಪೂರ್ವ ಕಾಲೇಜುಗಳು, 1 ವಿಭಜಿತ ಪದವಿಪೂರ್ವ ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದೆ.

54,823 ಮಂದಿ ಡಿಸ್ಟಿಕ್ಷನ್ ಅಲ್ಲಿ ಉತ್ತೀರ್ಣರಾಗಿದ್ದಾರೆ, 2,27,301 ವಿದ್ಯಾರ್ಥಿಗಳು ಪ್ರಥಮ ದರ್ಜೆ, 80,357 ವಿದ್ಯಾರ್ಥಿಗಳು ದ್ವಿತೀಯ ದರ್ಜೆ, 52,106 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಎಲ್ಲಾ ಕಾಲೇಜುಗಳಲ್ಲಿ ಪಿಯು ಫಲಿತಾಂಶ ಏ.16ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು http://pue.kar.nic.in ಮತ್ತು http://www.karresults.nic.in ವೆಬ್​ಸೈಟಿನ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

Karnataka 2nd puc result declared
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+