2015ರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು, ಮೇ 18 : ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ 2015ರ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ. ಶೇ 60.54 ರಷ್ಟು ಫಲಿತಾಂಶ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನಗಳಿಸಿದೆ. ಗದಗ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಬೆಂಗಳೂರಿನಲ್ಲಿ ನಡೆದ ಶೂಟೌಟ್‌ನಲ್ಲಿ ಮೃತಪಟ್ಟ ಗೌತಮಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಗೊಂಡಿದ್ದಾಳೆ.
ಸೋಮವಾರ ಬೆಳಗ್ಗೆ 11.30ಕ್ಕೆ ಮಲ್ಲೇಶ್ವರಂನಲ್ಲಿರುವ ಇಲಾಖೆ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸುಷ್ಮಾ ಗೋಡಬೋಳೆ ಅವರು ಫಲಿತಾಂಶವನ್ನು ಪ್ರಕಟಿಸಿದರು. ಗ್ರಾಮ ಪಂಚಾಯಿತಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಫಲಿತಾಂಶವನ್ನು ಪ್ರಕಟಿಸಲಿಲ್ಲ. [ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ]

ಇಂದು ಆನ್‌ಲೈನ್ ಮೂಲಕ ಫಲಿತಾಂಶ ಪ್ರಕಟಗೊಳ್ಳಲಿದ್ದು, ಮಂಗಳವಾರ ಕಾಲೇಜುಗಳಲ್ಲಿ ಪ್ರಕಟಿಸಲಾಗುತ್ತದೆ. ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. 68.24 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. 53.09 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. [ಫಲಿತಾಂಶ : ಯಾವ ಜಿಲ್ಲೆಗೆ ಯಾವ ಸ್ಥಾನ]
ಯಾವ ಜಿಲ್ಲೆಗೆ ಯಾವ ಸ್ಥಾನ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಶೇ.93.09 ರಷ್ಟು ಫಲಿತಾಂಶ ಪಡೆದು ಮೊದಲ ಸ್ಥಾನ ಪಡೆದಿದೆ. ಉಡುಪಿ ಶೇ. 92.32 ಫಲಿತಾಂಶ ಪಡೆದಿದ್ದು ದ್ವಿತೀಯ ಸ್ಥಾನದಲ್ಲಿದೆ. ಉತ್ತರ ಕನ್ನಡ ಶೇ. 81.19ರಷ್ಟು ಫಲಿತಾಂಶ ಪಡೆದು ಮೂರನೇ ಸ್ಥಾನಗಳಿಸಿದ್ದರೆ. ಶೇ 51.02ರಷ್ಟು ಫಲಿತಾಂಶ ಪಡೆದ ಗದಗ ಕೊನೆಯದಲ್ಲಿದೆ. [ಜೂನ್ 15ರಿಂದ ಪ್ರಥಮ ಪಿಯುಸಿ ತರಗತಿಗಳು ಆರಂಭ]
2015 ಮಾರ್ಚ್ 12ರಿಂದ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. 1017 ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ 6,10,939 ವಿದ್ಯಾರ್ಥಿಗಳ ಪೈಕಿ 3,69,474 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶದಲ್ಲಿ ನಗರ ಭಾಗದ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಸಾಧನೆ ಮಾಡಿದ್ದಾರೆ.
ಫಲಿತಾಂಶದ ಮುಖ್ಯಾಂಶಗಳು :
* ಕಲಾ ವಿಭಾಗ ಶೇ 51.12ರಷ್ಟು ಫಲಿತಾಂಶ
ಪರೀಕ್ಷೆ ಬರೆದವರು 2,30,027 ವಿದ್ಯಾರ್ಥಿಗಳು
ಉತ್ತೀರ್ಣಗೊಂಡವರು 1,17,394 ವಿದ್ಯಾರ್ಥಿಗಳು
* ವಿಜ್ಞಾನ ವಿಭಾಗ ಶೇ 65.19ರಷ್ಟು ಫಲಿತಾಂಶ
ಪರೀಕ್ಷೆ ಬರೆದವರು 1,72,105 ವಿದ್ಯಾರ್ಥಿಗಳು
ಉತ್ತೀರ್ಣರಾದವರು 1,12.148 ವಿದ್ಯಾರ್ಥಿಗಳು
* ವಾಣಿಜ್ಯ ವಿಭಾಗದಲ್ಲಿ ಶೇ 67.06ರಷ್ಟು ಫಲಿತಾಂಶ ಬಂದಿದೆ
ಪರೀಕ್ಷೆ ಬರೆದವರು 2,08,807 ವಿದ್ಯಾರ್ಥಿಗಳು
ಉತ್ತೀರ್ಣರಾದವರು 1,39,932 ವಿದ್ಯಾರ್ಥಿಗಳು
ಗರಿಷ್ಠ ಅಂಕಗಳು : ಕಲಾ ವಿಭಾಗದಲ್ಲಿ ಗರಿಷ್ಠ ಅಂಕ - 579
ವಾಣಿಜ್ಯ ವಿಭಾಗದಲ್ಲಿ ಗರಿಷ್ಠ ಅಂಕ - 593
ವಿಜ್ಞಾನ ವಿಭಾಗದಲ್ಲಿ ಗರಿಷ್ಠ ಅಂಕ - 595
ಜೂನ್ 25ರಿಂದ ಪೂರಕ ಪರೀಕ್ಷೆ : ಉತ್ತರ ಪತ್ರಿಕೆಯ ಫೋಟೋ ಪ್ರತಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮೇ 25. ಮರು ಮೌಲ್ಯಮಾನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮೇ 30. ಜೂನ್ 25ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ.
ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮೇ 27.












Click it and Unblock the Notifications