ಜುಲೈ 14 ರಂದು ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು, ಜುಲೈ 13: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 14 ರಂದು ಬೆಳಗ್ಗೆ 11.30ಕ್ಕೆ ಪ್ರಕಟಗೊಳ್ಳಲಿದೆ.

Recommended Video

      C T ರವಿಗೂ ತಗುಲಿದ ಕೊರೊನ | Oneindia kannada

      ಒಟ್ಟು 5.95 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿದ್ದಾರೆ.ಏಪ್ರಿಲ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಬಾಕಿ ಉಳಿದಿದ್ದ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಜೂನ್‌ನಲ್ಲಿ ನಡೆಸಲಾಯಿತು.

      ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ 13,528 ಹೆಚ್ಚುವರಿ ಕೊಠಡಿಗಳ ವ್ಯವಸ್ಥೆ ಮಾಡಲಾಗಿತ್ತು. ಲಾಕ್‌ಡೌನ್‌ಗೂ ಮುನ್ನ 23,064 ಕೊಠಡಿಗಳಲ್ಲಿ ಪರೀಕ್ಷೆ ನಡೆದಿದ್ದವು.

      Karnataka 2nd PUC Results 2020 To Be Announced Tomorrow At 11.30 AM; Here Is How To Check

      2019ರ ಪಿಯು ಫಲಿತಾಂಶದ ಪ್ರಕಾರ ಶೇ.61.73 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಶೇ.66.58ರಷ್ಟು ವಿಜ್ಞಾನ ವಿದ್ಯಾರ್ಥಿಗಳು, ಶೇ.66.39ರಷ್ಟು ವಾಣಿಜ್ಯ ವಿದ್ಯಾರ್ಥಿಗಳು, ಶೇ.50.53ರಷ್ಟು ಕಲಾ ವಿಭಾಗದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.

      ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕೊವಿಡ್‌ ಬಿಕ್ಕಟ್ಟಿನ ನಡುವೆಯೇ ನಡೆಸುವುದರಲ್ಲಿ ಸರ್ಕಾರ ಯಶಸ್ವಿಯಾಗಿದೆ.

      ನಾಳೆ ಅಧಿಕೃತ ಫಲಿತಾಂಶ ಪ್ರಕಟಣೆಯ ಬಳಿಕ ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಸಂದೇಶ ರವಾನೆಯಾಗುವುದು. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನಾಳೆ ಮಧ್ಯಾಹ್ನ 12 ಗಂಟೆಯ ಬಳಿಕ ಸರ್ಕಾರದ ಅಧಿಕೃತ ಜಾಲತಾಣ www.karresults.nic.in ಗಳಲ್ಲಿಯೂ ಸಹ ವೀಕ್ಷಿಸಬಹುದೆಂದು ದಿನಾಂಕ 04.03.2020 ರಿಂದ 21.03.2020 ರವರೆಗೆ ವಿವಿಧ ವಿಷಯಗಳ ಪರೀಕ್ಷೆಗಳು ನಡೆದಿದ್ದು ನಂತರ ಕೊವಿಡ್-19 ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ದಿನಾಂಕ 18.06.2020 ರಂದು ಆಂಗ್ಲಭಾಷೆಯ ಪರೀಕ್ಷೆಗಳನ್ನು ನಡೆಸಿದ್ದನ್ನು ಸ್ಮರಿಸಬಹುದು.

      ಸುಮಾರು 6.75 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ನಾಳೆ ಹೊರಬೀಳಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ವಿದ್ಯಾರ್ಥಿಗಳ ಮೊಬೈಲ್‌ನಲ್ಲಿಎಸ್‌ಎಂಎಸ್ ಮೂಲಕವೂ ಫಲಿತಾಂಶ ಬರಲಿದೆ.

      ಜುಲೈ 14 ರಂದು ಬುಧವಾರ ಬೆಳಗ್ಗೆ 11.30ಕ್ಕೆ ಫಲಿತಾಂಶ ಹೊರಬರಲಿದೆ.

      -ಫಲಿತಾಂಶವು kseeb.nic.in ಹಾಗೂ result.bspucpa.com ಹಾಗೆಯೇ SuVidya ಪೋರ್ಟಲ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ.

      -ಮೊದಲು ನಿಮ್ಮ ರೋಲ್‌ ನಂಬರ್ ರಿಜಿಸ್ಟರ್ ಮಾಡಿ, ಪೂರ್ಣ ಹೆಸರು ಬರೆಯಿರಿ, ಮೊಬೈಲ್ ನಂಬರ್, ಇ-ಮೇಲ್, ಗಂಡು/ಹೆಣ್ಣು, ಫ್ಯೂಚರ್ ಇಂಟರೆಸ್ಟ್ ಯಾವುದು ಎಂದು ಬರೆದು ರಿಜಿಸ್ಟರ್ ಮಾಡಿದರೆ ಫಲಿತಾಂಶ ಬಂದ ಬಳಿಕ ನಿಮಗೆ ಅಲರ್ಟ್ ಬರುತ್ತದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+