ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಪಿಯುಸಿ : ಶೇ.100 ಹಾಗೂ ಶೂನ್ಯ ಫಲಿತಾಂಶ ಪಡೆದ ಕಾಲೇಜುಗಳು

|
Google Oneindia Kannada News

ಬೆಂಗಳೂರು, ಏ.15: ಪ್ರಸಕ್ತ ಸಾಲಿನ ದ್ವಿತೀಯ ಪಿಯು ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಸೋಮವಾರ(ಏ.15)ರಂದು ಪ್ರಕಟಿಸಿದೆ.

ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಶಿಖಾ ಮಾಹಿತಿ ನೀಡಿರುವ ಪ್ರಕಾರ ರಾಜ್ಯದ ಒಟ್ಟು 80 ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದ್ದು, ಒಟ್ಟು 98 ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದುಕೊಂಡಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿಗೆ ಪ್ರಥಮ ಸ್ಥಾನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿಗೆ ಪ್ರಥಮ ಸ್ಥಾನ

ಒಟ್ಟು 15 ಸರ್ಕಾರಿ ಪದವಿಪೂರ್ವ ಕಾಲೇಜುಗಳು ಶೇ.100ರಷ್ಟು ಫಲಿತಾಂಶ ಹಾಗೂ 3 ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದುಕೊಂಡಿದೆ.ಅನುದಾನಿತ ಪದವಿಪೂರ್ವ ಕಾಲೇಜುಗಳ ಪೈಕಿ 1 ಕಾಲೇಜು ಶೇ.100ರಷ್ಟು ಫಲಿತಾಂಶ ಹಾಗೂ 1 ಕಾಲೇಜು ಶೂನ್ಯ ಫಲಿತಾಂಶ ಪಡೆದಿದೆ.

karnataka 2nd puc results 2019 80 colleges have got 100 percent results

ಅನುದಾನ ರಹಿತ ಕಾಲೇಜುಗಳ ಪೈಕಿ 63 ಕಾಲೇಜುಗಳು ಶೇ.100ರಷ್ಟು ಫಲಿತಾಂಶ 94 ಕಾಲೇಜುಗಳಿಗೆ ಶೂನ್ಯ ಫಲಿತಾಂಶ ಬಂದಿದೆ.ಇನ್ನು ವಿಭಜಿತ ಪದವಿಪೂರ್ವ ಕಾಲೇಜುಗಳ ಪೈಕಿ ಒಂದು ಕಾಲೇಜು ಶೇ.100ರಷ್ಟು ಫಲಿತಾಂಶ ಪಡೆದಿದೆ.

ಪ್ರಸಕ್ತ ಸಾಲಿನಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ಮಾರ್ಚ್​ನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದರು. ಇವರಲ್ಲಿ 1.94 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಒಟ್ಟು 6,71,653 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಅದರಲ್ಲಿ 4,14,587 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

English summary
Karnataka 2nd puc results 2019: A total of 80 colleges have got 100 percent results while 98 colleges have scored zero percent results.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X