ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ, ಈಗ ಲಭ್ಯ

Posted By:
Subscribe to Oneindia Kannada

ಬೆಂಗಳೂರು, ಮೇ 11: 2017ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರದಂದು ಪ್ರಕಟವಾಗಿದೆ. ಗುರುವಾರದಿಂದ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ. ಮೇ 12ರಂದು ಕಾಲೇಜುಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಈ ಬಾರಿ ಒಟ್ಟು ಶೇ 52.83 ರಷ್ಟು ಫಲಿತಾಂಶ ಬಂದಿದೆ. ಕಳೆದ ಬಾರಿ57.20% ಫಲಿತಾಂಶ ಬಂದಿತ್ತು.[ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 24 ಕೊನೆ ದಿನ]

Karnataka 2nd PUC results 2017 out Check Online Now

ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಬುಧವಾರ ಬೆಳಗ್ಗೆ 10.30ಕ್ಕೆ ಪತ್ರಿಕಾಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಫಲಿತಾಂಶವನ್ನು ಪ್ರಕಟಿಸಿದರು.[ಜಿಲ್ಲಾವಾರು ಫಲಿತಾಂಶ: ಉಡುಪಿ ಫಸ್ಟ್ , ಬೀದರ್ ಲಾಸ್ಟ್]

Karnataka 2nd PUC results 2017 out Check Online Now

ಸರ್ಕಾರಿ ವೆಬ್‌ ಸೈಟ್‌ಗಳಲ್ಲಿ ಮಾತ್ರ ಫಲಿತಾಂಶ ಲಭ್ಯವಿದೆ. ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ:
http://karresults.nic.in
http://pue.kar.nic.in
http://results.gov.in
http://examresults.net

ಈ ಬಾರಿಯ ಫಲಿತಾಂಶದಲ್ಲಿ ಬಾಲಕಿಯರು(60.28%) ಮೇಲುಗೈ ಸಾಧಿಸಿದ್ದಾರೆ. 44.74% ಬಾಲಕರು ಉತ್ತೀರ್ಣ. ಉಡುಪಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ. ಉತ್ತರ ಕನ್ನಡ ಜಿಲ್ಲೆ ಮೂರನೇ ಸ್ಥಾನ, ಬೀದರ್ ಜಿಲ್ಲೆಗೆ ಕೊನೆಯ ಸ್ಥಾನ.

Karnataka 2nd PUC results 2017 out Check Online Now

ಮಾರ್ಚ್ 9 ರಿಂದ 27 ರವರೆಗೆ 998 ಪರೀಕ್ಷಾ ಕೇಂದ್ರಗಳ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಒಟ್ಟು 6.84 ಲಕ್ಷ ವಿದ್ಯಾರ್ಥಿ/ನಿಯರು ಪರೀಕ್ಷೆ ಬರೆದಿದ್ದರು.

ಪೂರ್ಣ ಪ್ರಮಾಣದ ಫಲಿತಾಂಶ ಇಲ್ಲಿ ಡೌನ್ ಲೋಡ್ ಮಾಡಿಕೊಳ್ಳಿ:


(ಒನ್ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka 2nd PUC exam result 2017 announced. Primary and Secondary Education Tanveer Sait announced result On Thursday, May 11, 2017.
Please Wait while comments are loading...